ತುಮಕೂರು

ಶಿರಾ 31 ವಾರ್ಡ್‌ಗಳಲ್ಲೂ ಜೆಡಿಎಸ್ ಗೆಲವು: ವಿಶ್ವಾಸ

Published On :

ಕನ್ನಡಪ್ರಭ ವಾರ್ತೆ  ಶಿರಾ ಮಾ.5
ಪಟ್ಟಣದ 31 ವಾರ್ಡ್‌ಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆದ್ದು ನಗರಸಭೆಯ ಆಡಳಿತದ ಚುಕ್ಕಾಣಿ  ಹಿಡಿಯಲಿದ್ದೇವೆ ಎಂದು ರಾಜ್ಯ ಜೆಡಿಎಸ್ ಮುಖಂಡ, ಮಾಜಿ ಸಚಿವ ಬಿ.ಸತ್ಯನಾರಾಯಣ ತಿಳಿಸಿದರು.
ಅವರು ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದು ಮಾತನಾಡುತ್ತ, 31 ವಾರ್ಡ್‌ಗಳಲ್ಲೂ ಅಭ್ಯರ್ಥಿಗಳಿದ್ದಾರೆ. ಪಟ್ಟಣದ ಎಲ್ಲಾ ಮತದಾರರನ್ನು ಭೇಟಿ ಮಾಡಿದ್ದೇವೆ. ಪಕ್ಷದ ಬಗ್ಗೆ ಮತದಾರರು ಹೆಚ್ಚಿನ ಒಲವು ತೋರಿಸುತ್ತಿದ್ದಾರೆ. ಒಗ್ಗಟ್ಟಿನಿಂದ ಉತ್ತಮ ಫಲಿತಾಂಶ ನಿರೀಕ್ಷೆಯಲ್ಲಿ ಹೋರಾಡುತ್ತಿದ್ದೇವೆ ಎಂದರು.
 ಕಳೆದ ಬಾರಿ ಜೆಡಿಎಸ್ 11, ಕಾಂಗ್ರೆಸ್ 10, ಇತರೆ ಕ್ಷೇತ್ರಗಳಲ್ಲಿ ಪಕ್ಷೇತರರು ಗೆದ್ದು ಯಾವುದೇ ಪಕ್ಷಕ್ಕೆ ಬಹುಮತವಿಲ್ಲದೆ ಸಮರ್ಪಕವಾಗಿ ಅಧಿಕಾರ ನಡೆಸಲು ಯಾರಿಗೂ ಸಾಧ್ಯವಾಗಲಿಲ್ಲ. ಈ ಭಾರಿ ಜಡಿಎಸ್‌ಗೆ ಸ್ಪಷ್ಟ ಬಹುಮತ ನೀಡುವುದರ ಮೂಲಕ ಮತದಾರರು ಪಟ್ಟಣದ ಅಭಿವೃದ್ಧಿಯಲ್ಲಿ ಸಹಕರಿಸಬೇಕು ಎಂದರು.
 ಕಳೆದ 5 ವರ್ಷಗಳ ಅವಧಿಯಲ್ಲಿ ಯಾವ ಪಕ್ಷಕ್ಕೂ ಬಹುಮತವಿಲ್ಲದೆ ಯಾರು ಸ್ವತಂತ್ರವಾಗಿ ಕಾರ್ಯ ನಿರ್ವಹಣೆ ಮಾಡಲು ಆಗಲಿಲ್ಲ. ಕ್ಷೇತ್ರದ ಶಾಸಕರು ನಗರಸಭೆ ಆಡಳಿತಕ್ಕೆ ಸಹಕಾರ ನೀಡದೆ ಅವರ ಸ್ವಪ್ರತಿಷ್ಠೆಗೆ ಜನತೆ ಬಲಿಯಾಗಿದ್ದಾರೆ. ಇದೇ ಈ ಚುನಾವಣೆಯ ಅಸ್ತ್ರವಾಗಿ ನಾವು ಬಳಸುತ್ತೇವೆ. ನಾವು ನಗರಸಭೆ ಆಡಳಿತ ಚುಕ್ಕಾಣಿ ಹಿಡಿಯುವುದು ಖಂಡಿತ ಎಂದು ತಿಳಿಸಿದ ಬಿ.ಸತ್ಯನಾರಾಯಣ ಅವರು ಪಟ್ಟಣದ 31 ವಾರ್ಡ್‌ಗಳಲ್ಲೂ ನಮ್ಮ ಅಭ್ಯರ್ಥಿಗಳು ಗೆಲ್ಲುವ ಹಾದಿಯಲ್ಲಿದ್ದಾರೆ ಎಂದರು.
ಉಚ್ಚಾಟನೆ: ಜೆಡಿಎಸ್ ಪಕ್ಷವನ್ನು ಈ ಬಾರಿ ಮತದಾರರು ಬಹುಮತದಿಂದ ಗೆಲ್ಲಿಸಿ ಎಂದು ಮನವಿ ಮಾಡಿದ ಅವರು ಸ್ವಚ್ಛ ಹಾಗೂ ಪಾರದರ್ಶಕ ಆಡಳಿತ ನಾವು ನೀಡುತ್ತೇವೆ. ಪಕ್ಷದ ವಿರುದ್ಧ ಪಕ್ಷದಲ್ಲಿನ ಯಾವುದೇ  ವ್ಯಕ್ತಿಗಳು ನಡೆದುಕೊಂಡರೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗುವುದು. ಈಗಲೂ ಕೆಲವರನ್ನು ಉಚ್ಚಾಟಿಸಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.