ತುಮಕೂರು

ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ: ಬಿ.ಕೆ. ಶಿವರಾಮ್

Published On :

ತಿಪಟೂರು:  ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರ ಜೊತೆಗೆ ಸಮಾಜದ ಏಳಿಗೆಗೆ ಶ್ರಮಿಸಬೇಕೆಂದು ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ ಬಿ.ಕೆ. ಶಿವರಾಮ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
 ನಗರದ ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ಮತ್ತು ನಿರ್ವಹಣಾ ಶಾಸ್ತ್ರ ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ವಾಣಿಜ್ಯ ಶಾಸ್ತ್ರ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಸಂಘದ ವಾರ್ಷಿಕ ಸಭೆ ಮತ್ತು ಸನ್ಮಾನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಪೊಲೀಸ್ ವೃತ್ತಿಯಲ್ಲಿರುವವರನ್ನು ಗೌರವಿಸಿ, ಕಾನೂನಿನ ನಿಯಮಗಳಿಗೆ ಬದ್ಧರಾಗಬೇಕೆಂದರಲ್ಲದೆ ವಿದ್ಯಾರ್ಥಿಗಳು ಏಕಾಗ್ರತೆ, ಶ್ರದ್ಧೆ ಮತ್ತು ಸಂಯಮದಿಂದ ಕಠಿಣ ಅಧ್ಯಯನ ಮಾಡಿ ದೇಶಕ್ಕೆ ಮಾದರಿ ಪ್ರಜೆಗಳಾಗಬೇಕೆಂದು ತಿಳಿಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು.  ದಕ್ಷಿಣ ಭಾರತ ಪ್ರಾದೇಶಿಕ ಕಚೇರಿಯ ಛೇರ್ಮನ್ ಸಿ.ಎಸ್. ನಾಗೇಂದ್ರ ರಾವ್ ಮತ್ತು ಸಿ.ಎಸ್‌ಕಂಪನಿಯ ಕಾರ್ಯದರ್ಶಿ ಸಿ.ಎಸ್. ಮಂಜುನಾಥ್ ರೆಡ್ಡಿ ವಿದ್ಯಾರ್ಥಿಗಳಿಗೆ ಪದವಿಯ ಬಗ್ಗೆ ಮಾರ್ಗದರ್ಶನ ನೀಡಿದರು.  ಬಿ.ಕಾಂ ಮತ್ತು ಬಿ.ಬಿ.ಎಂ. ವಿದ್ಯಾರ್ಥಿಗಳಿಂದ ಮ್ಯಾನೇಜ್‌ಮೆಂಟ್ ಗೇಮ್ಸ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಧ್ಯಕ್ಷತೆಯನ್ನು ಕೆವಿಎಸ್ ಉಪಾಧ್ಯಕ್ಷ ಜಿ.ಎಸ್. ಉಮೇಶ್ ವಹಿಸಿದ್ದರು. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಲಪ್ಪ, ಪ್ರಾಂಶುಪಾಲ ಪ್ರೊ. ಸಯ್ಯದ್ ಮುಷ್ತಾಕ್ ಅಹಮದ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಪ್ರಶ್ನೆ ಪತ್ರಿಕೆ ಬಹಿರಂಗ ವದಂತಿಗೆ ಕಿವಿಗೊಡಬೇಡಿ
ಕ.ಪ್ರ.ವಾರ್ತೆ ಗುಬ್ಬಿ ಮಾ, 18
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರಶ್ನೆ ಪತ್ರಿಕೆ ಬಹಿರಂಗದ ವದಂತಿಗಳಿಗೆ ಕಿವಿಗೊಡಬೇಡಿ, ಸರ್ಕಾರ ಈ ಬಗ್ಗೆ ಕಟ್ಟು ನಿಟ್ಟಿನ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ ಎಂದು ತುಮಕೂರಿನ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿದೇಶಕ ಜಯಪ್ರಕಾಶ್ ತಿಳಿಸಿದರು.
 ಅವರು ಸೋಮವಾರ ಗುಬ್ಬಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಪರೀಕ್ಷೆ  ನಡೆಯುವ ಸಮಯದಲ್ಲಿ ಅನಿರಿಕ್ಷಿತ ಭೇಟಿ ನೀಡಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಘಟನೆಗಳು ನಡೆಯದಂತೆ ಆರಕ್ಷಕ ಇಲಾಖೆ, ಜಿಲ್ಲಾಡಳಿತ ಹಾಗೂ ಜಾಗೃತದಳದ ವತಿಯಿಂದ ಅನೇಕ ಕ್ರಮಗಳನ್ನು ಕೈಗೊಂಡಿದ್ದು ರಾತ್ರಿ ವೇಳೆ ಗಸ್ತು ತಿರುಗುವುದು, ಜೆರಾಕ್ಸ್ ಹಾಗೂ ಟ್ಯೂಷನ್ ಕೇಂದ್ರಗಳ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಂಡು ಪರೀಕ್ಷಗಳು ಸುಗಮವಾಗಿ ನಡೆಯಲು ಇಲಾಖೆ ಅನೇಕ ತ್ವರಿತ ಕ್ರಮಗಳನ್ನು ಕೈಗೊಂಡಿದೆ. ಆದ್ದರಿಂದ ವಿದ್ಯಾರ್ಥಿಗಳು ನಿರ್ಭಿತಿಯಿಂದ ಪರೀಕ್ಷೆ ಬರೆದು,  ವದಂತಿಗಳನ್ನು ಹಬ್ಬಿಸುವ ಸಮಾಜಘಾತಕ ಶಕ್ತಿಗಳ ಬಗ್ಗೆ ಜಾಗೃತಿಯಿಂದಿರಲು ಮನವಿಮಾಡಿದರು.  ಗುಬ್ಬಿ ಪರೀಕ್ಷಾ ಕೇಂದ್ರದ ಬಗ್ಗೆ  ತೃಪ್ತಿ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.