ಮಹಾಶಿವರಾತ್ರಿ: ಗಂಗಾಧರೇಶ್ವರ ಬೆಟ್ಟದಲ್ಲಿ ಲಕ್ಷ ದೀಪೋತ್ಸವ
ಕ.ಪ್ರ. ಕೊರಟಗೆರೆ ಮಾ.8
ನಾಡಪ್ರಭು ರಣಭೈರೇಗೌಡರ ಯುವ ಸೇವಾ ಸಂಘದ ವತಿಯಿಂದ ಮಾ.10ರ ಮಹಾಶಿವರಾತ್ರಿ ಅಂಗವಾಗಿ ಪಟ್ಟಣದ ದಕ್ಷಿಣಕಾಶಿ ಎಂದೇ ಪ್ರಸಿದ್ಧವಾಗಿರುವ ಗಂಗಾಧರೇಶ್ವರಸ್ವಾಮಿ ಬೆಟ್ಟದಲ್ಲಿ ಸಂಜೆ 7 ಗಂಟೆಗೆ ಲಕ್ಷ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ.
ಮಹಾಶಿವರಾತ್ರಿಯಂದು ಗಂಗಾಧರೇಶ್ವರ ಸ್ವಾಮಿಗೆ ವಿಶೇಷ ಪೂಜೆ, ರುದ್ರಾಭೀಷೆಕ, ಹೋಮ, ಹವನ ಪೂಜೆಯನ್ನು ಸಲ್ಲಿಸುವುದರೊಂದಿಗೆ ಗಿರಿಜಾ ಕಲ್ಯಾಣವನ್ನು ನಡೆಸಲಾಗುವುದು.
ಅಂದು ರಾತ್ರಿ 6.30ಕ್ಕೆ ನಾಡಪ್ರಭು ರಣಭೈರೇಗೌಡರ ಯುವ ಸೇವಾ ಸಂಘದಿಂದ ವಿಶೇಷ ವಿದ್ಯುತ್ ದೀಪಾಲಂಕಾರದೊಂದಿಗೆ ಗಂಗಾಧರೇಶ್ವರ ಬೆಟ್ಟದಲ್ಲಿ ಸಿದ್ದರಬೆಟ್ಟ ಕ್ಷೇತ್ರದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಬಾಗಲಕೋಟೆ ಭದ್ರಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ವಿ.ಪಾತರಾಜು ಉದ್ಘಾಟಿಸಲಿದ್ದಾರೆ.
ತಹಸೀಲ್ದಾರ್ ಏಕೇಶ್ಬಾಬು, ಸಿಪಿಐ ಚಂದ್ರಶೇಖರ್ ಭಾಗವಹಿಸಲಿದ್ದಾರೆ. ಮಾ.11ರಂದು ಪಟ್ಟಣದ ತೇರಿನ ಬೀದಿಯಲ್ಲಿ ಮಧ್ಯಾಹ್ನ 12ಕ್ಕೆ ಗಂಗಾಧರೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವವು ನಡೆಯಲಿದೆ.
ಪವಾಡ ಬಯಲು: ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದಲ್ಲಿ ಮಹಾಶಿರಾತ್ರಿಯ ಜಾಗರಣೆ ಅಂಗವಾಗಿ ಇಡೀ ರಾತ್ರಿ ಹುಲಿಕಲ್ ನಟರಾಜು ಅವರಿಂದ ಪವಾಡ ಬಯಲು ಕಾರ್ಯಕ್ರಮ ಏರ್ಪಡಿಸಲಾಗಿದೆ.
ಅಂದು ಮಠದಲ್ಲಿ ಮಹಾಶಿವರಾತ್ರಿ ಅಂಗವಾಗಿ ಬೆಳಿಗ್ಗೆ ವಿಶೇಷ ಪೂಜೆ ಹವನ ರುದ್ರಾಭಿಕ್ಷೇಕ ನಡೆಯಲಿದೆ. ರಾತ್ರಿ 9ಕ್ಕೆ ಜಾಗರಣೆ ಅಂಗವಾಗಿ ಹುಲಿಕಲ್ ನಟರಾಜು ಮತ್ತು ಅವರ ಪುತ್ರಿ ತೇಜಾ ಅವರಿಂದ 350ಕ್ಕೂ ಹೆಚ್ಚು ಪವಾಡ ಬಯಲು ಕಾರ್ಯಕ್ರಮ ನಡೆಯಲಿದೆ. ತಾಲೂಕಿನ ತುಂಬಾಡಿ ಗ್ರಾಮದ ಕೃಷ್ಣಾಚಾರ್ ಸಂಗಡಿಗರಿಂದ ಭಕ್ತಿ ಸುಗಮ ಸಂಗೀತ ಏರ್ಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

