ತುಮಕೂರು

'ರೈತರಿಗೆ ಎಚ್‌ಡಿಎಫ್‌ಸಿ ಬ್ಯಾಂಕ್ ಕಿರುಕುಳ ತಪ್ಪಿಸಿ'

Published On :

ತುಮಕೂರು: ಎಚ್‌ಡಿಎಫ್‌ಸಿ ಬ್ಯಾಂಕ್ ಶಾಖೆ ಅಧಿಕಾರಿಗಳು ಸಾಲ ವಸೂಲಾತಿ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಚಿಕ್ಕನಾಯಕನಹಳ್ಳಿ ತಾಲೂಕು ರೈತರು ರೈತ ಸಂಘದ ವತಿಯಿಂದ ತುಮಕೂರಿನ ಎಚ್‌ಡಿಎಫ್‌ಸಿ ಬ್ಯಾಂಕ್ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಚಿಕ್ಕನಾಯಕನಹಳ್ಳಿ ತಾಲೂಕು ಮೇಲನಹಳ್ಳಿಯ ತಿಮ್ಮಯ್ಯ ಅವರಿಗೆ ಸೇರಿದ ಟ್ರ್ಯಾಕ್ಟರನ್ನು ನಾಗೇಶ್ ಎಂಬ ಬ್ಯಾಂಕ್ ಅಧಿಕಾರಿ ಇದೇ ತಿಂಗಳ 20ರಂದು ದೌರ್ಜನ್ಯ -ದರ್ಪದಿಂದ ಪೊಲೀಸರೊಂದಿಗೆ ಬಂದು ಜಪ್ತಿ ಮಾಡಿದ್ದಾರೆ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್ ಆಕ್ರೋಶ ವ್ಯಕ್ತಪಡಿಸಿದರು.
ಜಪ್ತಿ ಮಾಡಿದ ಟ್ರ್ಯಾಕ್ಟರನ್ನು ಬೇರೆಯವರಿಗೆ ಹರಾಜು ಮೂಲಕ ಪರಬಾರೆ ಮಾಡಿ, ಬ್ಯಾಂಕಿನ ಖಾತೆಗೆ ಜಮಾ ಮಾಡಿದ್ದಾರೆ. ಜತೆಗೆ ರೈತನ ಸಾಲದ ವಸೂಲಾತಿಗಾಗಿ ರೈತನ ಮೇಲೆ ನ್ಯಾಯಾಲಯದಲ್ಲಿ ದಾವೆ ಹೂಡಿ, ಇದರ ಸಂಪೂರ್ಣ ಶುಲ್ಕವನ್ನೂ ರೈತನೇ ಭರಿಸುವಂತೆ ಮಾಡಿದ್ದಾರೆ ಎಂದು ದೂರಿದರು. ರೈತರನ್ನು ಇಂತಹ ಸಂಕಷ್ಟದಲ್ಲಿ ಸಿಲುಕಿಸುವ ಬ್ಯಾಂಕ್‌ಗಳು ರೈತರು ಬದುಕು ಕಾಣದೆ ಆತ್ಮಹತ್ಯೆ ದಾರಿ ಹಿಡಿಯುವಂತೆ ಮಾಡಿವೆ. ಬರಗಾಲದ ಈ ಸ್ಥಿತಿಯಲ್ಲಿ ಬ್ಯಾಂಕ್‌ಗಳು ರೈತರಿಗೆ ನೀಡುವ ಕಿರುಕುಳ ತಪ್ಪಿಸಲು ಸರ್ಕಾರ ಮಧ್ಯೆ ಪ್ರವೇಶಿಸಬೇಕೆಂದು ಕೆಂಕೆರೆ ಸತೀಶ್ ಒತ್ತಾಯಿಸಿದರು.
ರೈತ ಮುಖಂಡರಾದ ಮಲ್ಲೇಶ್, ಮಲ್ಲಿಕಾರ್ಜುನಯ್ಯ. ಷಣ್ಮುಖ, ಗಂಗಾಧರಯ್ಯ ಸೇರಿದಂತೆ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.