ಮುಕ್ತ ಮತದಾನಕ್ಕೆ ಜಿಲ್ಲೆ ಸಜ್ಜು
ಕನ್ನಡಪ್ರಭ ವಾರ್ತೆ ತುಮಕೂರು ಮಾ.5
ತುಮಕೂರು ಜಿಲ್ಲೆಯ 10 ನಗರ ಸ್ಥಳೀಯ ಸಂಸ್ಥೆಗಳಲ್ಲಿ 450 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಪೊಲೀಸ್ ಇಲಾಖೆ ಪ್ರಕಾರ 76 ಅತಿಸೂಕ್ಷ್ಮ ಹಾಗೂ 123 ಸೂಕ್ಷ್ಮ ಮತಗಟ್ಟೆಗಳೆಂದು ವರ್ಗೀಕರಿಸಲಾಗಿದೆ.
ತುಮಕೂರು ನಗರಸಭೆಯ ವ್ಯಾಪ್ತಿಯಲ್ಲಿ 218 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ 24 ಅತಿಸೂಕ್ಷ್ಮ, 61 ಸೂಕ್ಷ್ಮ ಹಾಗೂ 133 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳೆಂದು ವರ್ಗೀಕರಿಸಲಾಗಿದೆ. ತಿಪಟೂರು ನಗರಸಭೆಯ ವ್ಯಾಪ್ತಿಯಲ್ಲಿ 46 ಮತಗಟ್ಟೆ ಸ್ಥಾಪಿಸಿದ್ದು, ಈ ಪೈಕಿ 11 ಅತಿಸೂಕ್ಷ್ಮ, 14 ಸೂಕ್ಷ್ಮ ಹಾಗೂ 21 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳು.
ಶಿರಾ ನಗರಸಭೆಯ ವ್ಯಾಪ್ತಿಯಲ್ಲಿ 41 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ 5 ಅತಿಸೂಕ್ಷ್ಮ, 6 ಸೂಕ್ಷ್ಮ ಹಾಗೂ 31 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳೆಂದು ವರ್ಗೀಕರಿಸಲಾಗಿದೆ.
ಕುಣಿಗಲ್ ಪುರಸಭೆಯಲ್ಲಿ 29 ಮತಗಟ್ಟೆ ಸ್ಥಾಪಿಸಿದ್ದು, ಈ ಪೈಕಿ 10 ಅತಿಸೂಕ್ಷ್ಮ, 12 ಸೂಕ್ಷ್ಮ ಹಾಗೂ 7 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳೆಂದು ವರ್ಗೀಕರಿಸಲಾಗಿದೆ.
ಚಿಕ್ಕನಾಯಕನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿ 23 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ 3 ಅತಿಸೂಕ್ಷ್ಮ, 10 ಸೂಕ್ಷ್ಮ ಹಾಗೂ 10 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳೆಂದು ವರ್ಗೀಕರಿಸಲಾಗಿದೆ.
ಮಧುಗಿರಿ ಪುರಸಭೆಯ ವ್ಯಾಪ್ತಿಯಲ್ಲಿ 25 ಮತಗಟ್ಟೆ ಸ್ಥಾಪಿಸಿದ್ದು, ಈ ಪೈಕಿ 5 ಅತಿಸೂಕ್ಷ್ಮ, 3 ಸೂಕ್ಷ್ಮ ಹಾಗೂ 17 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳೆಂದು ವರ್ಗೀಕರಿಸಲಾಗಿದೆ.
ಪಾವಗಡ ಪುರಸಭೆಯ ವ್ಯಾಪ್ತಿಯಲ್ಲಿ 23 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ 5 ಅತಿಸೂಕ್ಷ್ಮ, 6 ಸೂಕ್ಷ್ಮ ಹಾಗೂ 12 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳೆಂದು ವರ್ಗೀಕರಿಸಲಾಗಿದೆ.
ಗುಬ್ಬಿ ಪಟ್ಟಣಪಂಚಾಯತಿ ವ್ಯಾಪ್ತಿಯಲ್ಲಿ 17 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ 3 ಅತಿಸೂಕ್ಷ್ಮ, 2 ಸೂಕ್ಷ್ಮ ಹಾಗೂ 12 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳು.
ತುರುವೇಕೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 14 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ 3 ಅತಿಸೂಕ್ಷ್ಮ, 5 ಸೂಕ್ಷ್ಮ ಹಾಗೂ 6 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳೆಂದು ವರ್ಗೀ ಕರಿಸಲಾಗಿದೆ.
ಕೊರಟಗೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 14 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ 7 ಅತಿಸೂಕ್ಷ್ಮ, 4 ಸೂಕ್ಷ್ಮ ಹಾಗೂ 3 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳೆಂದು ವರ್ಗೀಕರಿಸಲಾಗಿದೆ.
ಆಯಾ ಮತಕ್ಷೇತ್ರಗಳ ಶಾಲಾ ಕಾಲೇಜುಗಳಿಗೆ ರಜೆ
ನಗರ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಮಾ. 7 ರ ಗುರುವಾರ ಆಯಾ ಮತಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ.
ಆದರೆ ಈ ರಜೆಯು ತುರ್ತು ಸೇವೆಗೆ ಅನ್ವಯಿಸುವುದಿಲ್ಲ. ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ಸೂಚಿಸಲಾಗಿದೆ.
ಮತದಾನ ಸುಸೂತ್ರವಾಗಿ ನಡೆಯಲು ಅನುಕೂಲವಾಗುವಂತೆ ಮತದಾನ ನಡೆಯುವ ಮತಗಟ್ಟೆಯನ್ನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದ್ದಲ್ಲಿ ಅಂತಹ ಕಚೇರಿ ಹಾಗೂ ಶಾಲೆಗಳಿಗೆ ಮಾ. 6 ರಂದು ಬುಧವಾರ, (ಪೂರ್ವ ತಯಾರಿಗಾಗಿ) ಹಾಗೂ ಮತ ಎಣಿಕೆ ನಡೆಯುವ ದಿನಾಂಕದಂದು ಮತ ಎಣಿಕೆ ನಡೆಯುವ ಕೇಂದ್ರಗಳಲ್ಲಿ ಮಾತ್ರ ರಜೆ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ಚುನಾವಣಾಧಿಕಾರಿಗಳು ಕ್ರಮ ತೆಗೆದುಕೊಳ್ಳತಕ್ಕದ್ದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ಸೂಚಿಸಿದ್ದಾರೆ.
ವೇತನ ಸಹಿತ ರಜೆ: ನಗರ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಕೃತ ಬ್ಯಾಂಕ್ಗಳು, ಇತರೆ ಬ್ಯಾಂಕ್ಗಳು, ಜೀವವಿಮಾ ನಿಗಮ ಮುಂತಾದ ಕಚೇರಿಗಳಿಗೆ ಸೀಮಿತಗೊಳಿಸಿ, ಸರ್ಕಾರ ಸಾರ್ವಜನಿಕ ರಜೆಯನ್ನು ಘೋಷಿಸಿದೆ. ಹಾಗೆಯೇ ಯಾವುದೇ ಬಿಸಿನೆಸ್ ಟ್ರೇಡ್, ಇಂಡಸ್ಟ್ರೀಯಲ್ ಅಂಡರ್ ಟೇಕಿಂಗ್ ಅಥವಾ ಇನ್ನಿತರ ಎಸ್ಟಾಬ್ಲಿಷ್ಮೆಂಟ್ಗಳಲ್ಲಿ ಮತ್ತು ದಿನಗೂಲಿ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರು ಮತದಾನ ದಿನಾಂಕದಂದು ವೇತನ ಸಹಿತ ರಜೆಗೆ ಅರ್ಹರು.
ಮದ್ಯ ವಹಿವಾಟು ನಿಷೇಧ
ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮತದಾನದ ಹಿಂದಿನ ದಿನ ಮಾರ್ಚ್ 6 ರ ಬೆಳಿಗ್ಗೆ 7 ಗಂಟೆಯಿಂದ ಮಾರ್ಚ್ 7 ರ ಮಧ್ಯರಾತ್ರಿಯವರೆಗೆ ಮತ್ತು ಮತ ಎಣಿಕೆ ದಿನ ಮಾರ್ಚ್ 11 ರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಪಾನನಿರೋಧ ದಿನ ಎಂದು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ತುಮಕೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ವ್ಯಾಪ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ವ್ಯಾಪ್ತಿಯ ಗಡಿ ಪ್ರದೇಶದಿಂದ 3 ಕಿ.ಮೀ. ಪರಿಧಿಯಲ್ಲಿ ಜಾರಿಯಲ್ಲಿರುವಂತೆ ಎಲ್ಲಾ ಮದ್ಯದ ವಹಿವಾಟುಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಕಾರ್ಮಿಕರಿಗೆ ವೇತನ ಸಹಿತ ರಜೆ
ನಗರ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಮಾ. 7 ರಂದು ಜಿಲ್ಲೆಯಲ್ಲಿ ನೋಂದಾಯಿಸಲ್ಪಟ್ಟಿರುವ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಅಂದು ವೇತನ ಸಹಿತ ರಜೆ ಅಥವಾ ಕನಿಷ್ಠ 2 ಗಂಟೆಗಳ ಕಾಲಾವಕಾಶದ ಅನುಮತಿ ನೀಡುವಂತೆ ಕಾರ್ಖಾನೆಗಳ ವ್ಯವಸ್ಥಾಪಕರಿಗೆ ಕಾರ್ಖಾನೆಗಳ ಹಿರಿಯ ಸಹಾಯಕ ನಿರ್ದೇಶಕರು ಕೋರಿದ್ದಾರೆ. ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮತಚಲಾಯಿಸಲು ವೇತನ ಸಹಿತ ರಜೆ ಅಥವಾ ನಿರಂತರ ಕಾರ್ಯಾಚರಣೆಯುಳ್ಳ ಕಾರ್ಖಾನೆಗಳ ಕಾರ್ಮಿಕರು ಅವರ ಹಕ್ಕು ಚಲಾಯಿಸಲು ಸಾಧ್ಯವಾಗುವಂತೆ ಕನಿಷ್ಠ 2 ಗಂಟೆಗಳ ಕಾಲಾವಕಾಶದ ಅನುಮತಿ ನೀಡಲು ಚುನಾವಣಾ ಆಯೋಗ ಆದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಈ ಮೇಲಿನಂತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

