ಸುದ್ದಿ ಸಂಕ್ಷೇಪ
ಅರ್ಜಿ ಆಹ್ವಾನ
ತುಮಕೂರು: ಜಿಲ್ಲಾ ಲೋಕಶಿಕ್ಷಣ ಸಮಿತಿ, ಜಿಪಂ, ತುಮಕೂರು ವತಿಯಿಂದ ಸಾಕ್ಷರ ಭಾರತ್-2012 ಕಾರ್ಯಕ್ರಮದಡಿ ಕಾರ್ಯಕ್ರಮದ ಅವಧಿಗೆ ಸೀಮಿತಗೊಂಡಂತೆ, ಸರ್ಕಾರೇತರ ಇಬ್ಬರು ಜಿಲ್ಲಾ ಸಂಯೋಜಕರಾಗಿ ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ ಸ್ವಯಂಸೇವಾ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತರಿಂದ ಸ್ವವಿವರಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಮಹಿಳೆಯರಾಗಿದ್ದು, ಪದವೀಧರರಾಗಿರಬೇಕು. ಕಂಪ್ಯೂಟರ್ ಜ್ಞಾನ ಹಾಗೂ ಸಾಕ್ಷರತಾ ಕಾರ್ಯಕ್ರಮಗಳಲ್ಲಿ ಅನುಭವವುಳ್ಳವರಾಗಿರಬೇಕು. ಕನಿಷ್ಠ 22 ರಿಂದ ಗರಿಷ್ಠ 45 ವಯೋವಾನದವರಾಗಿರಬೇಕು. ಸ್ವ-ವಿವರಗಳನ್ನು ಸಲ್ಲಿಸಬಯಸುವವರು ಜಿಲ್ಲಾ ಲೋಕಶಿಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್ ಆವರಣ, ತುಮಕೂರು ರವರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ದೂ.ವಾ.0816-2272203 ಸಂಪರ್ಕಿಸಬಹುದಾಗಿದೆ.
ಜಾಗೃತಿ ಜಾಥಾ
ಚಿಕ್ಕಬಳ್ಳಾಪುರ: ಅಂಗವಿಕಲರಿಗೆ ಶಿಕ್ಷಣ ಕೊಡಿಸುವುದರ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಾಲಾ ಮಕ್ಕಳು ನಗರದಲ್ಲಿ ಜಾಥಾ ನಡೆಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿಯ ಸಂಯುಕ್ತಾಶ್ರಯದಲ್ಲಿ ನಡೆದ ಜಾಥಾದಲ್ಲಿ ಶಾಲಾ ಮಕ್ಕಳು ಅಂಗವಿಕಲರಿಗೆ ಶಿಕ್ಷಣವನ್ನು ಕೊಡಿಸಿ ಎಂಬ ಭಿತ್ತಿ ಫಲಕಗಳನ್ನು ಹಿಡಿದು ಘೋಷಣೆಗಳೊಂದಿಗೆ ಸಾಗಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ಡಾ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಜಾಥಾ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಅಜಿತ್ ಪ್ರಸಾದ್ ಚಾಲನೆ ನೀಡಿದರು. ವಿಕಲಚೇತನರ ಏಳಿಗೆಗಾಗಿ ಸರ್ಕಾರ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದ್ದರೂ, ಬಹಳಷ್ಟು ವಿಕಲಚೇತನ ಮಕ್ಕಳಿಗೆ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ. ನಮ್ಮಲ್ಲಿ ಅನೇಕರು ಸಮಭಾವ ಹಾಗೂ ಸಹಾನೂಭೂತಿ ಆಧಿಕಾರಿಗಳಿದ್ದು, ಈ ಸೌಲಭ್ಯಗಳನ್ನು ವಿಕಲಚೇತನರಿಗೆ ತಲುಪಿಸುತ್ತಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಈ ಕಾಯ್ದೆಗಳನ್ನು ಅನುಷ್ಠಾನ ತರುವಲ್ಲಿ ಹೆಚ್ಚಿನ ಕೆಲಸಗಳು ಇನ್ನೂ ಆಗಬೇಕಾಗಿದೆ ಎಂದರು. ಸಾಮಾನ್ಯ ಮಕ್ಕಳ ಜೊತೆಯಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೂ ಸಾಮಾನ್ಯ ಶಾಲೆಯಲ್ಲಿ ಸಾಮಾನ್ಯ ಶಿಕ್ಷಕರಿಂದಲೇ ನೀಡುವ ಶಿಕ್ಷಣವೇ ಸಮನ್ವಯ ಶಿಕ್ಷಣ. ಸಮನ್ವಯ ಶಿಕ್ಷಣದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳು ಶಾಲೆಯ ಅವಿಭಾಜ್ಯ ಅಂಗವಾಗಿದ್ದಾರೆ ಎಂದರು. ಶಿಕ್ಷಣದಿಂದ ಮಗುವಿನ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಸಹಕಾರಿಯಾಗುವುದರಿಂದ ವಿಕಲಚೇತನ ಮಕ್ಕಳ ಶಾಲಾ ದಾಖಲಾತಿಯನ್ನು ಮಾಡಲು ಪೋಷಕರಿಗೆ ಮತ್ತು ಸಮುದಾಯದ ಜನರಿಗೆ ಅರಿವು ಮೂಡಿಸಬೇಕೆಂದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಫರಿಸ್ತಾ, ಚಂದ್ರಶೇಖರ್ ಬಾಬು, ರಘುನಾಥ ರೆಡ್ಡಿ, ನಾಗಭೂಷಣ್,ಮುನಿನಾರಾಯಣ್ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

