ಜೆಡಿಎಸ್ನಿಂದ ಯುವಕರಿಗೆ ಸ್ಪರ್ಧಿಸಲು ಅವಕಾಶ ನೀಡಿ
ತುರುವೇಕೆರೆ, ಮಾ,15. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತುರುವೇಕೆರೆ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಜಾತ್ಯತೀತ ಜನತಾದಳದಿಂದ ಯುವಕರಿಗೆ ಆದ್ಯತೆ ನೀಡಬೇಕು ಎಂದು ಅಖಿಲ ಕರ್ನಾಟಕ ಎಚ್. ಡಿ. ಕುಮಾರಸ್ವಾಮಿ ಅಭಿಮಾನಿ ಸಂಘದ ರಾಜ್ಯ ಸಂಚಾಲಕ ಚಂದ್ರಾಪುರದ ಚೇತನ್ ರಂಗನಾಥ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರಿಗೆ ಮನವಿ ಮಾಡಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕ್ಷೇತ್ರದಲ್ಲಿ ಜೆಡಿಎಸ್ ಬಲವರ್ಧನೆಗೊಂಡಿದೆ. ಕ್ಷೇತ್ರದಾದ್ಯಂತ ಪಕ್ಷಭೇದವಿಲ್ಲದೇ ಕುಮಾರಸ್ವಾಮಿಯವರನ್ನು ಬೆಂಬಲಿಸುವವರು ಇದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಜೆ ಡಿಎಸ್ನ ಶಾಸಕರಾದಿಯಾಗಿ ಕೆಲವು ಮುಖಂಡರು ಸಾರ್ವಜನಿಕರ ಎದುರು ಜಗಳಕ್ಕಿಳಿದು ಕ್ಷೇತ್ರದಾದ್ಯಂತ ಅಪಮಾನಕ್ಕೀಡಾಗಿದ್ದಾರೆ. ಇವರು ಮಾಡಿರುವ ಪ್ರಮಾದದಿಂದ ಜೆಡಿಎಸ್ನ ಕಾರ್ಯಕರ್ತರು ಹಾಗೂ ಮತದಾರರು ತಲೆ ತಗ್ಗಿಸುವಂತಾಗಿದೆ. ಆದ್ದರಿಂದ ಟಿಕೆಟ್ ಆಕಾಂಕ್ಷಿಯಾಗಿರುವ ಶಾಸಕ ಎಂ.ಟಿ.ಕೃಷ್ಣಪ್ಪ ಹಾಗೂ ಜೆಡಿಎಸ್ನ ಮುಖಂಡ ಬಿ.ಕೆ.ಸೋಮಣ್ಣನವರಿಗೆ ಸ್ಪರ್ಧೆಗೆ ಅವಕಾಶ ನೀಡದೇ ಪಕ್ಷದಲ್ಲಿ ದುಡಿಯುತ್ತಿರುವ ಯುವಕರಿಗೆ ಆದ್ಯತೆ ನೀಡಬೇಕಾಗಿ ಕುಮಾರಸ್ವಾಮಿಯವರನ್ನು ವಿನಂತಿಸಿಕೊಂಡರು.
ಸ್ಪರ್ಧೆಗೆ ಸಿದ್ಧ: ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ತಮಗೆ ಸ್ಪರ್ಧಿಸಲು ಅವಕಾಶ ನೀಡಿದಲ್ಲಿ ಕಣಕ್ಕಿಳಿಯುವುದಾಗಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ಚೇತನ್ ರಂಗನಾಥ್ ಸ್ಪಷ್ಟಪಡಿಸಿದರು. ತಮ್ಮ ತಂದೆಯವರಾದ ರಂಗನಾಥ್ ಅವರು ಜೆಡಿಎಸ್ ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ಹೊಂದಿದ್ದರು. ಹೆಚ್.ಡಿ.ದೇವೇಗೌಡರ ಒಡನಾಡಿಯೂ ಆಗಿದ್ದರು. ಹೆಚ್.ಡಿ.ಕುಮಾರಸ್ವಾಮಿಯವರು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡ ದಿನದಿಂದ ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ತಂದೆಯವರು ಪಕ್ಷಕ್ಕಾಗಿ ಹೋರಾಟ ಮಾಡಿದ ಅನುಭವ ತಮ್ಮನ್ನು ರಾಜಕಾರಣಕ್ಕೆ ಸೆಳೆಯುವಂತೆ ಮಾಡಿರುವುದರಿಂದ ತಾವೂ ಸಹ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧೆ ಮಾಡಲು ಉತ್ಸುಕರಾಗಿರುವುದಾಗಿ ಚೇತನ್ ರಂಗನಾಥ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

