ಅಕ್ರಮ ಮರಳು ಸಾಗಣೆ: 9 ಲಾರಿಗಳ ವಶ
ಕೊರಟಗೆರೆ: ಕೊರಟಗೆರೆ ತಹಸೀಲ್ದಾರ್ ಏಕೇಶ್ ಬಾಬು ನೇತೃತ್ವದ ತಂಡ ಗುರುವಾರ ಬೆಳಗಿನ ಜಾವ 2 ಗಂಟೆ ಸಮಯದಲ್ಲಿ ತಾಲೂಕಿನ ಜಿ.ನಾಗೇನಹಳ್ಳಿಯಲ್ಲಿ ಮರಳು ಸಾಗಿಸುತ್ತಿದ್ದ 3 ಲಾರಿಗಳನ್ನು, ಮತ್ತು ತುಂಬಗಾನಹಳ್ಳಿಯಲ್ಲಿ ಬೆಳಿಗ್ಗೆ 4 ಗಂಟೆಗೆ 6 ಲಾರಿಗಳನ್ನು, ಮತ್ತು 1 ಇಟಾಚಿಯನ್ನು ವಶಪಡಿಸಿಕೊಂಡಿದ್ದಾರೆ. ಈ ತಂಡದಲ್ಲಿ ಗುರುಪ್ರಸಾದ್, ನರಸಿಂಹಮೂರ್ತಿ ಎ.ಡಿ.ಎಂ, ಮಧು ಚಂದ್ರ, ನೀಲಕಂಠಯ್ಯ ಮತ್ತಿತರು ಇದ್ದರು.
ಚೇತರಿಕೆ ಹಾದಿಯಲ್ಲಿ ಕಾಂಗ್ರೆಸ್ ಪಕ್ಷ...
ಸಕಲೇಶಪುರ: ಪುರಸಭೆ ಚುನಾವಣೆಯಲ್ಲಿ ಗಣನೀಯ ಪ್ರಗತಿ ಸಾಧಿಸಿರುವ ಕಾಂಗ್ರೆಸ್ ಇದೀಗ ಚೇತರಿಕೆಯ ಹಾದಿಯಲಿದೆ ಎಂದು ತಾಲೂಕು ಕಾಂಗ್ರೆಸ್ ಅಧ್ಯಕ್ಷ ತೋಟದಗದ್ದೆ ವಿದ್ಯಾಶಂಕರ್ ಹೇಳಿದರು. ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಪುರಸಭೆ ಚುನಾವಣೆಯ 23 ವಾರ್ಡ್‌ಗಳಲ್ಲಿ 6 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವುಗಳಿಸಿದ್ದು ಇನ್ನೂ 4 ವಾರ್ಡ್‌ಗಳಲ್ಲಿ ಒಂದಂಕಿ ಮತಗಳಿಂದ ನಮ್ಮ ಅಭ್ಯರ್ಥಿ ಸೋತಿದ್ದರೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಎರಡನೇ ಸ್ಥಾನಗಳಿಸಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಶೇಕಡಾವಾರು ಮತಗಳ ಸಂಖ್ಯೆ ಹೆಚ್ಚಿದೆ. ಅಲ್ಲದೆ ಕಳೆದ ತಿಂಗಳು ನಡೆದ ವಣಗೂರು ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಇಬ್ಬರು ಆಯ್ಕೆಯಾಗುವ ಮೂಲಕ ಚೇತರಿಕೆಯ ಮುನ್ಸೂಚನೆ ನೀಡಿದ್ದು ಗ್ರಾಮೀಣ ಮಟ್ಟದಲ್ಲೂ ಪ್ರಗತಿ ಸಾಧಿಸಿದ್ದೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

