ತುಮಕೂರು

ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಷಡಕ್ಷರಿ

Published On :

ತಿಪಟೂರು: ಕಲೆ, ಸಂಸ್ಕೃತಿ ಅರಿವಿದ್ದವರು ಉತ್ತಮ ಆಡಳಿತ ನೀಡುತ್ತಾರೆ. ಅಧಿಕಾರ ಯಾರಿಗೂ ಶಾಶ್ವತವಲ್ಲ. ಅಧಿಕಾರವಿದ್ದಾಗ ಎಲ್ಲಾ ಕ್ಷೇತ್ರಗಳ ಅಭಿವೃದ್ದಿಗೆ, ದುರ್ಬಲರ ಏಳಿಗೆಗೆ ಕಾರಣವಾಗಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ನಗರದ ಸತ್ಯಗಣಪತಿ ಅಮೃತ ಮಹೋತ್ಸವ ಭವನದಲ್ಲಿ ಬಯಲು ಸೀಮೇ ಸಾಂಸ್ಕೃತಿಕ ಸಂಘದ 11ನೇ ವಾರ್ಷಿಕೋತ್ಸವ ಸಮಾರಂಭ, ಗಣ್ಯರಿಗೆ ಸನ್ಮಾನ ಹಾಗೂ ವಿಶೇಷಾಂಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಬುದ್ಧ ಸಾಧಕರನ್ನು ಗುರುತಿಸಿ, ಗೌರವಿಸುವುದರಿಂದ ಅವರು ಸಮಾಜಕ್ಕೆ ಮತ್ತಷ್ಟು ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದರು.
ಸಂಘದ ಗೌರವಾಧ್ಯಕ್ಷ ಜಿ.ಇಂದ್ರಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರತಿಫಲಾಪೇಕ್ಷೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ವ್ಯಕ್ತಿಗಳನ್ನು ಗೌರವಿಸುವುದರಿಂದ ಸಂಘದ ಮರ್ಯಾದೆ ಹೆಚ್ಚುತ್ತದೆ. ಸಾಂಸ್ಕೃತಿಕ ಮತ್ತು ಸಾಮಾಜಿಕ ವ್ಯವಸ್ಥೆಯಲ್ಲಿ ಎಲ್ಲಾ ವರ್ಗ, ಧರ್ಮಗಳಲ್ಲಿ ಸಾಮರಸ್ಯ ಮೂಡಿಸಬೇಕಾಗಿದೆ. ಅಂತಹ ಕಾರ್ಯ ನಮ್ಮ ಸಂಘದಿಂದ ನಡೆಯುತ್ತಿದೆ ಎಂದರು.
ಅನುರಣ ಪತ್ರಿಕೆ ವಿಶೇಷಾಂಕವನ್ನು ಬಿಡುಗಡೆ ಮಾಡಿದ ಹಿರಿಯ ಪತ್ರಕರ್ತ ಮಾಲತೇಶ್ ಅರಸ್ ಹರ್ತಿಮಠ ಮಾತನಾಡಿ ಸಾಂಸ್ಕೃತಿಕ ಮನಸ್ಸುಗಳಿಂದ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ. ಕಲೆ, ಕಲಾವಿದರು ಸಮಾಜದ ಆಸ್ತಿ ಎಂದರು.
ಮಾರ್ಗದರ್ಶಿ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ಜಯರಾಮಯ್ಯ, ಮಾಜಿ ಶಾಸಕ ಬಿ.ಸಿ.ನಾಗೇಶ್, ನಗರಸಭೆ ಆಯುಕ್ತ ಎಚ್.ಜಿ.ಚಂದ್ರಶೇಖರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ಎಂ.ರಾಜಣ್ಣ, ಸಂಘದ ಅಧ್ಯಕ್ಷ ಎಚ್.ಸಿ.ನಾಗರಾಜ್, ಉಪಾಧ್ಯಕ್ಷೆ ಗೌರಮ್ಮಮೂರ್ತಿ, ಉಪನ್ಯಾಸಕ ಕೆ.ಎನ್.ರೇಣುಕಯ್ಯ ಮತ್ತಿತರರಿದ್ದರು.
ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿರುವ ರಂಗಕರ್ಮಿ ಎಚ್.ಎಂ.ರಂಗಯ್ಯ, ಮಿಮಿಕ್ರಿ ಕಲಾವಿದ ಈಶ್ವರಯ್ಯ, ಲೇಖಕಿ ವಿಜಯಾಮೋಹನ್, ಜಾನಪದ ಕಲಾವಿದ ರಾಜಣ್ಣನವರನ್ನು ಸನ್ಮಾನಿಸಲಾಯಿತು. ಸುಧಾ ಪೈ, ಶೈಲಜಾ, ಗೀತಾ ಶ್ವೇತಾ ಗೀತೆಗಳನ್ನು ಹಾಡಿದರು. ಪ್ರಧಾನ ಕಾರ್ಯದರ್ಶಿ ಭಾನುಪ್ರಶಾಂತ್ ಸ್ವಾಗತಿಸಿ, ಶಿಕ್ಷಕ ಪಟ್ಟಾಭಿರಾಮು ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.