ತುಮಕೂರು

ಮಾನವೀಯ ವಿಕಾಸವೇ ಶಿಕ್ಷಣ

Published On :

ಕ.ಪ್ರ.ವಾರ್ತೆ ್ಣ ಮಧುಗಿರಿ ್ಣ ಮಾರ್ಚ್ 9 ಮಾನವೀಯ ವಿಕಾಸವೇ ಶಿಕ್ಷಣ, ಅರಿವು ಅಂತಃಕರಣದ ಸಮನ್ವಯವೇ ಸೇವೆ ಎಂದು ಹಿರಿಯ ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ನುಡಿದರು.
ಇಲ್ಲಿನ ಸರ್ಕಾರಿ ಪಪೂ ಕಾಲೇಜಿನ ಆವರಣದಲ್ಲಿ ಏರ್ಪಟಾಗಿದ್ದ ಕ್ರೀಡೆ, ಎನ್‌ಎಸ್‌ಎಸ್ ಹಾಗೂ ಸಾಂಸ್ಕೃತಿಕ  ದಿನಾಚರಣೆ ಮುಕ್ತಾಯ ಸಮಾರಂಭದಲ್ಲಿ  ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವ್ಯಕ್ತಿ ಕೇಂದ್ರಿತ ಶಿಕ್ಷಣ ಸಮಾಜಮುಖಿಯಾಗಿ ಅರಳಬೇಕು. ಕಲಿಯುವ ದಿನಗಳಲ್ಲಿ ಏಕಾಗ್ರತೆ, ಶ್ರದ್ಧೆ ಹಾಗೂ ಆತ್ಮ ವಿಶ್ವಾಸ ಅತಿ ಮುಖ್ಯ ಎಂದರು.
ಅಧ್ಯಕ್ಷೆತೆ ವಹಿಸಿದ್ದ ಪ್ರಾಂಶುಪಾಲ ಚಿನ್ನತಿಮ್ಮಪ್ಪ ಸಾಧಕನ ಕಾರ್ಯ ಕ್ಷೇತ್ರದಲ್ಲಿ ಗುರಿ ಮುಟ್ಟಲು ಗುರು
ಬೇಕು. ಆ ನಿಟ್ಟಿನಲ್ಲಿ ಹೆಚ್ಚು  ಓದುವ ಹವ್ಯಾಸ ಬೆಳಸಿಕೊಂಡು ಅತ್ಯುತ್ತಮ ಅಂಕ ಗಳಿಸುವ ಮೂಲಕ ಹೆತ್ತವರಿಗೆ, ಶಿಕ್ಷಕರಿಗೆ ಗೌರವ ತರಬೇಕು ಎಂದರು.
ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಉಪನ್ಯಾಸಕರಾದ ಲತಾ, ಛಾಯಾದೇವಿ, ಸಂಗೀತ, ನಾಗರತ್ನ, ಎನ್‌ಎಸ್‌ಎಸ್ ಅಧಿಕಾರಿ ಕೆ.ರಂಗನಾಥ್, ಸೋಮಶೇಖರ್, ರಂಗಪ್ಪ, ಲಿಂಗರಾಜು ಮತ್ತಿತರರು ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.