ಸಂಭಾವನೆ ಹೆಚ್ಚಳ- ಹರ್ಷ (ಸುದ್ದಿ ಸಂಕ್ಷೇಪ)
ತುಮಕೂರು: ರಾಜ್ಯದ ಗ್ರಾ.ಪಂ. ಗ್ರಂಥಾಲಯಗಳ ಮೇಲ್ವಿಚಾರಕರ ಸಂಭಾವನೆಯನ್ನು 2500 ರು. ನಿಂದ 5500 ರು. ಗೆ ಹೆಚ್ಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದ್ದಕ್ಕೆ ರಾಜ್ಯ ಸರ್ಕಾರಿ ಗ್ರಾ.ಪಂ. ಗ್ರಂಥಾಲಯಗಳ ಮೇಲ್ವಿಚಾರಕ ಸಂಘದ ಜಿಲ್ಲಾ ಸಮಿತಿ ಹರ್ಷ ವ್ಯಕ್ತಪಡಿಸಿದೆ. ಸಂಭಾವನೆ ಹೆಚ್ಚಳಕ್ಕೆ ಕಾರಣರಾದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ರಾಜ್ಯ ಸಂಘದ ಗೌರವಾಧ್ಯಕ್ಷ ಆರಗ ಜ್ಞಾನೇಂದ್ರ ಅವರಿಗೆ ರಾಜ್ಯ ಸಂಘದ ಅಧ್ಯಕ್ಷ ನಾಗಭೂಷಣ್ ಸೇರಿದಂತೆ ರಾಜ್ಯ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಜಿಲ್ಲಾ ಸಂಘ ಅಭಿನಂದನೆ ಸಲ್ಲಿಸಿದೆ ಎಂದು ಪ್ರಧಾನ ಕಾರ್ಯದರ್ಶಿ ಶಿವಮೂರ್ತಿ, ಉಪಾಧ್ಯಕ್ಷೆ ಎನ್. ಸಾವಿತ್ರಮ್ಮ ತಿಳಿಸಿದ್ದಾರೆ.
ಅಂತರ್ ಯುವಕ ಸಂಘದ ಕ್ರೀಡಾಕೂಟ
ತುಮಕೂರು: ಜಿಲ್ಲಾ ನೆಹರು ಯುವ ಕೇಂದ್ರ ವಿವಿಧ ಮಾರ್ಗದರ್ಶಿ ಯುವಕ ಸಂಘ, ಮಂಡಳಿಗಳ ಸಹಯೋಗದಲ್ಲಿ ಮಾ. 27 ರಂದು ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಅಂತರ ಯುವಕ ಸಂಘ, ಮಂಡಳಿಗಳ ಕ್ರೀಡಾಕೂಟ ನಡೆಸಲು ಉದ್ದೇಶಿಸಿದೆ. ಜಿಲ್ಲೆಯಲ್ಲಿನ ನೊಂದಾಯಿತವಾಗಿ ನೆಹರು ಯುವ ಕೇಂದ್ರಕ್ಕೆ ಸಂಯೋಜನೆ ಹೊಂದಿರುವ ಎಲ್ಲಾ ಯುವಕ ಸಂಘ, ಮಂಡಳಿಗಳು ತಮ್ಮ ಕ್ರೀಡಾ ತಂಡಗಳೊಡನೆ ಬಂದು ಕ್ರೀಡಾಕೂಟದಲ್ಲಿ ಭಾಗವಹಿಸಬಹುದು. ಯುವಕ ಸಂಘ, ಮಹಿಳಾ ಮಂಡಳಿಗಳಿಗೆ ಪ್ರತ್ಯೇಕ ಕ್ರೀಡೆಗಳಿದ್ದು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನವಲ್ಲದೆ ಪ್ರಶಸ್ತಿ ಪತ್ರ ನೀಡಲಾಗುವುದು ಎಂದು ಜಿಲ್ಲಾ ಯುವಜನ ಸಮನ್ವಯಾಧಿಕಾರಿ ತಿಳಿಸಿದ್ದಾರೆ.
ಲೋಕಾಯುಕ್ತರ ಭೇಟಿ ಇಂದು
ಕೊರಟಗೆರೆ: ಇಲ್ಲಿನ ತಾ.ಪಂ. ಸಮುದಾಯ ಭವನದಲ್ಲಿ ಮಾ. 18 ರಂದು ಬೆ.11 ಗಂಟೆಯಿಂದ ಮ. 1 ಗಂಟೆಯವರೆಗೆ ಜಿಲ್ಲಾ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಸ್ವೀಕರಿಸಿ ಸಾರ್ವಜನಿಕ ಜನ ಸಂಪರ್ಕ ಸಭೆ ನಡೆಸಲಿದ್ದಾರೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

