ತುಮಕೂರು

ತುಮಕೂರು ಜಿಪಂ ಸಿಇಒಗೆ ಜಾಮೀನು ರಹಿತ ವಾರಂಟ್

Published On :

ಬೆಂಗಳೂರು: ಜಮೀನು ವಿವಾದಕ್ಕೆ ಸಂಬಂಧಿಸಿದ ನೋಟಿಸ್ಗೆ ಪ್ರತಿಕ್ರಿಯಿಸದ ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಹೈಕೋರ್ಟ್ ಜಾಮೀನು ಸಹಿತ ವಾರಂಟ್ ಜಾರಿ ಮಾಡಿದೆ.  ತುಮಕೂರಿನ ಶಿರಾ ತಾಲೂಕಿನ ಬುಕ್ಕಾಪಟ್ಟಣದ ನಿವಾಸಿ ಎಸ್.ಜೆ. ಲಿಂಗೇಗೌಡ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಮೋಹನದಾಸ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.  ಬುಕ್ಕಾ ಪಟ್ಟಣದಲ್ಲಿನ ಸರ್ಕಾರಿ ಪ್ರೌಢಶಾಲೆ ನಿರ್ಮಿಸುವ ಕುರಿತು ಸರ್ಕಾರದಿಂದ ಪ್ರಸ್ತಾವನೆ ಬಂದಾಗ ತಮ್ಮ ಜಮೀನು ನೀಡುವುದಾಗಿ ಲಿಂಗೇಗೌಡ ಮುಂದೆ ಬಂದಿದ್ದರು. ಈ ನಡುವೆ, ಲಿಂಗಪ್ಪ ಎಂಬುವರು ಕೂಡ ತಮ್ಮ ಜಮೀನು ನೀಡ ಬಯಸಿದ್ದರು. ಜಿಲ್ಲಾ ಪಂಚಾಯತ್ ಆಡಳಿತ ಲಿಂಗಪ್ಪ ಅವರ ಜಮೀನು ಪಡೆಯಲು ಅನುಮತಿ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಲಿಂಗೇಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು.  ವಿಚಾರಣೆ ನಡೆಸಿದ ಪೀಠ, ಈ ಸಂಬಂಧ ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಹಲವು ನೋಟಿಸ್ಗಳಿಗೆ ಕೂಡ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ನ್ಯಾಯಪೀಠ ಅಧಿಕಾರಿ ವಿರುದ್ಧ ಜಾಮೀನು ಸಹಿತ ವಾರಂಟ್ ಜಾರಿ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.