ತುಮಕೂರು

ಬಿಎಸ್‌ಆರ್ ಕಾಂಗ್ರೆಸ್‌ನಿಂದ ಮನೆಗೆರಡು ಗಿಡ, ಬಡಾವಣೆಗೆ ಪಾರ್ಕ್ ಭರವಸೆ

Published On :

ಕನ್ನಡಪ್ರಭ ವಾರ್ತೆ  ತುರುವೇಕೆರೆ  ಮಾ.5
ಬಿ ಎಸ್ ಆರ್ ಪಕ್ಷದ ವತಿಯಿಂದ ಪಟ್ಟಣ ಪಂಚಾಯ್ತಿಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಗೆಲವು ಸಾಧಿಸಿದಲ್ಲಿ ಪಂಚಾಯ್ತಿ ವ್ಯಾಪ್ತಿಯ ಪ್ರತಿ ಮನೆಯ ಮುಂದೆ ಎರಡು ಗಿಡಗಳನ್ನು ನೆಡುವ ಹಾಗೂ ಬಡಾವಣೆಗಳಲ್ಲಿ ಪಾರ್ಕ್ ನಿರ್ಮಾಣ ಮಾಡುವ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ತಾಲೂಕು ಬಿಎಸ್‌ಆರ್ ಅಧ್ಯಕ್ಷ ಸೋಮಶೇಖರ್ ಹೇಳಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು ಬಿಎಸ್‌ಆರ್ ಪಕ್ಷದಿಂದ ಸ್ಪರ್ಧೆ ಬಯಸಿರುವವರು ಸೇವಾ ಮನೋಭಾವ ಉಳ್ಳವರಾಗಿದ್ದಾರೆ. ಸ್ವಂತ ಶಕ್ತಿಯ ಮೇಲೆ ಚುನಾವಣೆಗೆ ಸ್ಪರ್ಧಿಸಿ ಗೆಲವು ಸಾಧಿಸಲಿದ್ದಾರೆ ಎಂದರು. ಪಟ್ಟಣದಲ್ಲಿ ಗಮನಾರ್ಹ ಸಾಧನೆ ಮಾಡಲಿರುವ ಬಿಎಸ್‌ಆರ್ ಕಾಂಗ್ರೆಸ್ ಪಟ್ಟಣದ ಅಭಿವೃಧ್ಧಿಗೆ ಆದ್ಯತೆ ನೀಡಲಿದೆ. ಶುಧ್ಧ ಹಾಗೂ ಪ್ರಾಮಾಣಿಕವಾದ ಆಡಳಿತ ನೀಡುವುದಾಗಿ ಹೇಳಿದರು.
ಪಟ್ಟಣ ಪಂಚಾಯ್ತಿಯಲ್ಲಿ ಕಳೆದ ಬಾರಿ ಸಾಕಷ್ಟು ಅವ್ಯವಹಾರವಾಗಿದೆ. ಸಾರ್ವಜನಿಕರಿಗೆ ದೊರೆಯಬೇಕಾದ ಸವಲತ್ತುಗಳು ಮಂಗಮಾಯವಾಗಿದೆ. ಕಳಪೆ ಕಾಮಗಾರಿಗಳು, ಕಾಮಗಾರಿಗಳು ನಡೆಯದೇ ಹಣ ಮಂಜೂರು ಮಾಡಿರುವ ಪ್ರಕರಣಗಳು ಸೇರಿದಂತೆ ಹಲವಾರು ಅವ್ಯವಹಾರಗಳ ಗೂಡಾಗಿರುವ ಪಟ್ಟಣ ಪಂಚಾಯ್ತಿಯ ವಿರುಧ್ಧ ಸೂಕ್ತ ಹೋರಾಟ ಮಾಡುವುದಾಗಿ ವಿಧಾನ ಸಭಾ ಟಿಕೆಟ್ ಆಕಾಂಕ್ಷಿ ಎಚ್.ಆರ್.ರಾಮೇಗೌಡ ಹೇಳಿದರು. ಪಕ್ಷದ ಮುಖಂಡ ಹಾವಾಳದ ರಾಜಣ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.