ಕೋಟನಾಯಕನಹಳ್ಳಿಯಲ್ಲಿ ಪುರಾತನ ಶಿಲಾ ಶಾಸನ ಪತ್ತೆ
ಕ.ಪ್ರ. ವಾರ್ತೆ ತಿಪಟೂರು ಮಾ.22
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ತಾಲೂಕಿನ ಕೋಟೆನಾಯಕನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಎನ್ಎಸ್ಎಸ್ ಶಿಬಿರದಲ್ಲಿ ವಿದ್ಯಾರ್ಥಿಗಳು ಶ್ರಮದಾನದಲ್ಲಿ ತೊಡಗಿದ್ದ ಸಂದರ್ಭದಲ್ಲಿ 400 ವರ್ಷಗಳ ಹಿಂದಿನ ಪುರಾತನ ಶಿಲಾ ಶಾಸನವೊಂದು ಪತ್ತೆಯಾಗಿದೆ.
ಗ್ರಾಮದ ಅರಳಿಕಟ್ಟೆಯ ಬಳಿ ಶ್ರಮದಾನ ಮಾಡಲು ತೆರಳಿದೆ ಉಪನ್ಯಾಸಕ ಡಾ.ಎಲ್.ಎಮ್.ವೆಂಕಟೇಶ್
ನೇತೃತ್ವದ ತಂಡಕ್ಕೆ ಮಣ್ಣಿನಲ್ಲಿ ಹೂತಿಕೊಂಡಂತಿದ್ದ ಕಲ್ಲೊಂದು ದೊರೆತಿದ್ದು,ಇದನ್ನು ಮಣ್ಣಿನಿಂಗ ಹೊರತೆಗೆದಾಗ ಇದರ ಮೇಲೆ ಸೂರ್ಯ, ಚಂದ್ರಾಕೃತಿಯ ಚಿಹ್ನೆಗಳಿದ್ದು ಇದು ಪುರಾನತ ಶಿಲಾ ಶಾಸನವೆಂದು ತಿಳಿಯಿತು. ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಈ ಶಿಲಾ ಶಾಸನವನ್ನು ನೋಡಿ ಅಚ್ಚರಿಗೊಂಡರು. ನಂತರ ಗ್ರಾಮಸ್ಥರ ನೆರವಿನಿಂದ ಈ ಶಾಸನವನ್ನು ರಕ್ಷಿಸಿ ಅರಳಿಕಟ್ಟೆಯ ಮುಂದೆ ಪ್ರತಿಷ್ಠಾಪಿಸಲಾಯಿತು.
ಈ ವೇಳೆ ಪ್ರಾಂಶುಪಾಲ ಡಾ.ಜಯದೇವಪ್ಪನವರು ಸಂಬಂಧಪಟ್ಟ ಇಲಾಖೆಯ ಗಮನ ಸೆಳೆದು, ಸೂಕ್ತ ಕ್ರಮಕೈಗೊಂಡು ಸಂರಕ್ಷಿಸಬೇಕೆಂದು ಅಧಿಕಾರಿಗಳಿಗೆ ಮನವಿ ಮಾಡಿದರು.
ಇಂದು ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ
ಪಾವಗಡ: ಪಾವಗಡ ತಾಲೂಕು ಜೆಡಿಎಸ್ ವತಿಯಿಂದ ಕಾರ್ಯಕರ್ತರ ಬೃಹತ್ ಸಮಾವೇಶ ಹಾಗೂ ನೂತನ ಪುರಸಭೆ ಸದಸ್ಯರಿಗೆ ಸನ್ಮಾನ ಸಮಾರಂಭವನ್ನು ಮಾ. 23ರಂದು ಶನಿವಾರ ಬೆಳಿಗ್ಗೆ 11ಗಂಟೆಗೆ ಪಟ್ಟಣದ ಎಸ್ಎಸ್ಕೆ ಬಯಲು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ತಾ.ಜೆಡಿಎಸ್ ಅಧ್ಯಕ್ಷ ಎನ್. ತಿಮ್ಮಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆಸುವ ಕಾರ್ಯಕರ್ತರ ಸಮಾವೇಶದಲ್ಲಿ ಜಿಪಂ ಅಧ್ಯಕ್ಷೆ ಪ್ರೇಮ ಮಹಾಲಿಂಗಪ್ಪ ಸೇರಿದಂತೆ ನೂತನ ಪುರಸಭೆ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಮಾಜಿ ಸಚಿವ ಜಮೀರ್ ಅಹಮ್ಮದ್, ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಎಂಎಲ್ಸಿ ಡಾ.ಎಂ.ಆರ್.ಹುಲಿನಾಯ್ಕ್ರ್, ಮಾಜಿ ಶಾಸಕ ಡಿ.ಸಿ. ಗೌರಿಶಂಕರ್, ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಜಿಲ್ಲಾ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಅಡಿಟರ್ ಸುಲ್ತಾನ್ ಮಹಮದ್ ಮುಂತಾದವರು ಭಾಗವಹಿಸಲಿದ್ದಾರೆ.
ತಾಲೂಕಿನಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಸಮಾವೇಶಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಾ.ಜೆಡಿಎಸ್ ಅಧ್ಯಕ್ಷ ತಿಮ್ಮಾರೆಡ್ಡಿ, ಕಾರ್ಯಾಧ್ಯಕ್ಷ ವೆಂಕಟರಾಮರೆಡ್ಡಿ,ಪ್ರಧಾನ ಕಾರ್ಯದರ್ಶಿ ಗೋವಿಂದಬಾಬು, ಕೋಟಗುಡ್ಡ ಅಂಜನೇಯಲು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

