ಸ್ಥಳೀಯ ಸಂಸ್ಥೆ ಚುನಾವಣೆ ನಂತರ ಕೆಜೆಪಿಗೆ ಚಿಪ್ಪೆ ಗತಿ
ಕುಣಿಗಲ್: ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶದ ನಂತರ ಕೆಜೆಪಿಗೆ ಚಿಪ್ಪೆ ಗತಿ, ಲೆಕ್ಕಕ್ಕಿಲ್ಲದ ಜೆಡಿಎಸ್ ಹೇಳಹೆಸರಿಲ್ಲದಂತಾಗಿ ಮಾಯವಾಗುವ ಮೂಲಕ ಪ್ರಾದೇಶಿಕ ಪಕ್ಷಗಳು ರಾಜ್ಯದಿಂದ ಕಣ್ಮರೆಯಾಗುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಉಪಮುಖ್ಯಮಂತ್ರಿ ಅರ್.ಅಶೋಕ ತಿಳಿಸಿದರು.
ಭಾನುವಾರ, ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಪ್ರಸಕ್ತ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಿ, ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲೆ ಕಂಡು ಕೇಳರಿಯದಂತೆ ಸ್ಥಳೀಯ ಸಂಸ್ಥೆಗಳಿಗೆ ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಅನುದಾನ ನೀಡಿ, ಪಟ್ಟಣಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿತು. ಆದರೆ ಬಹುತೇಕ ಕಡೆಗಳ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಇರದ ಕಾರಣ ರಾಜ್ಯ ಸರ್ಕಾರ ಕೊಟ್ಟಂತಹ ಅನುದಾನ ಸಮರ್ಪಕ ಬಳಕೆಯಾಗಲಿಲ್ಲವೆಂದು ವಿಷಾದ ವ್ಯಕ್ತಪಡಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ನಂತರ ಪ್ರಾದೇಶಿಕ ಪಕ್ಷವಾದ ಕೆಜೆಪಿಗೆ ಅದರ ಚಿಹ್ನೆ ಚಿಪ್ಪೆಗತಿಯಾಗಲಿದೆ. ಇನ್ನು ಜೆಡಿಎಸ್ ಪಕ್ಷ ಲೆಕ್ಕಕ್ಕಿಲ್ಲದ ಪಕ್ಷವಾಗಿದೆ. ಅಲ್ಲದೆ ಈ ಚುನಾವಣೆಗಳಲ್ಲಿ ತನ್ನ ಅಸ್ತಿತ್ವ ಕಳೆದುಕೊಂಡರೆ, ಇತರೆ ಪ್ರಾದೇಶಿಕ ಪಕ್ಷಗಳು ಸಹ ಹೇಳಹೆಸರಿಲಿಲ್ಲದಂತೆ ಕಾಣೆಯಾಗಿ ರಾಜ್ಯದಿಂದ ಪ್ರಾದೇಶಿಕ ಪಕ್ಷಗಳು ಅಸ್ತಿತ್ವ ಕಳೆದಕೊಳ್ಳುವುದರಲ್ಲಿ ಅನುಮಾನಬೇಡ ಎಂದರು.
ವಿಧಾನಸಭೆಗೂ ಬೆಂಬಲಿಸಿ: ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿ, ಸ್ಥಳೀಯ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರುವುದಲ್ಲದೆ, ಬಿಜೆಪಿ ಬೆಂಬಲಿಸುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಗಳಲ್ಲೂ ಬಿಜೆಪಿ ಅಭ್ಯರ್ಥಿಯಾದ ಡಿ.ಕೃಷ್ಣಕುಮಾರ್ ಗೆಲವಿಗೆ ಶ್ರಮಿಸಬೇಕೆಂದರು. ಗ್ರಾಮಾಂತರ ಶಾಸಕ ಬಿ.ಸುರೇಶ್ಗೌಡ, ಕುಣಿಗಲ್ ಪುರಸಭೆಯಲ್ಲಿ ಈ ಹಿಂದೆ ಕಾಂಗ್ರೆಸ್, ಜೆಡಿಎಸ್ ಅಧಿಕಾರ ನಡೆಸಿದ್ದು ಪಟ್ಟಣದ ಯಾವುದೇ ಅಭಿವೃದ್ಧಿಗೆ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಿರುವ ಕಾರಣ, ಈ ಬಾರಿ ಅಭಿವೃದ್ಧಿಗಾಗಿ, ಪರಿವರ್ತನೆಗಾಗಿ ಬಿಜೆಪಿ ಅಧಿಕಾರಕ್ಕೆ ತರುವ ಮೂಲಕ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆಯಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

