ಕಾನೂನು ಸವಲತ್ತು, ಸೌಲಭ್ಯ ಕುರಿತು ಅರಿವು
ಶಿರಾ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಾ. 4 ರಿಂದ 6 ರವರೆಗೆ 3 ದಿನಗಳ ಕಾಲ ತಾಲೂಕಿನ ವಿವಿಧ ಸ್ಥಳಗಳಲ್ಲಿ ಕಾನೂನು ಸಾಕ್ಷರತಾ ಮತ್ತು ಜನತಾ ನ್ಯಾಯಾಲಯದ ರಥ-ಸಂಚಾರಿ ಲೋಕ್ ಅದಾಲತ್ ಕಾರ್ಯಕ್ರಮ ನಡೆಯುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್. ದಿಂಡಿಲಕೊಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ತಾಲೂಕಿನ ಮೂಲೆ ಮೂಲೆಗೂ ಜನತೆಗೆ ಕಾನೂನು ಸವಲತ್ತು ಮತ್ತು ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕೆಲಸ ಸಂಚಾರಿ ನ್ಯಾಯಾಲಯದಿಂದ ಆಗಲಿದ್ದು ಜನರ ಬಳಿಗೆ ನ್ಯಾಯಾಲಯದ ಪ್ರಕರಣಗಳನ್ನು ತೆಗೆದುಕೊಂಡು ಹೋಗಿ ಜನತಾ ನ್ಯಾಯಾಲಯದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸುವುದರಿಂದ ಜನರ ಸಮಯ ಮತ್ತು ಹಣ ಎರಡನ್ನೂ ಉಳಿತಾಯ ಮಾಡಿದಂತಾಗುತ್ತದೆ ಎಂದರು. ಈ ಸಂಚಾರಿ ಲೋಕ್ ಅದಾಲತ್ ಬಗ್ಗ್ಗೆ ವಕೀಲರು ತಮ್ಮ ತಮ್ಮ ಕಕ್ಷೀದಾರರಿಗೆ ತಿಳಿಸಿದ್ದು ಸುತ್ತಮುತ್ತಲಿನ ಜನ ಇದರ ಸದುಪಯೋಗಪಡಿಸಿಕೊಳ್ಳಬೇಕೆಂದರು. ಮಾ. 4 ಸೋಮವಾರ ಬೆಳಿಗ್ಗೆ 9-30 ಕ್ಕೆ ಕೋರ್ಟ್ ಆವರಣದಿಂದ ಸಂಚಾರಿ ರಥ ಚಾಲನ ಕಾರ್ಯಕ್ರಮ ಹಮ್ಮಿಕೊಂಡಿದ್ದು 10 ಗಂಟೆಗೆ ತಾಲೂಕಿನ ಹೊನ್ನೇನಹಳ್ಳಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಕಾರ್ಯಾಗಾರ ನಡೆಯಲಿದೆ. ಮತ್ತೆ ಮಧ್ಯಾಹ್ನ 2 ಗಂಟೆಗೆ ತಾಲೂಕಿನ ದೊಡ್ಡ ಅಗ್ರಹಾರದ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ನಡೆಯುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

