ಆಕಸ್ಮಿಕ ಬೆಂಕಿ: ಲಕ್ಷಾಂತರ ರು. ನಷ್ಟ
ಕ.ಪ್ರ. ವಾರ್ತೆ ್ಣ ಶಿರಾ ್ಣ ಮಾ.21
ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿನ ಮೂರು ಗುಡಿಸಲುಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಹೋಗಿ ಲಕ್ಷಾಂತರ ರು. ನಷ್ಟ ಸಂಭವಿಸಿರುವ ಘಟನೆ ನಡೆದಿದೆ.
ಜಾಜಿಕಟ್ಟೆ ಪಕ್ಕದಲ್ಲಿರುವ ಮಂಟಪದ ಬಳಿ ಬೆಂಕಿ ಕಾಣಿಸಿಕೊಂಡಾಗ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರಾದರೂ ಬೇಸಿಗೆಯ ಬಿಸಿಲು ಅಧಿಕವಾಗಿರುವುದರಿಂದ ಕೆಲವೆ ನಿಮಿಷಗಳಲ್ಲಿ ಬೆಂಕಿಯ ಕೆನ್ನಾಲಿಗೆ ಗುಡಿಸಲುಗಳನ್ನು ಸಂಪೂರ್ಣವಾಗಿ ಆವರಿಸಿತು. ಅಗ್ನಿ ಶಾಮಕ ಸಿಬ್ಬಂದಿಯವರು ಬಂದು ಬೆಂಕಿ ನಂದಿಸಿದರಾದರೂ ಗುಡಿಸಲುಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು ಅದರಲ್ಲಿದ್ದ ದವಸ ಧಾನ್ಯ ಬಟ್ಟೆ ಬರೆ ಸೇರಿದಂತೆ ಅಗತ್ಯ ಜೀವನಾವಶ್ಯಕ ವಸ್ತುಗಳು ಸುಟ್ಟು ಹೋದ ಪರಿಣಾಮ ಸುಮಾರು 20 ವರ್ಷಗಳಿಂದ ವಾಸಿಸುತ್ತಿದ್ದ ವೀರಣ್ಣನವರ ಮತ್ತು ರಂಗಮ್ಮನವರ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಮತ್ತೊಂದು ಗುಡಿಸಲಿನಲ್ಲಿದ್ದ ಅಕ್ರಮ್ ಎಂಬುವರು ಕೆಲವು ದಿನಗಳ ಹಿಂದೆ ಇಲ್ಲಿಂದ ಹೊರಟು ಹೋಗಿದ್ದಾರೆ ಎಂದು ತಿಳಿದು ಬಂದಿದ್ದು ಅವರು ಗುಡಿಸಿಲಿನಲ್ಲಿ ಯಾವುದೇ ಬೆಲೆ ಬಾಳುವ ವಸ್ತುಗಳು ಇರಲಿಲ್ಲವೆಂದು ಅಕ್ಕಪಕ್ಕದವರು ತಿಳಿಸಿದ್ದಾರೆ.
ಸುದ್ದಿ ತಿಳಿದ ತಕ್ಷಣ ನಗರ ಪೊಲೀಸ್ ಠಾಣಾಧಿಕಾರಿ ಎಸ್.ಕೆ.ಪ್ರಹ್ಲಾದ್, ತಹಸೀಲ್ದಾರ್ ಕಾಂತರಾಜು, ಕಂದಾಯ ನಿರೀಕ್ಷಕ ಜುಂಜೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತಾಲೂಕು ಆಡಳಿತದಿಂದ ತಕ್ಷಣದ ಪರಿಹಾರವಾಗಿ 1000 ರು. ನೀಡಿದ್ದು ಹೆಚ್ಚಿನ ಪರಿಹಾರಕ್ಕೆ ಶಿಫಾರಸು ಮಾಡಲಾಗುವುದೆಂದು ತಿಳಿಸಿದ್ದಾರೆ. ಮಾಜಿ ಸಚಿವ ಬಿ.ಸತ್ಯನಾರಾಯಣ ಭೇಟಿ ನೀಡಿ ನೊಂದ ಕುಟುಂಬಗಳಿಗೆ ಸಾಂತ್ವನ ಹೇಳಿ 3000 ರು.ಸಹಾಯ ಧನ ನೀಡಿದ್ದಾರೆ. ನಗರಸಭೆ ಸದಸ್ಯ ಎಸ್.ಜೆ.ರಾಜಣ್ಣ ಭೇಟಿ ನೀಡಿ 2000 ರು. ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

