ಅಸಮರ್ಪಕ ಕುಡಿವ ನೀರಿನ ವ್ಯವಸ್ಥೆಗೆ ಆಕ್ರೋಶ
ಕ.ಪ್ರ. ವಾರ್ತೆ ್ಣ ಕುಣಿಗಲ್ ್ಣ ಮಾ.21
ತಾಲೂಕಿನ ಕೆಂಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಡಿಗರಪಾಳ್ಯ ಗ್ರಾಮದಲ್ಲಿ, ಕಳೆದೆರಡು ತಿಂಗಳಿನಿಂದಲೂ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದರಿಂದ ಬೇಸತ್ತ ಗ್ರಾಮಸ್ತರು, ಸ್ತ್ರೀಶಕ್ತಿ ಸಂಘದ ಸದಸ್ಯರು, ಗುರುವಾರ ತಾಪಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈಡಿಗರ ಪಾಳ್ಯ ಗ್ರಾಮದ ವ್ಯಾಪ್ತಿಯಲ್ಲಿ ಕಳೆದೆರಡು ತಿಂಗಳಿನಿಂದಲೂ ಕುಡಿಯುವ ನೀರಿಗೆ ತೀವ್ರ ಅಭಾವವಾಗಿದ್ದು, ಸಮಸ್ಯೆ ಬಗೆಹರಿಸುವಂತೆ ಈ ಭಾಗದ ಗ್ರಾಪಂ ಸದಸ್ಯ ಗೋವಿಂದರಾಜು, ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು, ಕೆಂಪನಹಳ್ಳಿ ಗ್ರಾಪಂ ಅಧ್ಯಕ್ಷರು, ಸಿಬ್ಬಂದಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ, ಸಂಬಂಧಿಸಿದ ಗ್ರಾಮ ಪಂಚಾಯಿತಿಯವರು ಸಮಸ್ಯೆ ನಿರ್ವಹಣೆಗೆ ಸಕಾರಾತ್ಮಕವಾಗಿ ಸ್ಪಂದಿಸಿದಿರುವುದರಿಂದ ಬೇಸತ್ತ ಗ್ರಾಮಸ್ಥರು ಗುರುವಾರ ಮಧ್ಯಾಹ್ನ, ಗ್ರಾಮದಿಂದ ಎರಡು ಟ್ರ್ಯಾಕ್ಟರ್ಗಳಲ್ಲಿ, ಖಾಲಿ ಕೊಡಗಳನ್ನು ಹೊತ್ತು ಮೊದಲಿಗೆ ಶಾಸಕರ ಗೃಹಕಚೇರಿಗೆ ಮುತ್ತಿಗೆಹಾಕಿದರು.
ಆದರೆ ಶಾಸಕರು, ಊರಲ್ಲಿ ಇಲ್ಲದ ಕಾರಣ, ರೋಸಿಹೋದ ಗ್ರಾಮಸ್ಥರು, ಸಮೀಪದ ತಾಪಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ, ಕೂಡಲೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು.
ಕಳೆದೆರಡು ತಿಂಗಳಿನಿಂದಲೂ ಗ್ರಾಮಸ್ಥರ ಮನವಿಗೆ ಸ್ಪಂದಿಸದ ಕೆಂಪನಹಳ್ಳಿ ಗ್ರಾಪಂ ಸಿಬ್ಬಂದಿ, ಪದಾಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ತಾಪಂ ಕಾರ್ಯಾಲಯದ ಮುಖ್ಯ ಬಾಗಿಲಲ್ಲಿ ಕುಳಿತು, ಖಾಲಿ ಕೊಡಗಳ ಪ್ರದರ್ಶನ ನಡೆಸಿದರು.
ಶೀಘ್ರ ಸಮಸ್ಯೆ ಬಗೆಹರಿಸುವ ಆಶ್ವಾಸನೆ: ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ನರೇಗ ಸಹಾಯಕ ನಿರ್ದೇಶಕ ಬೆಟ್ಟಸ್ವಾಮಿಗೌಡ, ವಿದ್ಯುತ್ ಪೂರೈಕೆ ಸೇರಿದಂತೆ ಹಲವಾರು ಸಮಸ್ಯೆಗಳಿದ್ದು, ಈ ಕೂಡಲೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ, ಶೀಘ್ರದಲ್ಲೆ ಸಮಸ್ಯೆ ಬಗೆಹರಿಸುವ ಹಾಗೂ ಇಷ್ಟು ದಿನಗಳಾದರೂ ಸಮಸ್ಯೆ ಪರಿಹರಿಸುವುದರಲ್ಲಿ ನಿರ್ಲಕ್ಷ್ಯ ವಹಿಸಿರುವ ಕೆಂಪನಹಳ್ಳಿ ಗ್ರಾಪಂ ಸಿಬ್ಬಂದಿ ವಿರುದ್ಧ ಸಾಧ್ಯವಿರುವ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಮೇರೆಗೆ, ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು. ಪ್ರತಿಭಟನೆಯಲ್ಲಿ ಸ್ತ್ರೀಶಕ್ತಿ ಸಂಘದ ಪ್ರಮುಖರಾದ ರಾಜಮ್ಮ, ಜಯಮ್ಮ, ಇಂದ್ರಮ್ಮ, ಸುಶೀಲ, ಶೋಭ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

