ಸ್ಥಳೀಯ ಸಂಸ್ಥೆ ಚುನಾವಣೆ: ಕೈಗೇ ಗೆಲವು
ಕನ್ನಡಪ್ರಭ ವಾರ್ತೆ ಮಧುಗಿರಿ ಮಾ.5
ರಾಜ್ಯದಲ್ಲಿ ಮಾ.7 ರಂದು ನಡೆಯಲಿರುವ ನಗರ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಪರಮೇಶ್ವರ್, ರಾಜ್ಯ ಬಿಜೆಪಿ ಸರ್ಕಾರ ಜನ ವಿರೋಧಿ ನೀತಿ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವುದನ್ನು ಮನಗಂಡಿರುವ ಜನತೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೇ ಮತ ನೀಡಿ, ಪಕ್ಷ ಗೆಲ್ಲುವ ವಿಶ್ವಾಸವಿದ್ದು,ಅಧಿಕಾರದ ಚುಕ್ಕಾಣಿ ಹಿಡಿಯುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.
ಆ ನಿಟ್ಟಿನಲ್ಲಿ ಈ ಚುನಾವಣೆ ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದ್ದು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುವುದು. ಅಧಿಕಾರಕ್ಕೆ ಬಂದ ನಂತರ ನಗರ ಪ್ರದೇಶಗಳಿಗೆ ವಿಶೇಷ ಕಾರ್ಯಕ್ರಮ ರೂಪಿಸುವ ಮೂಲಕ ಎಲ್ಲ ಪಟ್ಟಣಗಳಲ್ಲಿ ಶುದ್ಧ ಕುಡಿವ ನೀರು ಶುದ್ಧೀಕರಣ ಘಟಕ ಸ್ಥಾಪಿಸಿ ಅಗತ್ಯವಿರುವ ಹಣವನ್ನು ಬಜೆಟ್ನಲ್ಲಿ ಒದಗಿಸುವುದು. ಫ್ಲೋರೈಡ್ ಹಚ್ಚಿರುವ ಪಟ್ಟಣಗಳಲ್ಲಿ ಆದ್ಯತೆ ಮೇರೆಗೆ ಕೆಲಸ ಪ್ರಾರಂಭಿಸಿ 5 ವರ್ಷಗಳಲ್ಲಿ ಎಲ್ಲ ನರಸಭೆ, ಪುರಸಭೆಗಳಲ್ಲಿ ಅಗತ್ಯವಿರುವಷ್ಟು ಘಟಕ ಸ್ಥಾಪಿಸುತ್ತೇವೆ. ಶುದ್ಧ ಕುಡಿವ ನೀರು ಪೂರೈಕೆ, ನಗರಸಭೆಗಳಲ್ಲಿ ಮನೆ ಕೊಯ್ಲು ಪದ್ಧತಿ ಕಡ್ಡಾಯ ಮಾಡಿ ಇದ್ಕಕೆ ಕೇಂದ್ರ ಹಾಗೂ ರಾಜ್ಯದಿಂದ ಸಬ್ಸಿಡಿ ನೀಡಲಾಗುವುದು. ಎಲ್ಲ ಪಟ್ಟಣಗಳಿಗೆ ಒಳ ಚರಂಡಿ ವ್ಯವಸ್ಥೆ ಅಳವಡಿಸುವ ನಿಟ್ಟಿನಲ್ಲಿ ನಿರ್ಮಲ ನಗರ ನಿರ್ಮಿಸುವ ಕನಸು ಸಕಾರಗೊಳಿಸುವ ಜತೆಗೆ ಸಣ ಮತ್ತು ಮಧ್ಯಮ ವರ್ಗದ ಪಟ್ಟಣಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ ರಾಜ್ಯಕ್ಕೆ ಬರುತ್ತಿರುವ ಹಣಕ್ಕೆ ಸಮ ಪ್ರಮಾಣದ ರಾಜ್ಯ ಹಣ ಸೇರಿಸಿ 5 ವರ್ಷಗಳಲ್ಲಿ ಒಳ ಚರಂಡಿ ವ್ಯವಸ್ಥೆ ಜಾರಿಗೊಳಿಸಲಾಗುವುದು. ಬಡವರಿಗೆ ನಿವೇಶನ ಮತ್ತು ವಸತಿ ಸೌಕರ್ಯ, ವ್ಯವಸ್ಥಿತ ಪಡಿತರ ಚೀಟಿ, 30 ಕೆಜಿ ಅಕ್ಕಿ, ನಗರ ಹಾಗೂ ಪಟ್ಟಣಗಳ ಸರ್ವತೋಮುಖ ಅಭಿವೃದ್ಧಿಗೆ
ಕಟಿಬದ್ಧರಾಗಿದ್ದೇವೆ. ಮಧುಗಿರಿ ಅಭಿವೃದ್ಧಿ ವಿಚಾರದಲ್ಲಿ ಕುಂಠಿತವಾಗಿದೆ. ಮುಂದಿನ ದಿನಗಲ್ಲಿ ತಾಲೂಕಿನ ಅಭಿವೃದ್ಧಿಗೆ ಪ್ರಮಾಣಿಕವಾಗಿ ಶ್ರಮಿಸುವುದಾಗಿ ಪರಮೇಶ್ವರ್ ಭರವಸೆ ನೀಡಿದರು.
ಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ಎನ್.ರಾಜಣ, ಜಿಲ್ಲಾಧ್ಯಕ್ಷ ಷಫಿ ಅಹಮದ್, ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಸಿ. ವೇಣುಗೋಪಾಲ್, ಜಿ.ಪಂ.ಸದಸ್ಯ ಎಚ್. ಕೆಂಚಮಾರಯ್ಯ, ಎಂ.ಆರ್. ಜಗನ್ನಾಥ್, ಎಂ.ಎಸ್. ಮಲ್ಲಿಕಾರ್ಜುನಯ್ಯ, ಎಂ.ಕೆ.ನಂಜುಂಡಯ್ಯ, ಪಿ.ಸಿ.ಕೃಷಾರೆಡ್ಡಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷೆ ಕೊಂಡವಾಡಿ ಚಂದ್ರಶೇಖರ್, ವಿಶ್ವರಾಧ್ಯ ಇನ್ನು ಅನೇಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

