ನೀರು ಪೂರೈಕೆಯಲ್ಲಿ ಗ್ರಾಪಂ ವಿಫಲ
ಕುಣಿಗಲ್: ಸಮರ್ಪಕ ಕುಡಿಯುವ ನೀರು ಪೂರೈಕೆಯಲ್ಲಿ ಗ್ರಾಮ ಪಂಚಾಯಿತಿ ವಿಫಲವಾಗಿದೆ ಎಂದು ಆರೋಪಿಸಿ, ಗ್ರಾಮಸ್ಥರು ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಡಿ. ಹೊಸಹಳ್ಳಿ ಗ್ರಾಪಂನಲ್ಲಿ ನಡೆದಿದೆ. ಡಿ.ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ ಸಿಂಗೋನಹಳ್ಳಿ ಸುತ್ತಮುತ್ತಲ ಗ್ರಾಮಗಳಲ್ಲಿ ತೀವ್ರ ಕುಡಿಯುವ ನೀರಿನ ಬವಣೆ ಇದ್ದು, ಸಮಸ್ಯೆ ಬಗೆಹರಿಸುವಂತೆ ಗ್ರಾಪಂಗೆ ಹಲವಾರು ಬಾರಿ ಆಗ್ರಹಿಸಿದ್ದರೂ, ಸಂಬಂಧಪಟ್ಟ ಗ್ರಾಪಂ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ, ಸಿಂಗೋನಹಳ್ಳಿ ಸುತ್ತಮುತ್ತಲ ಗ್ರಾಮಸ್ಥರು, ಡಿ.ಹೊಸಹಳ್ಳಿ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ, ಗ್ರಾಪಂನ ಕಾರ್ಯ ವೈಖರಿಯನ್ನು ಖಂಡಿಸಿದರು. ಗ್ರಾಮಸ್ಥರ ಪ್ರತಿಭಟನೆ ಅರಿತ ಗ್ರಾಪಂ ಅಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ನಾರಾಯಣ ಸ್ಥಳಕ್ಕೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಚರ್ಚಿಸಿದ್ದು, ಗ್ರಾಮಸ್ಥರು ಅಧ್ಯಕ್ಷರು ಹಾಗೂ ಕಾರ್ಯದರ್ಶಿಯೊಂದಿಗೆ ವಾಗ್ವಾದ ನಡೆಸಿ ಅಸಮಾಧಾನ ವ್ಯಕ್ತಪಡಿಸಿದರು. ಕೊನೆಗೆ ಗ್ರಾಪಂ ಅಧ್ಯಕ್ಷ, ಸಮಸ್ಯೆಗೆ ಕೂಡಲೇ ಸ್ಪಂದಿಸಿ, ಸಾಧ್ಯವಿರುವ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಹಿಂಪಡೆದರು. ಗ್ರಾಮದ ಪ್ರಮುಖರಾದ ಸೊಬಗಯ್ಯ, ಉಮೇಶ, ಕುಂಟಯ್ಯ, ಚಲುವರಾಜು ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

