ತುಮಕೂರು

ರೈತರ, ವಿಜ್ಞಾನಿಗಳ ವಿಚಾರ ಸಂಕಿರಣದ ಉದ್ಘಾಟನೆ

Published On :

ಕ.ಪ್ರ.ವಾರ್ತೆ    ತಿಪಟೂರು    ಜೂ. 24
ತಾಲೂಕಿನ ಬಿದರಮ್ಮನಗುಡಿ ಕಾವಲಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆತ್ಮಯೋಜನೆ, ಇಪ್ಕೊ ತುಮಕೂರು ವಿಭಾಗ ಮತ್ತು ಕೃಷಿ ವಿಜ್ಞಾನ ಕೇಂದ್ರ ಇವರ ವತಿಯಿಂದ ಡಿ.ಎ.ಪಿ ಗೊಬ್ಬರದ ಬದಲು ಎಸ್.ಎಸ್.ಪಿ ಗೊಬ್ಬರ ಬಳಕೆ ಹಾಗೂ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಸುಧಾರಿತ ಬೇಸಾಯ ಕ್ರಮಗಳ ಕುರಿತು ಒಂದು ದಿನದ ರೈತ ಮತ್ತು ವಿಜ್ಞಾನಿಗಳ ವಿಚಾರ ಸಂಕೀರ್ಣವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಕೇಂದ್ರದ ಮುಖ್ಯಸ್ಥರಾದ ಡಾ.ಜಿ.ಎಮ್.ಸುಜೀತ್ ಉದ್ಘಾಟಿಸಿ ಮಾತನಾಡುತ್ತಾ ಹವಾಮಾನ ವೈಪರಿತ್ಯದ ಸಮಯದಲ್ಲಿ ಸುಧಾರಿತ ಬೆಳೆ ಮತ್ತು ತಳಿಗಳ ಆಯ್ಕೆ ಹಾಗೂ ಬೇಸಾಯ ಕ್ರಮಗಳನ್ನು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಕೇಂದ್ರದ ಮಣ್ಣು ವಿಜ್ಞಾನ ವಿಷಯ ತಜ್ಞೆ ಡಾ.ಬಿ.ಮಮತ ಮಣ್ಣು ಮತ್ತು ನೀರಿನ ಕ್ರಮಗಳು ಹಾಗೂ ಪೋಷಕಾಂಶಗಳ ನಿರ್ವಹಣೆ ಕುರಿತು ಚರ್ಚಿಸಿದರು.
ಸಸ್ಯ ಸಂರಕ್ಷಣೆ ವಿಷಯ ತಜ್ಞೆ ಡಾ.ಕೆ.ಎಂ.ಶ್ರೀನಿವಾಸ ರೆಡ್ಡಿ, ತೆಂಗು, ಅಡಿಕೆ, ರಾಗಿ, ತೊಗರಿ ಬೆಳೆಗಳಲ್ಲಿ ಬರುವ ರೋಗ ಮತ್ತು ಕೀಟ ಬಾಧೆ ಹಾಗೂ ಅವುಗಳ ಸಮಗ್ರ ಹತೋಟಿ ಕ್ರಮಗಳನ್ನು ವಿವರಿಸಿದರು. ತೋಟಗಾರಿಕೆ ವಿಷಯ ತಜ್ಞ ಡಾ. ನಾಗಪ್ಪ ದೇಸಾಯಿ ತೋಟಗಾರಿಕೆ ಬೆಳೆಗಳ ಸಮಗ್ರ ಬೇಸಾಯ ಕ್ರಮಗಳನ್ನು ವಿಶ್ಲೇಷಿಸಿದರು. ಕೃಷಿ ವಿಸ್ತರಣೆ ವಿಷಯ ತಜ್ಞ ಎಂ.ಹೆಚ್. ಶಂಕರ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಹೊಸ ತಂತ್ರಜ್ಞಾನಗಳ ಅಳವಡಿಕೆಯಲ್ಲಿ ವಿಸ್ತರಣಾ ಚಟುವಟಿಕೆಗಳು ಮತ್ತು ಅವುಗಳ ಪ್ರಾಮುಖ್ಯತೆಯನ್ನು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.