ತುಮಕೂರು

ಕಲಿಕೆಗೆ ಯಾವುದೇ ಮಿತಿಯಿಲ್ಲ: ಸಿದ್ದಲಿಂಗಶ್ರೀ

Published On :

ಕ.ಪ್ರ. ವಾರ್ತೆ ್ಣ ತುಮಕೂರು ್ಣ ಮಾ.12
ಕಲಿಕೆಗೆ ಯಾವುದೇ ಮಿತಿಯಿಲ್ಲ ಎಂದು ಸಿದ್ದಗಂಗಾ ಮಠದ ಕಿರಿಯಶ್ರೀ ಸಿದ್ದಲಿಂಗಸ್ವಾಮೀಜಿ ಅಭಿಪ್ರಾಯಪಟ್ಟರು.
ಇಲ್ಲಿನ ಕಣ್ಮುಚ್ಚಾಲೆ ಮಕ್ಕಳ ಗುಂಪು ಸಿದ್ದಗಂಗಾ ಮಠದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಸಿದ್ದಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಕೃತಿ ಬಿಡುಗಡೆ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಕಲಿಕೆಗೆ ಯಾವುದೇ ವಯಸ್ಸಿನ ಮಿತಿಯಾಗಲಿ, ನಿರ್ಬಂಧವಾಗಲಿ ಇಲ್ಲ ಎಂದ ಶ್ರೀಗಳು, ಇದೆ ಸಂದರ್ಭದಲ್ಲಿ ಕಣ್ಮುಚ್ಚಾಲೆ ಗುಂಪಿನ ಕಾರ್ಯವೈಖರಿ ಶ್ಲಾಘಿಸಿದರು.
ಸಾಹಿತಿ ಹೆಚ್.ವಿ.ವೀರಭದ್ರಯ್ಯ ಮಾತನಾಡಿ, ಐವಾರ್ ಅವರ ಕೃತಿ ಉತ್ತಮವಾಗಿದೆ. ಕಣ್ಮುಚ್ಚಾಲೆ ಮಕ್ಕಳ ಗುಂಪು ಸಾಹಿತ್ಯ ಬೆಳವಣಿಗೆಯಲ್ಲಿ ನಿರಂತರವಾಗಿ ಶ್ರಮಿಸುತ್ತಾ ಬಂದಿದ್ದು, ಸಾರ್ಥಕ ಕೆಲಸ ಮಾಡುತ್ತಿದೆ ಎಂದರು.
ವೀರಶೈವ ಮಹಿಳಾ ಸಮಾಜ ಅಧ್ಯಕ್ಷೆ ರೇಣುಕಾ ಪರಮೇಶ್ ಅಧ್ಯಕ್ಷತೆ ವಹಿಸಿದ್ದರು.
ಮಕ್ಕಳ ಕವಿಗೋಷ್ಠಿ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಸಿದ್ದರಾಜ ಐವಾರ್, ಉಪನ್ಯಾಸಕಿ ಜಿ. ದೇವಿಕಾ, ತುಮಕೂರು ವಾಣಿ ಸಂಪಾದಕ ಕೆ. ಗಣೇಶಪ್ರಸಾದ್, ಗಾಯಕಿ ಲಕ್ಷ್ಮಿ, ಸಾಹಿತಿ ಚಂದ್ರಶೇಖರ ತೋಟದ, ಕಲಾವಿದೆ ಜಿ.ಭಾಗ್ಯಮ್ಮ, ಆರೋಗ್ಯ ಇಲಾಖೆಯ ಟಿ.ಆರ್. ಶಾರದಮ್ಮ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.