ತುಮಕೂರು

ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕರಿಂದ ಗುದ್ದಲಿ ಪೂಜೆ

Published On :

ತಿಪಟೂರು: ತಾಲೂಕಿನ ವಿವಿಧ ಗ್ರಾಮಗಳ ಸಂಪರ್ಕಕ್ಕಾಗಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ ಅಡಿ ವಿವಿಧ ರಸ್ತೆಗಳ ಕಾಮಗಾರಿಗಳ ಗುದ್ದಲಿ ಪೂಜೆಯನ್ನು ಶಾಸಕ ಕೆ.ಷಡಕ್ಷರಿಯವರು ಸೋಮವಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ ತಡಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಟ್ನಹಳ್ಳಿಯಿಂದ ತಿಪಟೂರು ಹಾಸನ ರಸ್ತೆವರೆಗೆ 0.7ಕಿ.ಮೀ ರಸ್ತೆಗೆ 29.35ಲಕ್ಷ, ತಡಸೂರು-ಬ್ಯಾಟಗನಹಳ್ಳಿಯಿಂದ 3.05ಕಿ.ಮೀ ರಸ್ತೆಗೆ ರು. 127.80 ಲಕ್ಷ, ಗೌಡನಕಟ್ಟೆ-ಗೊಲ್ಲರಹಟ್ಟಿಗೆ 2.88 ಕಿ.ಮೀ ರಸ್ತೆಗೆ 119.50 ಲಕ್ಷ, ಕೋಡಿಕೊಪ್ಪು-ಹಳಲೇಹಳ್ಳಿಯ 1.83 ಕಿ.ಮೀ ರಸ್ತೆಗೆ ರು. 76.85 ಲಕ್ಷ, ಕೊನೇಹಳ್ಳಿ-ರೇಲ್ವೆ ನಿಲ್ದಾಣಕ್ಕೆ 0.8ಕಿ.ಮೀ. ರಸ್ತೆಗೆ ರು. 30.55ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
 ರಸ್ತೆ ಗುದ್ದಲಿ ಪೂಜೆ ಸಂದರ್ಭದಲ್ಲಿ ಶಾಸಕರನ್ನು ಭೇಟಿ ಮಾಡಿದ ಮಹಿಳೆಯರು, ವೃದ್ಧರು ನಮ್ಮ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಪಡಿತರ ಚೀಟಿ ರದ್ದುಗೊಳಿಸಿದ್ದಾರೆ. ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಮುಂತಾದ ಮಾಸಾಶನ ನೀಡುತ್ತಿಲ್ಲ ಎಂದು ಶಾಸಕರಿಗೆ ತಮ್ಮ ಅಳಲನ್ನು ತೋಡಿಕೊಂಡರು. ಈ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ತಿಳಿಸಿ, ಬಡವರಿಗೆ ಪಡಿತರ ಚೀಟಿಯನ್ನು ದೊರಕಿಸಿಕೊಡುವುದಾಗಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.  ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪರಮಶಿವಯ್ಯ, ಕಾಂಗ್ರೆಸ್ ಮುಖಂಡ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಸಂಗಮೇಶ್ ಇತರರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.