ಸಮಾಜ ಧೈರ್ಯ ತಾಳಿದರೆ ಎಲ್ಲ ವರ್ಗದ ಆರ್ಥಿಕಾಭಿವೃದ್ಧಿ: ಡಾ. ವೀರೇಂದ್ರ ಹೆಗ್ಗಡೆ
ಕ.ಪ್ರ. ವಾರ್ತೆ ಗುಬ್ಬಿ ಜೂ.21
ಸಮಾಜದಲ್ಲಿ ಎಡರು ತೊಡರುಗಳನ್ನು ಎದುರಿಸುವಂತಹ ಎದೆಗಾರಿಕೆ, ಧೈರ್ಯ ವಹಿಸುವುದು ಇಂದು ಅತ್ಯವಶ್ಯಕವಾಗಿದ್ದು, ಇದರಿಂದ ಸಮಾಜದ ಎಲ್ಲಾ ವರ್ಗದ ಜನರು ಆರ್ಥಿಕವಾಗಿ ಮುಂಬರಲು ಸಾಧ್ಯವಾಗುತ್ತದೆ ಎಂದು ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.
ಅವರು ಗುಬ್ಬಿ ಪಟ್ಟಣದ ಶಿವರಾತ್ರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಘಟಕ ಆಯೋಜಿಸಿದ್ದ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರುಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ದುಶ್ಜಟಗಳಿಗೆ ಬಲಿಯಾಗುತ್ತಿರುವ ಯುವ ಶಕ್ತಿ ನವ ಬದುಕು ರೂಢಿಸಿಕೊಂಡು ಸಮಾಜದ ಏಳಿಗೆಗೆ ಶ್ರಮಿಸಬೇಕೆಂದರು.
ಗುಬ್ಬಿ ತಾಲೂಕಿನಲ್ಲಿ ಸಂಘವು 2 ವರ್ಷಗಳ ಹಿಂದೆ ಪ್ರಾರಂಭವಾಗಿ 41 ಕೋಟಿ ಸಾಲ ನೀಡಿದ್ದು ಶೇಕಡ 100ಕ್ಕೆ 100 ರಷ್ಟು ಸಾಲ ವಸೂಲಾಗಿದ್ದು, 3 ಕೋಟಿ 35 ಲಕ್ಷಗಳಷ್ಟು ಸಂಘಕ್ಕೆ ಉಳಿತಾಯವಾಗಿದೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಶಾಸಕ ಎಸ್.ಆರ್. ಶ್ರೀನಿವಾಸ್ ಸರ್ಕಾರ ಮಾಡದೆ ಇರುವ ಕೆಲಸವನ್ನು ಧರ್ಮಸ್ಧಳ ಗ್ರಾಮಾಭಿವೃದ್ಧಿ ಸಂಘ ಮಾಡುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶ್ರೀಹರಿ, ಜಿಲ್ಲಾ ನಿರ್ದೇಶಕ ಗಂಗಾಧರ ರೈ, ತಾಲೂಕು ಯೋಜನಾಧಿಕಾರಿ ಪ್ರವೀಣ್ಕುಮಾರ್, ತುಮಕೂರು ಹಾಲು ಉತ್ಪಾದಕರ ಒಕ್ಕೂಟದ ನಿರ್ವಾಹಕ ನಿರ್ದೇಶಕ ಚನ್ನಕೃಷ್ಣಯ್ಯ, ಮುಖಂಡ ಲಕ್ಷೀನಾರಾಯಣ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

