ಕವಿ, ಕಲಾವಿದರಿಗೆ ನಾಳೆ ಪ್ರಶಸ್ತಿ ಪ್ರದಾನ
ತುಮಕೂರು: ಅಮರೇಶ್ವರ ವಿಜಯ ನಾಟಕ ಮಂಡಳಿ ವತಿಯಿಂದ ನಾಟಕ ಬ್ರಹ್ಮ ಚಿತ್ತರಗಿ ಗಂಗಾಧರ ಶಾಸ್ತ್ರಿಗಳ ಸ್ಮರಣಾರ್ಥ ಮಾ. 23 ರಂದು ಸಂಜೆ 5-30 ಕ್ಕೆ ಡಾ. ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ನಾಟಕ ಪ್ರದರ್ಶನ ಹಾಗೂ ಕವಿ ಕಲಾವಿದರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ನಾಟಕ ಮಂಡಳಿ ಅಧ್ಯಕ್ಷ ಚನ್ನಬಸಯ್ಯ ಗುಬ್ಬಿ ತಿಳಿಸಿದ್ದಾರೆ. ಸಾಹಿತಿ ವಿದ್ಯಾವಾಚಸ್ಪತಿ ಕವಿತಾಕೃಷ್ಣ, ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಸೋ.ಮು. ಭಾಸ್ಕರಾಚಾರ್, ರಾಜ್ಯ ನಾಟಕ ಅಕಾಡೆಮಿ ರಿಜಿಸ್ಟ್ರಾರ್ ಟಿ.ಜಿ. ನರಸಿಂಹಮೂರ್ತಿ, ಲೇಖಕಿ ಬಾ.ಹ. ರಮಾಕುಮಾರಿ, ರಂಗಕರ್ಮಿ ದಾವಣಗೆರೆ ಮಲ್ಲಿಕಾರ್ಜುನ ಕಡಕೋಳ, ಭಾರತ ಬಂಧು ಸಂಪಾದಕ ಬಿ.ಕೆ. ಸುಂದರೇಶ್, ಯಕ್ಷಗಾನ ಕಲಾವಿದ ಎಸ್.ಎನ್. ಪಂಜಾಪೆ ಅವರನ್ನು ಸನ್ಮಾನಿಸಲಾಗುವುದು. ಸಮಾರಂಭದ ನಂತರ ಕೆ.ಎನ್. ಸಾಳುಂಕೆ ವಿರಚಿತ ಕಿವುಡನ ಕಿತಾಪತಿ ನಾಟಕ ಏರ್ಪಾಟಾಗಿದೆ. ಎಂಪ್ರೆಸ್ ಬಾಲಕಿಯರ ಸಪಪೂ ಕಾಲೇಜಿನ ಪ್ರಿನ್ಸಿಪಾಲ್ ಬಿ. ಮರುಳಯ್ಯ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಬಿ. ಬಸವರಾಜು ಗಂಗಾಧರ ಶಾಸ್ತ್ರಿ ಹಿರೇಮಠ್ ವಹಿಸಲಿದ್ದಾರೆ. ಅತಿಥಿಗಳಾಗಿ ಭಾರತೀಯ ಜನಕಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಜಿ. ಇಂದ್ರಕುಮಾರ್, ಮಂಡ್ಯ ನುಡಿಭಾರತಿ ಸಂಪಾದಕ ಸಿ.ಪಿ. ವಿದ್ಯಾಶಂಕರ್ ಪಾಲ್ಗೊಳ್ಳಲ್ಲಿದ್ದಾರೆ.
ಹನುಮೇಗೌಡ ಆಯ್ಕೆ
ತುಮಕೂರು: ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ವಾರ್ಡ್ ನಂ. 1 ರ ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಎಂ.ಪಾಳ್ಯದ ಆರ್. ಹನುಮೇಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್. ಷಫಿ ಅಹಮದ್ ತಿಳಿಸಿದ್ದಾರೆ.
ಉಚಿತ ನೇತ್ರ ತಪಾಸಣಾ ಶಿಬಿರ
ಶಿರಾ: ತಾಲೂಕಿನ ಕಳ್ಳಂಬೆಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರ ಡಾ.ಎಂ.ಸಿ.ಮೋದಿ ಚಾರಿಟಬಲ್ ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಮಾ. 22 ಶುಕ್ರವಾರದಂದು ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದ್ದು, ಶಿಬಿರದಲ್ಲಿ ಉಚಿತವಾಗಿ ನೇತ್ರ ಚಿಕಿತ್ಸೆ ಕೈಗೊಳ್ಳಲಿದ್ದು, ರೋಗಿಗಳಿಗೆ ಊಟ, ಔಷಧ ಮತ್ತು ವಾಹನದ ಸೌಲಭ್ಯ ಉಚಿತವಾಗಿ ಕೊಡಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

