ತುಮಕೂರು

ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರ ಆಗ್ರಹ

Published On :

ಕೊರಟಗೆರೆ: ತಾಲೂಕಿನ ವಡ್ಡರಹಳ್ಳಿಯ ತಿಮ್ಮಪ್ಪ ಮಠದ ಅನ್ನಪೂಣೇಶ್ವರಿ ಸುಕ್ಷೇತ್ರಕ್ಕೆ ಉತ್ತಮ ರಸ್ತೆ ನಿರ್ಮಾಣ ಮಾಡುವಂತೆ ಈ ಭಾಗದ ಸಾರ್ವಜನಿಕರು ಮತ್ತು ಭಕ್ತಾದಿಗಳು ಶಾಸಕರಲ್ಲಿ ಮತ್ತು ಅಧಿಕಾರಿಗಳಲ್ಲಿ ಒತ್ತಾಯಿಸಿದ್ದಾರೆ.
ಕೊರಟಗೆರೆ ತಾಲೂಕಿನ ವಡ್ಡರಹಳ್ಳಿ ಗ್ರಾಮ ರಾಜ್ಯದಲ್ಲಿಯೇ ಇತಿಹಾಸದ ಪ್ರಸಿದ್ಧ ಕ್ಷೇತ್ರವಾದ ದೇವರಾಯನ ದುರ್ಗ ಬೆಟ್ಟದ  ತಪ್ಪಲಿದ್ದು ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳು ವಡ್ಡರಹಳ್ಳಿಯ ಪುರಾತನ  ಕ್ಷೇತ್ರವಾದ ತಿಮ್ಮಪ್ಪಮಠದಲ್ಲಿನ ಶ್ರೀ ಅನ್ನಪೂರ್ಣೇಶ್ವರಿ ಸುಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದು ಆದರೆ ತಿಮ್ಮಪ್ಪಮಠ ಸೇರಿದಂತೆ ಈ ಭಾಗದ ಸುತ್ತಮುತ್ತಲ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಗುಂಡಿಗಳಿಂದ ಕೂಡಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ವಾಹನ ಸಂಚಾರಕ್ಕೆ ತೀವ್ರ ಕಷ್ಟವಾಗಿದೆ. ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು ಮಳೆ ಬಂದರೆ ಸದರಿ ರಸ್ತೆಯಲ್ಲಿ ಓಡಾಡಲು ಕಷ್ಟಕರವಾಗುವ ಪರಿಸ್ಥಿತಿ ಉಂಟಾಗಲಿದ್ದು ತುಮಕೂರು ಗ್ರಾಮೀಣ ಕ್ಷೇತ್ರಕ್ಕೆ ಹೊಂದಿಕೊಂಡಂತೆ ಇರುವ ಈ ರಸ್ತೆಯನ್ನು ಕೊರಟಗೆರೆ ಕ್ಷೇತ್ರದ ಶಾಸಕರಾಗಲಿ ಅಧವಾ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾಗಲಿ ಇತ್ತ ಗಮನ ಹರಿಸಿ ಹದಗೆಟ್ಟಿರುವ ರಸ್ತೆ ನಿರ್ಮಾಣ ಮಾಡಿಸಬೇಕಾಗಿದೆ ಎಂದು ಭಕ್ತರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.

'ಉತ್ತರಾಖಂಡದಲ್ಲಿ ರಕ್ಷಣಾ ಕಾರ್ಯಾಚರಣೆ ಕ್ಷಿಪ್ರಗೊಳಿಸಿ'
ಸಕಲೇಶಪುರ: ಪ್ರಾಕೃತಿಕ ವಿಕೊಪಕ್ಕೆ ತುತ್ತಾಗಿರುವ ಉತ್ತರಾಖಂಡದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಕ್ಷಿಪ್ರಗೊಳಿಸಬೇಕೆಂದು ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಅಧ್ಯಕ್ಷ ಫೈರೋಝ ಪಾಷ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಮಳೆ ಪುನಾರಂಭಗೊಳ್ಳುವ  ಸೂಚನೆ ಇರುವುದರಿಂದ ಅನಾಹುತವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹೆಚ್ಚಿನ ಸಂಖ್ಯೆಯಲ್ಲಿ ಹೆಲಿಕ್ಯಾಪ್ಟರ್‌ಗಳನ್ನು ನಿಯೋಜಿಸಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.