ತುಮಕೂರು

'ಮನೆ ಸುತ್ತ ಸ್ವಚ್ಛತೆ ಕಾಪಾಡಿ'

Published On :

ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ
ಕೊರಟಗೆರೆ: ಗ್ರಾಮಗಳಲ್ಲಿ ಸಾರ್ವಜನಿಕರು ತಮ್ಮ ಮನೆಯ ಅಕ್ಕಪಕ್ಕ ಸ್ವಚ್ಛತೆ ಕಾಪಾಡಿಕೊಳ್ಳದಿರುವುದರಿಂದ ಅಪಾಯಕಾರಿ ರೋಗಗಳು ಹೆಚ್ಚಾಗಿ ಹರಡಲು ಕಾರಣವಾಗಿದೆ ಎಂದು ಬುಕ್ಕಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಆತ್ಮಾರಾಂ ತಿಳಿಸಿದರು.
ಅವರು ಬುಕ್ಕಾಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ರಸ್ತೆ ಜಾಥಾ ನಡೆಸಿ ಮಾತನಾಡಿದ ಅವರು, ಮನೆಯ ಸುತ್ತ ಕೊಳಚೆ ನೀರು ನಿಲ್ಲದಂತೆ ನೋಡಿಕೊಂಡು ಘನತ್ಯಾಜ್ಯ ವಸ್ತುಗಳು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು. ಮನೆಯಲ್ಲಿರುವ ನೀರಿನ ತೊಟ್ಟಿಯನ್ನು ಆಗಾಗ್ಗೆ ಸ್ವಚ್ಛಗೊಳಿಸುವಂತೆ ತಿಳಿಸಿದರು.
ಕೊಳಚೆ ನೀರಿನಲ್ಲಿ ಸೊಳ್ಳೆಗಳು ಮೊಟ್ಟೆಗಳನ್ನು ಇಡುವುದರಿಂದ ಡೆಂಘೀ ಹಾಗೂ ಮಲೇರಿಯಾದಂತಹ ಅಪಾಯಕಾರಿ ರೋಗಗಳು ಹರಡುತ್ತಿವೆ. ಆದ್ದರಿಂದ ಅಂತಹ ಕಡೆ ಅಬೇಟ್ ದ್ರಾವಣ ಸಿಂಪಡಿಸುವ ಮೂಲಕ ರೋಗಗಳನ್ನು ತಡೆಗಟ್ಟಬಹುದಾಗಿದೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನ್‌ದಾಸ್ ಮಾರ್ಗದರ್ಶನದಂತೆ ಬುಕ್ಕಪಟ್ಟಣ ಗ್ರಾಮದಲ್ಲಿ ಪ್ರತಿ ಮನೆ ಮನೆಗೂ ಕರಪತ್ರಗಳನ್ನು ಹಂಚಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಬಗ್ಗೆ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ವೈದ್ಯರಾದ ಡಾ.ಹರ್ಷವರ್ಧನ, ಹಿರಿಯ ಆರೋಗ್ಯ ಕಾರ್ಯಕರ್ತೆ ಶೈಲಜಾ, ಮಂಜುಳ, ಉಮಾದೇವಿ, ಜ್ಯೋತಿ, ಜರೀನ್‌ತಾಜ್, ನರಸೀಯಪ್ಪ, ಪಲ್ಲವಿ ಮತ್ತು ಹಿರಿಯ ಸಹಾಯಕ ವೀರೇಶ್, ಆಶಾ ಕಾರ್ಯಕರ್ತೆಯರು ಮತ್ತು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.