ತುಮಕೂರು

ಕುಡಿಯುವ ನೀರಿಗೆ ಹಾಹಾಕಾರ: ಗ್ರಾಪಂ ಅಧಿಕಾರಿಗಳ ವಿರುದ್ಧ ಆಕ್ರೋಶ

Published On :

ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಕರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ಅಣ್ಣಾಮಲ್ಲೇನಹಳ್ಳಿ ಹಾಗೂ ಗೊಲ್ಲರಹಟ್ಟಿಯಲ್ಲಿ ಕಳೆದ 6 ತಿಂಗಳಿಂದ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದ್ದು, ಈ ಬಗ್ಗೆ ಗ್ರಾ.ಪಂ. ಅಧಿಕಾರಿಗಳು ಯಾವುದೇ ಸೌಲಭ್ಯಗಳನ್ನು ಒದಗಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆಂದು ಸ್ಥಳೀಯ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 ಈ ಗ್ರಾಮಗಳಲ್ಲಿ ಕುಡಿಯುವ ನೀರಿಲ್ಲದೆ ಜನತೆ ಪರದಾಡುತ್ತಿದ್ದು, ಸರ್ಕಾರದಿಂದ ಕೊರೆಸಿರುವ ಕೊಳವೆ ಬಾವಿಗಳಲ್ಲಿ ನೀರು ಬಾರದಿರುವುದರಿಂದ ಮಹಿಳೆಯರು ಮತ್ತು ಮಕ್ಕಳು ದೂರದ ತೋಟಗಳಿಗೆ 3-4 ಕಿ.ಲೋ.ಮೀಟರ್ ನಡೆದುಕೊಂಡು ಹೋಗಿ ನೀರನ್ನು ತರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನೀರಿನ ಸಮಸ್ಯೆಯ ಬಗ್ಗೆ ಗ್ರಾ.ಪಂ.ಅಧಿಕಾರಿಗಳಿಗೆ ಗೊತ್ತಿದ್ದರೂ ಸಹ ಯಾವುದೆ ಪರ್ಯಾಯ ವ್ಯವಸ್ಥೆ ಕಲ್ಪಿಸದಿರುವುದು ಗ್ರಾಮಸ್ಥರಲ್ಲಿ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.
 ಈ ಕೂಡಲೆ ಗ್ರಾ.ಪಂ.ಅಧಿಕಾರಿಗಳು ಈ ಗ್ರಾಮದಲ್ಲಿ ತಲೆದೋರಿರುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಗ್ರಾ.ಪಂ.ಗೆ ಮುತ್ತಿಗೆ ಹಾಕಿ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಶಾಸಕರಿಗೆ ಒತ್ತಾಯ: ಅಣ್ಣಾಮಲ್ಲೇನಹಳ್ಳಿ ಹಾಗೂ ಗೊಲ್ಲರಹಟ್ಟಿಯಲ್ಲಿ ಪ್ರತಿ ವರ್ಷ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಜನತ ಕಂಗಾಲಾಗಿದ್ದಾರೆ. ಆದ್ದರಿಂದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಕೆ.ಷಡಕ್ಷರಿಯವರು ಗ್ರಾಮಕ್ಕೆ ಅನುಕೂಲವಾಗುವಂತೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇಂದು ಸಿಪಿಐನಿಂದ ಬಜೆಟ್ ಪೂರ್ವ ಜನಾಗ್ರಹ ಮನವಿ
ತುಮಕೂರು:
ಭಾರತ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಜು. 1 ರಂದು ಬಜೆಟ್ ಪೂರ್ವ ಜನಾಗ್ರಹಕ್ಕಾಗಿ ಆಗ್ರಹಿಸಿ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಬೆಳಗ್ಗೆ 10-30 ಕ್ಕೆ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ. ಅದರಂತೆ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಬಜೆಟ್ ಪೂರ್ವ ಜನಾಗ್ರಹ ಚಳುವಳಿ ಏರ್ಪಾಟಾಗಿದೆ ಎಂದು ಜಿಲ್ಲಾ ಸಂಚಾಲಕ ಎನ್ . ಶಶಿಕಾಂತ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.