'ಅಗ್ಗದ ಮದ್ಯ ಸ್ವಾಸ್ಥ್ಯ ಸಮಾಜಕ್ಕೆ ಕಂಟಕಪ್ರಾಯ'
ತಿಪಟೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡ ಮತ್ತು ಮಧ್ಯಮ ವರ್ಗದ ಮದ್ಯಪಾನಿಗಳನ್ನು ಗಮನದಲ್ಲಿಟ್ಟುಕೊಂಡು ಅಗ್ಗದ ಮದ್ಯ ಉತ್ಪಾದನೆ ಮಾಡಲು ಅವಕಾಶ ಮಾಡಿಕೊಟ್ಟಲ್ಲಿ ಸ್ವಾಸ್ಥ್ಯ ಸಮಾಜಕ್ಕೆ ಕಂಟಕಪ್ರಾಯವಾಗಲಿದೆ ಎಂದು ಧರ್ಮಸ್ಥಳ ಸುಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತಿಳಿಸಿದರು.
ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್ನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮದ್ಯವರ್ಜನ ಶಿಬಿರಾರ್ಥಿಗಳ ಚೈತನ್ಯ ಸಮಾರಂಭದಲ್ಲಿ ಮಾತನಾಡಿದ ಅವರು ಮದ್ಯಪಾನವನ್ನು ರದ್ದು ಮಾಡಿದರೆ ಜನರು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಲು ಅನುಕೂಲವಾಗುತ್ತದೆ. ಕಡಿಮೆ ಬೆಲೆಯ ಮದ್ಯ ನೀಡುವುದು ಮತ್ತು ಮದ್ಯದಂಗಡಿಗಳನ್ನು ಹೆಚ್ಚು ಮಾಡುವುದು ಎರಡೂ ಒಳ್ಳೆಯ ಕೆಲಸವಲ್ಲ. ಬದಲಾಗಿ ಜನರಲ್ಲಿ ಸಾಮಾಜಿಕ, ಧಾರ್ಮಿಕ ಮತ್ತು ಆರ್ಥಿಕ ಪರಿವರ್ತನೆ ತರುವ ಕೆಲಸ ಮಾಡಬೇಕು ಎಂದರು.
ಶಾಸಕ ಕೆ.ಷಡಕ್ಷರಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇಶಕಂಡ ಅತ್ಯುತ್ತಮ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಈ ಯೋಜನೆಯನ್ನು ಜಾರಿಗೊಳಿಲಾಗಿದೆ. ಗ್ರಾಮೀಣ ಜನರಲ್ಲಿ ಸ್ವಾವಲಂಬನೆ ಮತ್ತು ಸ್ವಾಭಿಮಾನ ಸಂದೇಶವನ್ನು ಈ ಯೋಜನೆ ಬಿತ್ತುತ್ತಿರುವುದು ಶ್ಲಾಘನೀಯ ಎಂದರು. ರಂಭಾಪುರಿ ಶಾಖಾಮಠದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಬಿ.ಸಿ.ನಾಗೇಶ್, ಪ್ರಾದೇಶಿಕ ನಿರ್ದೇಶಕ ಶ್ರೀಹರಿ, ಜಿಲ್ಲಾ ನಿರ್ದೇಶಕ ಗಂಗಾಧರ್, ಯೋಜನಾಧಿಕಾರಿ ಶ್ರೀನಿವಾಸ್ ಮತ್ತಿತರರಿದ್ದರು.
ಬೆಳೆ ವಿಮೆ ಕಟ್ಟಿದ್ದ ರೈತರಿಗೆ ನಕಲಿ ರಸೀದಿ: ಆರೋಪ
ಪಾವಗಡ: ಬೆಳೆ ವಿಮೆ ಕಟ್ಟಿದ್ದ ರೈತರಿಗೆ ನಕಲಿ ರಸೀದಿಗಳನ್ನು ನೀಡುತ್ತಿದ್ದಾರೆಂದು ಆರೋಪಿಸಿ ರೈತ ಮುಖಂಡರೊಬ್ಬರು ಕಾರ್ಯದರ್ಶಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಪಟ್ಟಣದ ವಿಎಸ್ಎಸ್ಎಸ್ಎನ್ನಲ್ಲಿ ಮಂಗಳವಾರ ನಡೆದಿದೆ. ಬೆಳೆ ವಿಮೆ ಮಂಜೂರಾತಿಗೆ ರೈತರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದು ಹಣ ಕಟ್ಟಿದ್ದ ರೈತರಿಗೆ ನಕಲಿ ರಸೀದಿಗಳನ್ನು ಸೃಷ್ಟಿಸಿ ನೀಡುವ ಮೂಲಕ ರೈತರನ್ನು ವಂಚಿಸುತ್ತಿದ್ದಾರೆಂದು ವಿಮೆ ಕಟ್ಟಿದ್ದ ರೈತರ ಪರವಾಗಿ ಮುಖಂಡ ಗ್ರಾಪಂ ಮಾಜಿ ಅಧ್ಯಕ್ಷ ಗುಂಡ್ಲಹಳ್ಳಿ ರಾಮಾಂಜಿನಪ್ಪ ಆರೋಪಿಸಿ ಕಾರ್ಯದರ್ಶಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ತನಿಖೆಗೆ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

