ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕೆಜೆಪಿ ಪ್ರತಿಭಟನೆ
ಕ.ಪ್ರ. ವಾರ್ತೆ ತುಮಕೂರು ಜೂ.21
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಿನೇ ದಿನೆ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಿವೆ ಎಂದು ಆರೋಪಿಸಿ ತುಮಕೂರು ನಗರ ಕೆಜೆಪಿ ಘಟಕದ ವತಿಯಿಂದ ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಹೊರೆ ಹಾಕಿವೆ. ಜತೆಗೆ ಕೇಂದ್ರ ಸರ್ಕಾರ ನಿಯಮಿತವಾಗಿ ಪೆಟ್ರೋಲ್, ಡೀಸೆಲ್ ಏರಿಕೆ ಮಾಡಿರುವುದರಿಂದ ಜನಸಾಮಾನ್ಯರು ಜೀವನ ನಡೆಸಲು ದುಸ್ತರವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಮಧ್ಯಮ ವರ್ಗದವರು ಹಾಗೂ ಬಡ ಮಧ್ಯಮ ವರ್ಗದವರು ದೈನಂದಿನ ಪ್ರಯಾಣ ಮಾಡುವ ರಾಜ್ಯ ರಸ್ತೆ ಸಾರಿಗೆ ದರವನ್ನು ಏರಿಕೆ ಮಾಡಿ ಪ್ರಯಾಣಿಕರಿಗೆ ಆಘಾತ ನೀಡಿದೆ. ರಾಜ್ಯ ಸರ್ಕಾರವು ತನ್ನ ಯೋಜನೆಗಳನ್ನು ಜಾರಿಗೊಳಿಸುವ ಅತುರದಲ್ಲಿ ರಾಜ್ಯ ಬೊಕ್ಕಸಕ್ಕೆ ಆಗುವ ನಷ್ಟವನ್ನು ಜನಸಾಮಾನ್ಯರ ಮೇಲೆ ಹೇರಲು ಹೊರಟಿದೆ ಎಂದು ಕಿಡಿಕಾರಿದರು.
ಎ.ಪಿ.ಎಲ್. ಪಡಿತರ ಕಾರ್ಡ್‌ದಾರರಿಗೆ ಸರ್ಕಾರ ಯಾವುದೇ ಸವಲತ್ತುಗಳನ್ನು ನೀಡದೇ ಅನ್ಯಾಯವೆಸಗಿದೆ. ಪಡಿತರ ಕಾರ್ಡ್‌ಗಳ ಹಂಚಿಕೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂದು ಪ್ರತಿಭಟನಾನಿರತ ಕೆಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ತುಮಕೂರು ಸಂಸದ ಜಿ.ಎಸ್. ಬಸವರಾಜ್ ಅವರು, ಈ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಏರಿಸಿರುವ ಬೆಲೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಕೆಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕರವರು ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿವೆ. ಬಡವ, ಮಧ್ಯಮ, ಕೆಳಮಧ್ಯಮ ವರ್ಗದ ಜನತೆ ಸೋತು ಹೋಗಿದ್ದಾರೆ. ಸತತವಾಗಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಸಲಾಗುತ್ತಿದೆ. ಇದೇ ರೀತಿ ಮುಂದುವರೆದರೆ ಸಾಮಾನ್ಯ ಜನರು ಬೀದಿಗೆ ಇಳಿದು ಪ್ರತಿಭಟನೆ ಮಾಡಬೇಕಾದ ದಿನ ದೂರವಿಲ್ಲ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಗನಾಯ್ಕ್, ರವೀಶಯ್ಯ, ನಗರಾಧ್ಯಕ್ಷ ಕೊಪ್ಪಳ್ ನಾಗರಾಜು, ಧನಿಯಕುಮಾರ್ ಮುಂತಾದವರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

