ತುಮಕೂರು

ಮಧುಗಿರಿಯಲ್ಲಿ ಕೆಜೆಪಿಗೆ ಸಾಕಷ್ಟು ಬೆಂಬಲ: ಎಂ. ಲಕ್ಷ್ಮೀನಾರಾಯಣ

Published On :

ಕ.ಪ್ರ. ವಾರ್ತೆ ್ಣ ಮಧುಗಿರಿ ್ಣ ಮಾ.21
ತಾಲೂಕಿನಲ್ಲಿ ಕರ್ನಾಟಕ ಜನತಾ ಪಕ್ಷಕ್ಕೆ ಸಾಕಷ್ಟು ಕಾರ್ಯಕರ್ತರು ಸೇರ್ಪಡೆಯಾಗಿದ್ದು, ಪ್ರಾಥಮಿಕ ಸದಸ್ಯತ್ವ ಪಡೆದುಕೊಳ್ಳಲಾಗುತ್ತಿದೆ ಎಂದು ಕೆಜೆಪಿ ತಾಲೂಕು ಅಧ್ಯಕ್ಷ ಎಂ.ಲಕ್ಷ್ಮೀನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ತಾ.ಪತ್ರಕರ್ತರ ಸಂಘದ ಕೊಠಡಿಯಲ್ಲಿ ಕರೆದ್ದಿದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಹೋಬಳಿ ಮಟ್ಟದಿಂದ ಪಕ್ಷ ಸಂಘಟಿಸುವ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಕೈಗೊಂಡ  ಜನಪರ ಕಾರ್ಯಕ್ರಮಗಳನ್ನು  ಮೆಚ್ಚಿ ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು ಸೇರಿದಂತೆ ಸಾಕಷ್ಟು ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಪಕ್ಷ ಸೇರುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಬಲಿಷ್ಠವಾಗಲಿದೆ ಎಂದರು.
ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮಧುಗಿರಿ ತಾಲೂಕಿಗೆ ಶಾಶ್ವತ ನೀರಾವರಿ ಯೋಜನೆ, ಏಕಶಿಲಾ ಬೆಟ್ಟಕ್ಕೆ ರೋಪವೇ ಮತ್ತು ಮಧುಗಿರಿಯನ್ನು ಕಂದಾಯ ಜಿಲ್ಲೆಯನ್ನಾಗಿ ಪರಿವರ್ತಿಸುವ ಜೊತೆಗೆ ತುಮಕೂರು-ರಾಯದುರ್ಗ ರೇಲ್ವೆ ಯೋಜನೆ ಕಾಮಗಾರಿ ಆರಂಭಕ್ಕೆ ಹೋರಾಟ ನಡೆಸಲಾಗುವುದು. ಅದೇ ರೀತಿ ಮಧುಗಿರಿ ಕ್ಷೇತ್ರದ  ಸಮಗ್ರ ಅಭಿವೃದ್ಧಿಗೆ ಅಧಿಕ ಒತ್ತು ಕೊಡಲಾಗವುದು ಎಂದು ಲಕ್ಷ್ಮೀನಾರಾಯಣ ಭರವಸೆ ನೀಡಿದರು.
ಗೋಷ್ಠಿಯಲ್ಲಿ ಹಿರಿಯ ಮುಖಂಡ ಮಹದೇವಪ್ಪ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ನಗರ ಘಟಕದ ಅಧ್ಯಕ್ಷ ಕೃಷ್ಣ ಹಳ್ಳಿಕಾರ್ ಮೊದಲಾದವರು ಉಪಸ್ಥಿತರಿದ್ದರು.     

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.