ತುಮಕೂರು

ಸ್ಪರ್ಧಾತ್ಮಕ ಯುಗದಲ್ಲಿ ನಿಮಗೆ ನೀವೇ ಸ್ಪರ್ಧಿ

Published On :


ಕ.ಪ್ರ.ವಾರ್ತೆ   ತುಮಕೂರು   ಜೂ. 22
ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ನಿಮಗೆ ನೀವೇ ಸ್ಪರ್ಧಿಗಳು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ  ಇಲಾಖೆಯ ಕಾರ್ಯದಶಇರ್ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜಿನೀಶ್ ಅಭಿಪ್ರಾಯಪಟ್ಟರು.
ಅವರು ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾ ಸರಕಾರಿ ನೌಕರರ ಸಂಘ ಹಾಗೂ ತಾಲೂಕು ಸರಕಾರಿ ನೌಕರರ ಪತ್ತಿನ ಸಹಕಾರ ಸಂಘದ ವತಿಯಿಂದ ಆಯೋಜಿಸಿದ್ದ ಎಸ್.ಎಸ್.ಎಲ್.ಸಿ. ಮತ್ತು  ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಇಂದಿನ ಆಧುನಿಕ ಯುಗದಲ್ಲಿ ಪ್ರಪಂಚ ಒಂದು ಸಣ್ಣ ಗ್ರಾಮದಂತಾಗಿದೆ. ಎತ್ತರಕ್ಕೆ ಬೆಳೆದಂತೆಲ್ಲಾ ನಮ್ಮ ಪ್ರತಿಸ್ಪರ್ಧಿಗಳು ಯಾರು ಎಂದು ಗೊತ್ತಿರುವುದಿಲ್ಲ.ಇಂತಹ ಸಂದರ್ಭದಲ್ಲಿ ಗೆಲ್ಲಬೇಕೆಂದರೆ ಮೊದಲು ನಮ್ಮಲ್ಲಿ ಆತ್ಮವಿಶ್ವಾಸ ಮೂಡಿಸಿಕೊಳ್ಳಬೇಕು. ಏನಾದರೂ ಸಾಧಿಸಬಲ್ಲೆ ಎಂಬ ಆತ್ಮವಿಶ್ವಾಸ ಮೂಡಿಸಿಕೊಂಡಲ್ಲಿ ಮಾತ್ರ ಯಶಸ್ಸು ಸಾಧ್ಯ. ಹಾಗೂ ಇತರೊಂದಿಗೆ ಸ್ಪರ್ಧೆಗೆ ಇಳಿಯಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ವಿದ್ಯಾರ್ಥಿ ದಿಸೆಯಲ್ಲಿಯೇ ಮಕ್ಕಳು ನಿಶ್ಚಿತ ಗುರಿಯೊಂದಿಗೆ ತಮ್ಮ ಅಭ್ಯಾಸವನ್ನು ಆರಂಭಿಸಬೇಕು. ಆಗ ಮಾತ್ರ ಉನ್ನತ ಮಟ್ಟದ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.