ತಾತ್ಕಾಲಿಕ ಶಿಕ್ಷಕರಿಗೆ ಕನಿಷ್ಠ 10 ಸಾವಿರ ಗೌರವ ಧನ ನೀಡಿ
ಕ.ಪ್ರ. ವಾರ್ತೆ ಕೊರಟಗೆರೆ ಜೂ.21
ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ತಾತ್ಕಾಲಿಕ ಶಿಕ್ಷಕರನ್ನು ಸರ್ಕಾರ ನೇಮಕ ಮಾಡಿಕೊಳ್ಳುವ ನಿರ್ಧಾರ ಸ್ವಾಗತಾರ್ಹವಾಗಿದ್ದು ಸದರಿ ಶಿಕ್ಷಕರಿಗೆ ಕನಿಷ್ಠ 10 ಸಾವಿರ ರು. ಗೌರವಧನ ನೀಡಬೇಕೆಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಒತ್ತಾಯಿಸಿದರು.
ಅವರು ಪಟ್ಟಣದ ಕಾಳಿದಾಸ ಪ್ರೌಢಶಾಲೆಗೆ ಭೇಟಿ ನೀಡಿ ಶಿಕ್ಷಕರ ಸಮಸ್ಯೆ ಆಲಿಸಿ ನಂತರ ಮಾತನಾಡಿದರು.
ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ 16 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇದ್ದು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳಲ್ಲಿ ಪಾಠ ಪ್ರವಚನಕ್ಕೆ ತೊಂದರೆಯಾಗದಂತೆ ಕೊರತೆ ನೀಗಿಸಲು ತುರ್ತಾಗಿ 12 ಸಾವಿರ ತಾತ್ಕಾಲಿಕ ಶಿಕ್ಷಕರನ್ನು ನೇವಿಸಿಕೊಳ್ಳಲು ನಿರ್ಧರಿಸಿರುವ ರಾಜ್ಯ ಸರ್ಕಾರ ಗೌರವಧನವಾಗಿ ಕನಿಷ್ಠ 10 ಸಾವಿರ ರು. ನೀಡಬೇಕು ಎಂದು ಒತ್ತಾಯಿಸಿದರು.
ಶಾಲೆಗಳು ಪ್ರಾರಂಭವಾಗಿ ಒಂದು ತಿಂಗಳು ಮುಗಿಯುತ್ತಿದ್ದರೂ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಮವಸ್ತ್ರ ಮತ್ತು ಪಠ್ಯ ಪುಸ್ತಕಗಳು ಸರಬರಾಜು ಮಾಡದೆ ಇದ್ದು, ತಕ್ಷಣ ಸರಬರಾಜು ಮಾಡುವಂತೆ ಆಗ್ರಹಿಸಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ ಸ್ಥಗಿತಗೊಂಡಿದ್ದು ಶಾಲೆಗಳಿಗೆ ಸರಬರಾಜು ಮಾಡಿರುವ
ಕಂಪ್ಯೂಟರ್ಗಳು ತುಕ್ಕು ಹಿಡಿದು ಹಾಳಾಗುತ್ತಿದ್ದು ಸರ್ಕಾರ ಇದರ ಬಗ್ಗೆ ಗಮನಹರಿಸಿ ಕಂಪ್ಯೂಟರ್ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಿದರು.
ಹಿಂದಿನ ಸರ್ಕಾರ 94-95 ನೇ ಸಾಲಿನವರೆಗೂ ಖಾಸಗಿ ಶಾಲೆಗಳಿಗೆ ಅನುದಾನ ನೀಡುವ ಆದೇಶವಿದ್ದು ಅದನ್ನು ರಾಜ್ಯ ಸರ್ಕಾರ ಮುಂದುವರಿಸುವ ಜತೆಗೆ ಹಾಗೂ ಮುಂದಿನ ತಿಂಗಳಲ್ಲಿ ನೀಡುವ ಬಜೆಟ್ನಲ್ಲಿ 2000 ದ ವರೆಗೂ ಪ್ರಾರಂಭವಾಗಿರುವ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಂತೆ, 2008 ಡಿಸೆಂಬರ್ ವರೆಗೂ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.
ಖಾಸಗಿ ಅನುದಾನಿತ ಜೆ.ಓ.ಸಿ ಶಿಕ್ಷಕರನ್ನು ಖಾಯಂ ಶಿಕ್ಷಕರಾಗಿ ನೇಮಕ ಮಾಡಿಕೊಳ್ಳುವ ಆದೇಶ ನೀಡಬೇಕು, ಸರ್ಕಾರಿ ಪ್ರೌಢಶಾಲೆಗಳ ಸಹ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜುಗಳಿಗೆ ಉಪನ್ಯಾಸಕರಾಗಿ ಬಡ್ತಿ ನೀಡಬೇಕು. ನೌಕರರಿಗೆ ನೀಡುತಿರುವ ವೈದ್ಯಕೀಯ ಭತ್ಯೆಯನ್ನು ಪ್ರತಿ ತಿಂಗಳು ದೂರೆಯುವಂತೆ ಆದೇಶ ನೀಡಬೇಕು, ಹಾಗೂ ಸರ್ಕಾರಿ ಮತ್ತು ಖಾಸಗಿ ಶಾಲೆಗಳೆಂಬ ತಾರತಮ್ಯ ಹೋಗಲಾಡಿಸಿ ಸಮಾನ ಸವಲತ್ತುಗಳನ್ನು ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಕಿರಿಯ ಕಾಲೇಜಿಗೆ ಭೇಟಿ ನೀಡಿ ಶಿಕ್ಷಕರ ಸಮಸ್ಯ ಆಲಿಸಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಅವರು ಅಕ್ಷರ ದಾಸೋಹಕ್ಕೆ ಶಾಲೆಗಳಲ್ಲಿ ಸಮರ್ಪಕ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೀರಕ್ಯಾತರಾಯ, ಸಕ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್, ಹಿರಿಯ ಶಿಕ್ಷಕ ಬಿ. ಹನುಮಂತರೆಡ್ಡಿ, ಮುಖ್ಯ ಶಿಕ್ಷರರಾದ ಶಶಿಕಲಾ, ಪಾಂಡುರಂಗಯ್ಯ ಶಿಕ್ಷಕರ ಸಂಘದ ಪದಾದಿಕಾರಿಗಳಾದ ಭೋಮಣ್ಣ, ಸಚ್ಚಿದಾನಂದ, ಎನ್. ಪದ್ಮನಾಭ್, ವೈ.ಸಿ.ವಿ. ಸ್ವಾಮಿ. ನರಸಿಂಹಮೂರ್ತಿ, ಕೆ.ವಿ.ತಿಮ್ಮಾಜಮ್ಮ, ಡಿ.ರಂಗಸ್ವಾಮಿ, ಸೇರಿದಂತೆ ಇನ್ನಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

