13ರಂದು ಶರಣರ ಸೂಳ್ನುಡಿ ಕಾರ್ಯಕ್ರಮ
ತುಮಕೂರು: ತುಮಕೂರು ವಿವಿ ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ ಹಾಗೂ ಬಸವ ತತ್ವ ಅಧ್ಯಯನ ಕೇಂದ್ರದ ವತಿಯಿಂದ ಮಾ. 13 ರಂದು ಬೆಳಗ್ಗೆ 11 ಗಂಟೆಗೆ ಸರ್.ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಶರಣರ ಸೂಳ್ನುಡಿ ಕಾರ್ಯಕ್ರಮ ಏರ್ಪಾಟಾಗಿದೆ. ಚಿತ್ರದುರ್ಗ ಬೃಹನ್ಮಠದ ಪೀಠಾಧ್ಯಕ್ಷರು ಹಾಗೂ ವಿಶ್ವ ಬಸವ ಕೇಂದ್ರಗಳ ಅಧ್ಯಕ್ಷರಾದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ತುಮಕೂರು ವಿವಿ ಕುಲಪತಿ ಡಾ.ಎಸ್.ಸಿ. ಶರ್ಮ ವಹಿಸಲಿದ್ದಾರೆ. ಕುಲಸಚಿವ ಪ್ರೊ. ಡಿ. ಶಿವಲಿಂಗಯ್ಯ ಉಪಸ್ಥಿತರಿರುವರು.
ಎನ್ಎಸ್ಎಸ್ ಶಿಬಿರ
ಕುಣಿಗಲ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕೋಡಿಹಳ್ಳಿಪಾಳ್ಯ ಕೊತ್ತಗರೆ ಹೋಬಳಿ ಗ್ರಾಮದಲ್ಲಿ ಎನ್ಎಸ್ಎಸ್ ವಿಶೇಷ ಶಿಬಿರವನ್ನು 7 ದಿನಗಳ ಕಾಲ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಪಿಯೂ ನಿವೃತ್ತ ಜಂಟಿ ನಿರ್ದೇಶಕ ಪ್ರೊ. ಟಿ. ಗಂಗಾಧರಯ್ಯ, ಪ್ರೊ. ಎಚ್.ವಿ. ವೇಣುಗೋಪಾಲ್ ಪಾಲ್ಗೊಂಡಿದ್ದರು. ಡಾ.ಎಂ. ಕೊಟ್ರೇಶ್ ಎನ್ಎಸ್ಎಸ್ ಧ್ಯೇಯೋದ್ದೇಶಗಳನ್ನು ತಿಳಿಸಿ, ಎನ್ಎಸ್ಎಸ್ಗೆ ಭಾವೈಕ್ಯತೆ ಮೂಡಿಸುವ ಕಾರ್ಯಕ್ರಮವಾಗಿದೆ ಎಂದರು. ಅಧ್ಯಕ್ಷತೆಯನ್ನುಆರ್. ಪುಟ್ಟರಾಜು ವಹಿಸಿದ್ದರು. ಶಿಬಿರಾಧಿಕಾರಿ ಪ್ರೊ. ಜಿ. ತಿಪ್ಪೇಸ್ವಾಮಿ, ಎಂ.ಎಸ್. ನಾಗರಾಜು, ಚಂದ್ರೇಶೇಖರಯ್ಯ ಉಪಸ್ಥಿತರಿದ್ದರು.
ಕಣ್ಣಿನ ಉಚಿತ ತಪಾಸಣೆ
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ತುಮಕೂರಿನ ಡಿಡಿಪಿಐ ಕ:ಕೇರಿ ರಸ್ತೆಯಲ್ಲಿರುವ ವಾಸನ್ ಐ ಕೇರ್ ಸೆಂಟರ್ ವತಿಯಿಂದ ಉಚಿತ ಕಣ್ಣಿನ ತಪಾಸಣೆಯನ್ನು ಮಾ. 25 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ತಪಾಸಣಾ ಶಿಬಿರ ಮಹಿಳೆಯರಿಗೆ ಮಾತ್ರ ಸೀಮಿತ. 16 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರು ಆಸ್ಪತ್ರೆ ಅವಧಿಯಲ್ಲಿ ಬೆಳಗ್ಗೆ 9 ರಿಂದ ರಾತ್ರಿ 8 ರವರೆಗೆ ಈ ಸೌಲಭ್ಯ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8095597241, 0816 -3989000 ಸಂಪರ್ಕಿಸಿ.
ಭಸ್ಮಾಂಗಿ
ಬೆಟ್ಟದಲ್ಲಿ ಪೂಜೆ
ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿ ಸಿಂಗರಾವುತನಹಳ್ಳಿಯ ಏಕಶಿಲಾ ಭಸ್ಮಾಂಗಿ ಬೆಟ್ಟದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ರಾತ್ರಿ 8 ಗಂಟೆಯಿಂದ ಮಹಾರುದ್ರಾಭಿಷೇಕ, ಜಾಗರಣೆ, ಧಾರ್ಮಿಕ ಸಭೆ ಹಾಗೂ ವಿವಿಧ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಜಾತ್ರಾ ಮಹೋತ್ಸವ
ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿ ಸತ್ತೇರಾಮನಹಳ್ಳಿ ಗ್ರಾಮದ ಶ್ರೀ ಗುರುಚನ್ನಬಸವೇಶ್ವರ ಸ್ವಾಮಿ ಮತ್ತು ಶ್ರೀ ಪ್ಲೇಗಿನಮ್ಮದೇವಿಯ ಜಾತ್ರಾ ಮಹೋತ್ಸವವು ಮಾ.11ರಿಂದ 13ರವರೆಗೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

