ಇಂದು ತುರುವೇಕೆರೆಗೆ ಯಡಿಯೂರಪ್ಪ
ತುರುವೇಕೆರೆ: ಕೆಜೆಪಿ ವರಿಷ್ಠ ಬಿ.ಎಸ್. ಯಡಿಯೂರಪ್ಪ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚನೆ ಮಾಡಲು ಹಾಗೂ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಲು ಆಗಮಿಸಲಿದ್ದಾರೆ ಎಂದು ಜಿಲ್ಲಾ ಕೆಜೆಪಿ ಉಪಾಧ್ಯಕ್ಷ ಎಂ.ಜಿ. ಕೆಂಪೇಗೌಡ ತಿಳಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈ ವಿಧಾನಸಭಾ ಕ್ಷೇತ್ರದಲ್ಲಿ ಕೆಜೆಪಿ ಸ್ಪಷ್ಟ ಬಹುಮತದಿಂದ ಗೆಲವು ಸಾಧಿಸಲಿದೆ. ಕ್ಷೇತ್ರದಲ್ಲಿನ ಹಲವಾರು ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಕೆಜೆಪಿಗೆ ಅಧಿಕೃತವಾಗಿ ಮಂಗಳವಾರ ಪಕ್ಷಕ್ಕೆ ಬಿ ಎಸ್ ವೈ ಅವರ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ. ಯಡಿಯೂರಪ್ಪನವರನ್ನು ಬಾಣಸಂದ್ರದಿಂದ ಬೃಹತ್ ಬೈಕ್ ರ್ಯಾಲಿಯ ಮೂಲಕ ಪಟ್ಟಣಕ್ಕೆ ಕರೆತರಲಾಗುವುದು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ನಂತರ ವಿರಕ್ತ ಮಠದ ಆವರಣದಲ್ಲಿ ಏರ್ಪಡಿಸಲಾಗಿರುವ ಕಾರ್ಯಕರ್ತರ ಸಭೆಗೆ ಕರೆತರಲಾಗುವುದು ಎಂದು ಕೆಂಪೇಗೌಡ ಹೇಳಿದರು. ತಾಲೂಕು ಕೆಜಿಪಿ ಯುವ ಮೋರ್ಚಾ ಅಧ್ಯಕ್ಷ ಪ್ರಕಾಶ್ ಯಾದವ್ ಮಾತನಾಡಿ ಸುಮಾರು 2 ಸಾವಿರ ಯುವ ಪಡೆ ಪಾಲ್ಗೊಂಡು ಯಡಿಯೂರಪ್ಪನವರನ್ನು ಬೈಕ್ ರ್ಯಾಲಿ ಮೂಲಕ ಸ್ವಾಗತಿಸಲಾಗುವುದು. ಸಮಾರಂಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ.ಲಕ್ಷ್ಮೀನಾರಾಯಣ್, ಕ್ಷೇತ್ರದ ಅಭ್ಯರ್ಥಿ ಮಸಾಲಾ ಜಯರಾಂ, ಜಿಲ್ಲಾ ಅಧ್ಯಕ್ಷ ಹೆಬ್ಬಾಕ ರವಿ, ಜಿಲ್ಲೆಯ ಹಲವಾರು ಅಭ್ಯರ್ಥಿಗಳು ಭಾಗವಹಿಸುವರು ಎಂದರು. ಸಮಾರಂಭಕ್ಕೆ ಸುಮಾರು 5 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಾಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಜೆಪಿ ಮುಖಂಡ ಎಂ.ಡಿ.ಮೂರ್ತಿ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸಿದ್ದೇಶ್ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

