ತುಮಕೂರು

ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿ ಬಿದ್ದು ಸಾವು

Published On :

ಕ.ಪ್ರ. ವಾರ್ತೆ  ಪಾವಗಡ  ಮಾ. 7
ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಬೈಕಿನಿಂದ ಬಿದ್ದು ಸ್ಥಳದಲ್ಲಿಯೆ ಮೃತಪಟ್ಟ ಘಟನೆ ಕೃಷಗಿರಿ ರಸ್ತೆಯಲ್ಲಿ  ಬುಧವಾರ ರಾತ್ರಿ ನಡೆದಿದೆ.  ಮೃತ ವ್ಯಕ್ತಿ ವಿಜಯಕುಮಾರ್ (28) ಎಂದು ಗುರುತಿಸಲಾಗಿದೆ. ಮುಖಂಡರೊಬ್ಬರ ಜೀಪು ಡ್ರೈವರ್ರಾಗಿ ಕೆಲಸ ಮಾಡುತ್ತಿದ್ದ ವಿಜಯಕುಮಾರ್ ಇತ್ತೀಚೆಗೆ ಕೆಲಸ ಬಿಟ್ಟು ಸ್ವಂತ ಕೆಲಸದಲ್ಲಿ ನಿರತರಾಗಿದ್ದರು ಎನ್ನಲಾಗಿದ್ದು ಬುಧವಾರ ರಾತ್ರಿ ಕೃಷಗಿರಿ ಮಾರ್ಗವಾಗಿ ಬೈಕಿನಲ್ಲಿ ಹೋಗುತ್ತಿರುವಾಗ ಬೈಕಿನಿಂದ ಬಿದ್ದ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ರಸ್ತೆ ಮಾರ್ಗವಾಗಿ ಓಡಾಡುತ್ತಿರುವ ಗ್ರಾಮಸ್ಥರು ಘಟನೆ ನೋಡಿ ಕೂಡಲೇ ಠಾಣೆಗೆ ಸುದ್ದಿ ಮುಟ್ಟಿಸಿದ್ದು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಶವವನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಶವ ಪರೀಕ್ಷೆ ಮಾಡಲಾಗಿದೆ. ಈ ಕುರಿತು ಪಿಎಸ್ಐ ರಾಮಕೃಷಪ್ಪ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.