ವಿವಿಧ ವೃತ್ತಿಗಳ ಪ್ರವೇಶಕ್ಕೆ ಆಹ್ವಾನ
ತುಮಕೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು 2013-14ನೇ ಸಾಲಿಗೆ ಐ.ಎಂ.ಸಿ. ಅಡಿಯಲ್ಲಿ ಇರುವ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 29. ಹೆಚ್ಚಿನ ಮಾಹಿತಿಗೆ ಪ್ರಾಚಾರ್ಯರು, ಸರ್ಕಾರಿ ಐಟಿಐ, ತುಮಕೂರು ಇವರನ್ನು ಸಂಪರ್ಕಿಸಬಹುದು.
ಗ್ರಾಮ ಸಹಾಯಕ ಸಂಘದಿಂದ ಶಾಸಕರಿಗೆ ಸನ್ಮಾನ
ತಿಪಟೂರು: ನಗರದ ತಾಲೂಕು ಕಚೇರಿಯ ಆವರಣದಲ್ಲಿ ನೂತನ ಶಾಸಕರಾದ ಕೆ.ಷಡಕ್ಷರಿಯವರಿಗೆ ಗ್ರಾಮ ಸಹಾಯಕ ಸಂಘದ ವತಿಯಿಂದ ಸಂಘದ ತಾಲೂಕು ಅಧ್ಯಕ್ಷರಾದ ನಾರಾಯಣಪ್ಪನವರ ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸುಮಾರು 33 ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಗ್ರಾಮ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ಸುಮಾರು 10 ಸಾವಿರದ 450 ಜನ ಗ್ರಾಮಸಹಾಯಕರ ಕಾಯಂಗಾಗಿ ಶಾಸಕರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು ಮುಂಬರುವ ಅಧಿವೇಶನದಲ್ಲಿ ಇದರ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ವಾಲ್ಮೀಕಿ ಸಂಘದ ರಾಜ್ಯಾಧ್ಯಕ್ಷ ಹಾಗೂ ಸಂಘದ ಗೌರವಾಧ್ಯಕ್ಷರಾದ ಪ್ರತಾಪ್ ಮದಕರಿ, ರಾಜ್ಯ ಮಾದಿಗ ದಂಡೋರ ಸಮಿತಿ ರಾಜ್ಯಾಧ್ಯಕ್ಷ ಹಾಗೂ ಸಂಘದ ಕಾನೂನು ಸಲಹೆಗಾರ ಪಾವಗಡ ಶ್ರೀರಾಮ್ ಸಂರಿದಂತೆ ವಿವಿಧ ತಾಲೂಕುಗಳಿಂದ ಗ್ರಾಮ ಸಹಾಯಕರು ಭಾಗವಹಿಸಿದ್ದರು.
ಪ್ರತಿಭಾ ಪುರಸ್ಕಾರ
ಅರ್ಜಿ ಆಹ್ವಾನ
ತಿಪಟೂರು: ತಾಲೂಕಿನ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2012-13ನೆ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕೂ ಹೆಚ್ಚು ಅಂಕಗಳನ್ನು ಪಡೆದಿರುವ ವೀರಶೈವ ಲಿಂಗಾಯಿತ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದೆಂದು ಸಂಘವು ತಿಳಿಸಿದೆ. ಅರ್ಹ ವಿದ್ಯಾರ್ಥಿಗಳು ಜೂ.30ರೊಳಗೆ ಅಗತ್ಯ ದಾಖಲೆಗಳೊಂದಿಗೆ ಪ್ರಸನ್ನ ಕುಮಾರ್, ಭೌತಶಾಸ್ತ್ರ ಉಪನ್ಯಾಸಕರು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೊ.9482679699 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

