ಎಂಜಿನಿಯರಿಂಗ್ ಕೋರ್ಸ್: ಕೆಲ ವಿಶೇಷ ಕೊಡುಗೆ
ತಿಪಟೂರು: ನಗರದ ಶ್ರೀ ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶದಲ್ಲಿ ವಿದ್ಯಾರ್ಥಿಗಳಿಗೆ ಕೆಲವು ವಿಶೇಷ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಆಡಳಿತಾಧಿಕಾರಿ ಹಾಲಪ್ಪ ತಿಳಿಸಿದ್ದಾರೆ. ಈ ಕಾಲೇಜು 5ನೇ ವರ್ಷದಲ್ಲಿ ಯಶಸ್ವಿಯಾಗಿ ಕಾಲಿಡುತ್ತಿದ್ದು 2013-14ನೇ ಶೈಕ್ಷಣಿಕ ವರ್ಷದಲ್ಲಿ ಬಿ.ಇ.ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಎಂಜಿನಿಯರಿಂಗ್ ಕೋರ್ಸ್ಗಳಿಗೆ ಪಿಯುಸಿ ಹಾಗೂ ಡಿಪ್ಲೊಮ ಪಾಸಾದ ಅರ್ಹ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕೆಲವು ವಿಶೇಷ ರಿಯಾಯಿತಿ ಹಾಗೂ ಉಚಿತ ಶಿಕ್ಷಣ ನೀಡುವ ಕೊಡುಗೆಗಳನ್ನು ನೀಡಲಾಗುತ್ತಿದೆ. ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಇಬ್ಬರು ಪಿ.ಯು.ಸಿ ಹೆಣ್ಣು ಮಕ್ಕಳಿಗೆ ನಮ್ಮ ಎಂಜಿನಿಯರಿಂಗ್ ಕಾಲೇಜಿನಲ್ಲಿ ಉಚಿತವಾಗಿ ಪ್ರವೇಶವನ್ನು ನೀಡಲು ಆಡಳಿತ ಮಂಡಳಿ ತೀರ್ಮಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಆಡಳಿತಾಧಿಕಾರಿಗಳನ್ನು ಅಥವಾ 08134-255296, ಮೊ.9845187579 ಸಂಪರ್ಕಿಸಬಹುದು.
ಪರವಾನಗಿ ಇಲ್ಲದೆ ಮದ್ಯ ಮಾರಾಟ: ಸಜೆ
ತುಮಕೂರು: ರಹದಾರಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ಹಾಗೂ 10ಸಾವಿರ ದಂಡ ವಿಧಿಸಿ 2ನೇ ಅಧಿಕ ಸಿವಿಲ್ ಜಡ್ಜ್ ಮತ್ತು 3ನೇ ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಫೈರೋಜಾ ಹೆಚ್. ಹುಕಾಲಿ ಅವರು ತೀರ್ಪು ನೀಡಿದ್ದಾರೆ. ಮಹದೇವ ಬಿನ್ ಚಿಕ್ಕರಂಗಯ್ಯ ಶಿಕ್ಷೆಗೊಳಗಾದ ಆರೋಪಿ. ಸೆಪ್ಟೆಂಬರ್ 26, 2007 ರಂದು ರಾತ್ರಿ 9 ಗಂಟೆ ಸಮಯದಲ್ಲಿ ತುಮಕೂರು ನಗರದ ದಾಸಮುದ್ದಯ್ಯನ ಪಾಳ್ಯದಲ್ಲಿರುವ ಮಹದೇವ ಮನೆ ಹತ್ತಿರ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ಸ್ಥಳಕ್ಕೆ ಬಂದು ನೋಡಲಾಗಿ ಆರೋಪಿಯು ಒಂದು ರಟ್ಟಿನ ಪೆಟ್ಟಿಗೆಯಲ್ಲಿ ಮದ್ಯದ ಬಾಟಲುಗಳನ್ನು ಇಟ್ಟುಕೊಂಡು ಕುಳಿತಿದ್ದು, ಹಿಡಿದು ವಿಚಾರಿಸಲಾಗಿ ಪೆಟ್ಟಿಗೆಯಲ್ಲಿ 180 ಮಿಲಿಯ ವಿಸ್ಕಿಯ ಹಲವಾರು ಬಾಟಲ್ಗಳು ಇರುವುದು ಕಂಡು ಬಂದಿತ್ತು. ರಹದಾರಿ ಇದೆಯೇ ಎಂದು ಕೇಳಲಾಗಿ ಯಾವುದೂ ಇರುವುದಿಲ್ಲವೆಂದು ತಿಳಿಸಿದ್ದು, ಆರೋಪಿಯ ವಿರುದ್ಧ ಜಿ. ವಿವೇಕ್ ಅಬಕಾರಿ ಉಪನಿರೀಕ್ಷಕರು, ಜಾರಿ ಮತ್ತು ತನಿಖೆ, ತುಮಕೂರು ಅವರು ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 2ನೇ ಅಪರ ಸಿ.ಜೆ.(ಕಿ.ವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರಾದ ಫೈರೋಜಾ ಹೆಚ್. ಹುಕಾಲಿ ಅವರು ಆರೋಪಿ ವಿರುದ್ದ ಆರೋಪ ಸಾಬೀತಾದ ಕಾರಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸಹಾಯಕ ಸರ್ಕಾರಿ ಅಭಿಯೋಜಕರಾದ ಎ.ಆರ್. ಸತೀಶ್ಗೌಡ ಅವರು ಸರ್ಕಾರದ ಪರ ವಾದ ಮಂಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

