ಬಿಎಸ್‌ಆರ್ ಕಾಂಗ್ರೆಸ್‌ಗೆ ಗೆಲವಿನ ವಿಶ್ವಾಸ: ರಮೇಶ್ ರೆಡ್ಡಿ
ಮಧುಗಿರಿ: ಇಲ್ಲಿನ ಪುರಸಭಾ ಚುನಾವಣೆಯಲ್ಲಿ ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಬಿಎಸ್‌ಆರ್ ಕಾಂಗ್ರೆಸ್ ಮುಖಂಡ ರಮೇಶ್ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ,
ನನ್ನ ಮೂಲ ಹುಟ್ಟೂರು ಮಧುಗಿರಿ ತಾಲೂಕಿನ ಕಾಳೇನಹಳ್ಳಿ. ಈಗ ತಾವು ನೆಲೆಸಿರುವುದು ಬೆಂಗಳೂರಿನಲ್ಲಿ. ಈಗಾಗಲೇ ಗ್ರಾ.ಪಂ.ಅಧ್ಯಕ್ಷ, ಸದಸ್ಯನಾಗಿ ಜನಪರ ಕೆಲಸ ಮಾಡಿದ್ದು, ರಾಜಕೀಯ ಒಡನಾಟವಿದೆ. ಶ್ರೀರಾಮುಲು ಸ್ಥಾಪಿಸಿರುವ ಬಡವರ, ಶ್ರಮಿಕರ ಹಾಗೂ ರೈತರ ಪಕ್ಷಕ್ಕೆ ಪ್ರಭಾವಿತನಾಗಿ ಆ ಪಕ್ಷದಲ್ಲಿ ಜನ ಸೇವೆ ಮಾಡುವ ಸಲುವಾಗಿ ನನ್ನ ಹುಟ್ಟೂರಾದ ಮಧುಗಿರಿ ಕ್ಷೇತ್ರವನ್ನು ಆಯ್ಕೆ ಮಾಡಿ ಕೊಂಡಿದ್ದೇನೆ ಎಂದರು.ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಮನವಿ ಮಾಡಿದ ಅವರು, ಪಟ್ಟಣದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿ ಆಳುದ್ದ ಗುಂಡಿ ಬಿದ್ದು ಸಂಚರಿಸಲು ಯೋಗ್ಯವಾಗಿಲ್ಲ. ಗ್ರಾಮೀಣ ಪ್ರದೇಶಗಳ ಸ್ಥಿತಿ ಕೂಡ ಚಿಂತಜನಕವಾಗಿದ್ದು, ಜನರ ಹಿತ ಕಾಪಾಡುವ ಪಕ್ಷ ಹಾಗೂ ಸೇವಾ ಮನೋಭಾವವುಳ್ಳ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕೆಂದು ರಮೇಶ್ ರೆಡ್ಡಿ ಮನವಿ ಮಾಡಿದರು. ಜಯಶಂಕರರೆಡ್ಡಿ, ಲಕ್ಷ್ಮೀನಾರಾಯಣ ರೆಡ್ಡಿ, ಸೋಮರೆಡ್ಡಿ, ರಂಗರಾಜು, ಸುಧೀರ್, ಇರ್ಫಾನ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

