ತುಮಕೂರು

ಕಾಂಗ್ರೆಸ್‌ಗೆ ಸಾಥ್: ಪಕ್ಷೇತರ ಅಭ್ಯರ್ಥಿ ನಿವೃತ್ತಿ ಘೋಷಣೆ

Published On :

ಪಟ್ಟಣ ಪಂಚಾಯ್ತಿ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಪರವಾಗಿ ಪಕ್ಷೇತರರಾಗಿ ಚುನಾವಣಾ ಸ್ಪರ್ಧೆಗೆ ಇಳಿದಿದ್ದ ಮಾದಿಗ ದಂಡೋರದ ತಾಲೂಕು ಅಧ್ಯಕ್ಷ ಚಿದಾನಂದ್ ಕಣದಿಂದ ನಿವೃತ್ತಿ ಘೋಷಿಸಿದರು.  ಜೆಡಿಎಸ್‌ನಿಂದ ಸ್ಪರ್ಧೆಗೆ ಬಯಸಿದ್ದ ಚಿದಾನಂದ್ ಸ್ವಂತತ್ರವಾಗಿ ವಾರ್ಡ್ 2 ರಲ್ಲಿ ಅಭ್ಯರ್ಥಿಯಾಗಿದ್ದರು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಣದಿಂದ ತಮ್ಮ ನಿವೃತ್ತಿ ಘೋಷಣೆ ಮಾಡಿದ ಚಿದಾನಂದ್ ಅದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸಿರುವ  ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾಗಿರುವ ಶ್ರೀನಿವಾಸ್ ಅವರಿಗೆ ತಮ್ಮ ಬೆಂಬಲ ಸೂಚಿಸಿದರು. ಜೆಡಿಎಸ್‌ನ ಶಾಸಕ ಎಂ.ಟಿ. ಕೃಷಪ್ಪನವರ ಬೆಂಬಲಿಗರಾಗಿದ್ದ ತಮ್ಮನ್ನು ಶಾಸಕರು ಟಿಕೆ ಟ್ ನೀಡದೇ ಹಣಬಲ ಇರುವವರಿಗೆ ಮಾತ್ರ ಆದ್ಯತೆ ನೀಡಿ ಪರಿಶಿಷ್ಟ ಜನಾಂಗದ ಎಡಗೈ ಹಾಗೂ ಬಲಗೈನ ಪಂಗಡಕ್ಕೆ ಅನ್ಯಾಯವೆಸಗಿದ್ದಾರೆ. ಆದ್ದರಿಂದ ತಮ್ಮ ಪಂಗಡದ ಜನಾಂಗಕ್ಕೆ ಆದ್ಯತೆ ನೀಡಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ತಮ್ಮ ಬೆಂಬಲ ನೀಡುವುದಾಗಿ ಹೇಳಿದರು. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್, ಕಾಂಗ್ರೆಸ್ ಮುಖಂಡ ಟಿ.ಎನ್.ಶಶಿಶೇಖರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.