ತುಮಕೂರು

ಗುಬ್ಬಿ:ಮತ್ತೆ ಜೆಡಿಎಸ್ ಜಯಭೇರಿ

Published On :

ಗುಬ್ಬಿ: ಗುಬ್ಬಿ ಪಟ್ಟಣ ಪಂಚಾಯ್ತಿಯ 17 ವಾರ್ಡ್‌ಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಜೆಡಿಎಸ್ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಹಿಡಿಯಲು ಸ್ವಷ್ಟ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದೆ.  
ಕಳೆದ ಬಾರಿ 11 ಸ್ಥಾನ ಗಳಿಸಿದ್ದ ಜೆಡಿಎಸ್ ಈ ಬಾರಿ 12 ಸ್ಥಾನ ಗೆಲ್ಲುವ ಮೂಲಕ ಗುಬ್ಬಿಪಟ್ಟಣ ಪಂಚಾಯ್ತಿ ಆಡಳಿತವನ್ನು ಮತ್ತೆ ವಶಕ್ಕೆ ತೆಗೆದು ಕಂಡಿದೆ. ಇಬ್ಬರು ಮಾಜಿ ಅಧ್ಯಕ್ಷರು ನಾಲ್ಕು ಜನ ಹಾಗೂ ಮಾಜಿ ಉಪಾಧ್ಯಕ್ಷರು ಮೂವರು ಮಾಜಿ ಸದಸ್ಯರು ಪುವರಾಯ್ಕೆಯಾಗಿದ್ದುಸ ಏಳು ಜನ ಹೊಸಬರು ಗುಬ್ಬಿ ಪಟ್ಟಣ ಪಂಚಾಯ್ತಿ ಪ್ರವೇಶ ಪಡೆದಿದ್ದಾರೆ.  ಕಳದ ಅವಧಿಯಲ್ಲಿ ಪಟ್ಟಣ ಪಂಚಾಯ್ತಿ ಅಧಿಕಾರ ಚುಕ್ಕಾಣಿ ಹಿಡಿದಿದ್ದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಜನಪರ ಸೇವೆಯನ್ನು ಗುಬ್ಬಿ ಪಟ್ಟಣದ ಜನತೆ ಪರಿಗಣಿಸಿದ್ದು, ಪ್ರಸಕ್ತ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಒಂದು ಸ್ಥಾನ ಹೆಚ್ಚು ನೀಡುವ ಮೂಲಕ ಮತ್ತೆ ಪಟ್ಟಣ ಪಂಚಾಯ್ತಿ ಆಡಳಿತವನ್ನು ಜೆಡಿಎಸ್‌ಗೆ ನೀಡಿದ್ದಾರೆ.  ಕೆಜಿಪಿ 3 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ. ಕಾಂಗ್ರೆಸ್ ನಿಂದ ಇಬ್ಬರು ಆಯ್ಕೆಯಾಗಿದ್ದಾರೆ.  ಬಿಜೆಪಿಯ ಬಹುತೇಕ ಅಭ್ಯರ್ಥಿಗಳು ಠೇವಣಿ ಉಳಿಸಿಕೊಳ್ಳಲಾಗದೆ ತೀವ್ರ ಮುಖಭಂಗ ಅನುಭವಿಸುವಂತಾಗಿದೆ.ವಿಜೇತ ಸದಸ್ಯರು ಶಾಸಕ ಶ್ರೀನಿವಾಸ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಮೆರವಣಿಗೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.