ತುಮಕೂರು

ಸುದ್ದಿ ಸಂಕ್ಷೇಪ

Published On :

ಬಿಎಸ್‌ಆರ್‌ಗೆ ಬಳ್ಳಾರಿಯಲ್ಲೇ ನೆಲೆ ಇಲ್ಲ: ಶಾಸಕ
ಪಾವಗಡ: ಮಾಜಿ ಸಚಿವ ಸತೀಶ್ ಜಾರಕಿ ಹೊಳಿ ಅವರ ಬಿರುಗಾಳಿಗೆ ಬಿಎಸ್‌ಆರ್ ಅಧ್ಯಕ್ಷ ಶ್ರೀರಾಮುಲು ಫ್ಯಾನ್ ಧೂಳೀಪಟವಾಗಲಿದೆ ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು.ಎಸ್.ಟಿ.ಜನಾಂಗದ ಸಂಘಟನೆಯ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ದರು. ಜನಾಂಗದ ಅಭಿವೃದ್ಧಿ ಹಾಗೂ ಶಕ್ತಿಶಾಲಿ ಸಂಘಟನೆಯ ಹಿನ್ನಲೆಯಲ್ಲಿ ಮಾಜಿ ಸಚಿವ ಸತೀಶ್ ಜಾರಕಿ ಹೊಳಿ ಅವರು ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದು, ಅವರ ದೂರದೃಷ್ಟಿ ಹಾಗೂ ನಾಯಕ ಜನಾಂಗ ಅಭಿವೃದ್ಧಿ ಪರಿಕಲ್ಪನೆ ಯಶಸ್ವಿಯಾಗಲೆಂದು ಅಶಿಸಿದರು. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಾಸಕರು, ಅವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿದ್ದ ಆನೇಕ ಮಂತ್ರಿಗಳು ಜೈಲು ಸೇರಿ ರಾಜ್ಯಕ್ಕೆ ಕೆಟ್ಟ ಹೆಸರು ತಂದಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ಜನತೆ ಬಿಜೆಪಿಗೆ ಬುದ್ಧಿ ಕಲಿಸುವ ಕಾಲ ಹತ್ತಿರದಲ್ಲಿದೆ. ಅಲ್ಲದೆ ಭ್ರಷ್ಟರ ಬಿಜೆಪಿ, ನಿಜವಾದ ಬಿಜೆಪಿ, ಹಾಗೂ ಫ್ಯಾನ್ ಬಿಜೆಪಿಯೆಂದು ರಾಜ್ಯದಲ್ಲಿ ಬಿಜೆಪಿ ಮೂರು ಹೋಳಾಗಿದೆ ಎಂದು ವ್ಯಂಗ್ಯವಾಡಿದರು.
ವಸ್ತು ಪ್ರದರ್ಶನ ನಾಳೆ ಮುಕ್ತಾಯ
ತುಮಕೂರು: ಸಿದ್ದಗಂಗೆಯಲ್ಲಿ ನಡೆಯುತ್ತಿರುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಮುಕ್ತಾಯ ಸಮಾರಂಭವನ್ನು ಮಾ.14 ರಂದು ಸಂಜೆ 6-30ಕ್ಕೆ ಏರ್ಪಡಿಸಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿಸಿಂಗ್ ಸಮಾರೋಪ ಭಾಷಣ ಮಾಡಲಿದ್ದಾರೆ. ವಿಧಾನಪರಿಷತ್ ಸದಸ್ಯ ಡಾ.ಎಂ.ಆರ್. ಹುಲಿನಾಯ್ಕರ್ ಬಹುಮಾನ ವಿತರಿಸಲಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಬಸವರಾಜು, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸದಾಶಿವರೆಡ್ಡಿ ಬಿ. ಪಾಟೀಲ್, ಹೆಚ್ಚುವರಿ ಕಾರ್ಯದರ್ಶಿ ಎಂ.ಬಿ. ಬುರ್ಜಿ, ಕೆಐಎಡಿಬಿ ವ್ಯವಸ್ಥಾಪಕ ನಿರ್ದೇಶಕ ಎಂ.ಬಿ. ದ್ಯಾಬೇರಿ, ಟೂಡಾ ಅಧ್ಯಕ್ಷ ಎಸ್.ಆರ್. ಶ್ರೀಧರಮೂರ್ತಿ, ಮೈದಾಳ ಗ್ರಾಪಂ ಅಧ್ಯಕ್ಷೆ ನಳಿನಾ ಮತ್ತಿತರರು ಪಾಲ್ಗೊಳ್ಳಲ್ಲಿದ್ದಾರೆ. ಸಂಸದ  ಬಸವರಾಜ್ ಅಧ್ಯಕ್ಷತೆವಹಿಸಲಿದ್ದಾರೆ. ಸಿದ್ದಗಂಗಾಶ್ರೀಗಳು ಸಾನ್ನಿಧ್ಯ ವಹಿಸಲಿದ್ದು, ಸಿದ್ದಲಿಂಗ ಸ್ವಾಮೀಜಿ ಉಪಸ್ಥಿತರಿರುವರು.
ಜೆಡಿಎಸ್‌ಗೆ ನೇಮಕ
ತಿಪಟೂರು: ತಾಲೂಕು ಜೆಡಿಎಸ್‌ನ ಹಿರಿಯ ಕಾರ್ಯದರ್ಶಿಯಾಗಿ ಆರ್.ಎಸ್.ರಾಜಶೇಖರ ಅವರನ್ನು ಆಯ್ಕೆಮಾಡಲಾಗಿದೆ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಗುರುಮೂರ್ತಿ ತಿಳಿಸಿದ್ದಾರೆ.  ಇದೇ ಸಂದರ್ಭದಲ್ಲಿ ತಾಲೂಕು ಹಿರಿಯ ಕಾರ್ಯದರ್ಶಿ ಸ್ಥಾನ ದೊರೆಯಲು ಕಾರಣರಾದ ತಾಲೂಕು ಜೆಡಿಎಸ್ ಅಧ್ಯಕ್ಷ ಅಧ್ಯಕ್ಷ ಗುರುಮೂರ್ತಿ, ಮುಖಂಡರಾದ ಜಕ್ಕನಹಳ್ಳಿ ಲಿಂಗರಾಜು, ಮಹಾಪ್ರಧಾನ ಕಾರ್ಯದರ್ಶಿ ಶಿವಶಂಕರ್, ನಗರಾಧ್ಯಕ್ಷ ನಟರಾಜು ಮತ್ತಿತರರನ್ನು ಆರ್.ಎಸ್.ರಾಜಶೇಖರ ಅಭಿನಂದಿಸಿದ್ದಾರೆ.
ಇಂದಿನಿಂದ ಆರೋಗ್ಯ, ಅಧ್ಯಾತ್ಮಿಕ ಪ್ರವಚನ
ಕುಣಿಗಲ್: ಪಟ್ಟಣದ ವೀರಶೈವ ಸಮಾಜ, ಥಿಯೋಸಾಫಿಕಲ್ ಸೊಸೈಟಿ, ಪತಂಜಲಿ ಯೋಗ ಸಮಿತಿ ಸೇರಿದಂತೆ ಇತರೆ ಸಂಘ, ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 13 ರಿಂದ 28ರವರೆಗೆ ಧಾರವಾಡದ ಗುರುಬಸವಾ ಮಹಾಮನೆ ಚನ್ನಯ್ಯಗಿರಿ ಮನಗುಂಡಿಯ ಬಸವಾನಂದ ಸ್ವಾಮೀಜಿ ಅವರಿಂದ ರೋಗದಿಂದ ಯೋಗದ ಕಡೆಗೆ ಎಂಬ ಆರೋಗ್ಯ ಮತ್ತು ಅಧ್ಯಾತ್ಮಿಕ ಪ್ರವಚನ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಶಿಬಿರವು ಮೂರು ದಿನಂಪ್ರತಿ ಮೂರು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತ ಪುರಸಭೆ ರಂಗಮಂದಿರದಲ್ಲಿ ಬೆಳಗ್ಗೆ 5.30 ರಿಂದ 6.30 ಮೂರನೇ ಹಂತ ಸಂಜೆ 6.30 ರಿಂದ 8 ಗಂಟೆವರೆಗೆ ಇರಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.