ನಗರದಲ್ಲಿ ನೀರಿನ ಸಮಸ್ಯೆ ತೀವ್ರ
ಕ.ಪ್ರ. ವಾರ್ತೆ ್ಣ ತುಮಕೂರು ್ಣ ಮಾ.21
ತುಮಕೂರು ನಗರದ ಎಲ್ಲಾ 35 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು ಈ ಕೂಡಲೇ ನೀರಿನ ಸಮಸ್ಯೆ ನಿವಾರಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ 35 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿದೆ. ಜನರಿಗೆ, ಜಾನುವಾರುಗಳಿಗೆ ತೊಂದರೆಯಾಗಿದೆ. ಹಾಲಿ ಇರುವ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಗಣನೀಯವಾಗಿ ಕುಸಿದಿದ್ದು ಅಂತಹ ಬೋರ್‌ವೆಲ್‌ಗಳನ್ನು ಗುರುತಿಸಿ ಮತ್ತೆ ಎರಡು ಅಥವಾ ಮೂರು ಪೈಪ್‌ಗಳನ್ನು ಆಳಕ್ಕೆ ಇಳಿಸುವ ಮೂಲಕ ಸ್ವಲ್ಪ ಮಟ್ಟಿನ ನೀರಿನ ಸಮಸ್ಯೆ ನಿವಾರಿಸಬಹುದು ಎಂದಿದ್ದಾರೆ.
ಓವರ್‌ಹೆಡ್ ಟ್ಯಾಂಕ್: ಈಗಾಗಲೇ ತುಮಕೂರು ನಗರದಲ್ಲಿ ಹೇಮಾವತಿ ನೀರು ಸಂಗ್ರಹಿಸಿ ವಿತರಣೆ ಮಾಡುವ ಮೂಲಕ ಹಲವು ಓವರ್‌ಹೆಡ್ ಟ್ಯಾಂಕ್‌ಗಳನ್ನು ನಿರ್ಮಿಸಲಾಗಿದೆ. ಆದರೆ ಈ ಟ್ಯಾಂಕ್‌ಗಳು ಸಾರ್ವಜನಿಕರ ಸೇವೆಗೆ ಲಭ್ಯವಾಗಿರದೆ ಹಾಗೆಯೇ ಇದೆ. ತಾವು ಈ ಹಿಂದೆ ನಗರಸಭೆ ಆಯುಕ್ತರಾಗಿ ಕೆಲಸ ಮಾಡಿದ್ದೀರಿ. ಹಾಗಾಗಿ ಈ ಬಗ್ಗೆ ಒಂದು ಸಮಿತಿ ರಚಿಸಿ ನಗರದಲ್ಲಿ ಇಂತಹ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿಕೊಡಬೇಕಾಗಿ ನೂತನ ಜಿಲ್ಲಾಧಿಕಾರಿ ಅನುರಾಗ್ ತಿವಾರಿ ಅವರಲ್ಲಿ ಮನವಿ ಮಾಡಿದ್ದಾರೆ.
ಕಸವಿಲೇವಾರಿ ಆಗುತ್ತಿಲ್ಲ: ನಗರದಲ್ಲಿ ಹಲವು ವರ್ಷಗಳಿಂದ ಕಸ ವಿಲೇವಾರಿ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ. ಪ್ರಮುಖ ರಸ್ತೆಗಳಲ್ಲಿ ಜನರು ವಾಸವಿರುವ ಜಾಗಗಳಲ್ಲಿ ಕಸ ಹಾಕಿ ನಗರ ನೈರ್ಮಲ್ಯ ಹಾಳಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ಜಿಲ್ಲಾಧಿಕಾರಿಗಳಲ್ಲಿ ದೂರಿದ್ದಾರೆ. ಅಲ್ಲದೇ ಅನೈರ್ಮಲ್ಯದಿಂದಾಗಿ ಹಲವಾರು ಕಾಯಿಲೆಗಳು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಕೂಡಲೇ ನಗರದ ಎಲ್ಲಾ 35 ವಾರ್ಡ್‌ಗಳಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ನಿವಾರಿಸಬೇಕೆಂದು ಅವರು ಕೋರಿದ್ದಾರೆ.
ಪಾಲಿಕೆಯಾಗುವ ಹೊತ್ತಿನಲ್ಲಿ ಇರುವ ತುಮಕೂರು ನಗರಸಭೆಯ ಎಲ್ಲಾ ವಾರ್ಡ್‌ಗಳು ಹಲವಾರು ಮೂಲಭೂತ ಸಮಸ್ಯೆಯನ್ನು ಎದುರಿಸುತ್ತಿದ್ದೆ. ಹಿಂದಿನಿಂದಲೂ ಕಾಂಗ್ರೆಸ್ ಈ ಬಗ್ಗೆ ಹೋರಾಟ ಮಾಡುತ್ತಲೇ ಇತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ತಾವು ಪುನರ್ ವಿಮರ್ಶಿಸಿ ನಗರದ ನೈರ್ಮಲ್ಯ ಕಾಪಾಡುವತ್ತ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.
ನಂತರ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಅನುರಾಗ್ ತಿವಾರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಕ್ತಾರ ಜಕಣಾಚಾರಿ, ಮಂಜುನಾಥ್ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

