ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಭಿನಂದನೆ
ತಿಪಟೂರು: ರಾಜ್ಯ ಸರ್ಕಾರವು ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಿರುವುದು ಅಭಿನಂದನಾರ್ಹ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಜಿ.ಆರ್. ಜಯರಾಂ, ಜಿಲ್ಲಾಧ್ಯಕ್ಷ ಆರ್. ಪರಮೇಶ್, ಜಿಲ್ಲಾ ಪ್ರ.ಕಾರ್ಯದರ್ಶಿ ಎನ್. ಗೋಪಾಲಕೃಷ್ಣ ತಿಳಿಸಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರ ಪ್ರಮುಖ ಬೇಡಿಕೆಯಾಗಿದ್ದ ಸ್ಥಗಿತ ವೇತನ ಬಡ್ತಿ 25 ಮತ್ತು 30 ವರ್ಷಗಳ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ಹೆಚ್ಚುವರಿ ಬಡ್ತಿ, ಪ್ರೌಢಶಾಲಾ ಶಿಕ್ಷಕರಾಗಿ 70ಶಿಕ್ಷಕರಿಗೆ ಬಡ್ತಿ, ಮುಂಬಡ್ತಿ ಶಿಕ್ಷಕರಾಗಿ 100ಕ್ಕೂ ಹೆಚ್ಚು ಶಿಕ್ಷಕರಿಗೆ ಬಡ್ತಿ ನೀಡಿದೆ. ಅಂತರ ಜಿಲ್ಲೆಯಿಂದ ವರ್ಗಾವಣೆಯಾಗಿ ಬಂದ ಶಿಕ್ಷಕರಿಗೆ ನೇಮಕಾತಿ ಹೊಂದಿದ ವರ್ಷದಿಂದಲೇ 10, 15 ಮತ್ತು 20 ವರ್ಷಗಳ ಕಾಲಮಿತಿ ಬಡ್ತಿ ನೀಡಲು ಆದೇಶಿಸಿದೆ. ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವೈದ್ಯಕೀಯ ವೆಚ್ಚದ ಬಿಲ್ಲುಗಳಿಗಾಗಿ ಪರದಾಡುತ್ತಿರುವ ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರದಿಂದ ಜಿಲ್ಲೆಯ ಎಲ್ಲಾ ತಾಲೂಕುಗಳ ಶಿಕ್ಷಕರಿಗೆ 2.50ಕೋಟಿ ರು. ಅನುದಾನ ಮಂಜೂರು ಮಾಡಿಸಿದ್ದು, ಈಗಾಗಲೆ ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅರ್ಜಿ ಸಲ್ಲಿಸಿರುವ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಸೌಲಭ್ಯ ಪಡೆಯಬೇಕು. ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು ತಕ್ಷಣವೇ ಬಿಲ್ ಪಾವತಿ ಮಾಡಬೇಕೆಂದು ಸಂಘ ಮನವಿ ಮಾಡಿದೆ. ದೈಹಿಕ ಶಿಕ್ಷಕರು ಹಾಗೂ ಪೂರ್ವ ಪ್ರಾಥಮಿಕ ಶಾಲಾ ಮಾತೆಯರಿಗೆ ಒಂದೇ ಹುದ್ದೆಯಲ್ಲಿ 25ರಿಂದ 30ವರ್ಷ ಸೇವೆ ಸಲ್ಲಿಸಿರುವ ಶಿಕ್ಷಕರಿಗೆ ಬಡ್ತಿ ನೀಡಲು ಸರ್ಕಾರ ವಿಶೇಷ ಭತ್ಯ ನೀಡಿದ್ದು, ಇದರಿಂದ ಸಾವಿರಾರು ಶಿಕ್ಷಕರಿಗೆ ಅನುಕೂಲವಾಗಲಿದೆ. ರಾಜ್ಯ ಹಾಗೂ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕ ಸಂಘ ಹಲವಾರು ಹಂತದ ಹೋರಾಟಗಳ ಮೂಲಕ ಸರ್ಕಾರದಿಂದ ಶಿಕ್ಷಕರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ದೊರೆಯುವಂತೆ ಮಾಡಲು ಸಹಕರಿಸಿದ ರಾಜ್ಯ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಸಂಘವು ಅಭಿನಂದನೆ ಸಲ್ಲಿಸಿದೆ. ಶಿಕ್ಷಕರು ಸರ್ಕಾರದಿಂದ ಈ ಎಲ್ಲಾ ನೆರವನ್ನು ಸಕಾಲಕ್ಕೆ ಪಡೆದು ತಮ್ಮ ಬೋಧನಾ ಗುಣಮಟ್ಟವನ್ನು ಹೆಚ್ಚಿಸಿಕೊಂಡು ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಲು ಶ್ರಮವಹಿಸಿ ದುಡಿದು, ಕ್ರೀಯಾಶೀಲರಾಗಿ ಸೇವೆ ಮಾಡಬೇಕೆಂದು ರಾಜ್ಯ ಉಪಾಧ್ಯಕ್ಷರಾದ ಜಿ.ಆರ್. ಜಯರಾಂ ಮನವಿ ಮಾಡಿದ್ದಾರೆ.
ಇಂದು ತಿಪಟೂರಿಗೆ ಲೋಕಾಯುಕ್ತ ಭೇಟಿ
ತಿಪಟೂರು: ನಗರದ ಪ್ರವಾಸಿ ಮಂದಿರಕ್ಕೆ ಶುಕ್ರವಾರ ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕರು ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ವೀಕರಿಸಲಿದ್ದಾರೆ. ಆದ್ದರಿಂದ ಸಾರ್ವಜನಿಕರು ತಮ್ಮ ಕುಂದುಕೊರತೆಗಳೇನಾದರೂ ಇದ್ದಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬಹುದೆಂದು ತಹಸೀಲ್ದಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

