ನಾಳೆ ಪ್ರಜಾಪ್ರಗತಿ ರಂಗದಿಂದ ಬೃಹತ್ ಸಮಾವೇಶ
ಕ.ಪ್ರ. ವಾರ್ತೆ ಹುಳಿಯಾರು ಮಾ.25
ನಾಡಿನ ಎಲ್ಲಾ ವರ್ಗಗಳ ಆಶೋತ್ತರಗಳನ್ನು ಪರಿಣಾಮಕಾರಿಯಾಗಿ ಪ್ರತಿನಿಧಿಸಬಲ್ಲ, ಸಂರಕ್ಷಿಸುವ ಜನಪರ ಸರ್ಕಾರವನ್ನು ರಚಿಸುವ ಅವಕಾಶ ನಾಡಿನ ಜನತೆಗೆ ಮುಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪರ್ಯಾಯ ರಾಜಕೀಯ ಶಕ್ತಿ ಹುಟ್ಟು ಹಾಕುವಲ್ಲಿ ಪ್ರಜಾಪ್ರಗತಿ ರಂಗ ಕಾರ್ಯೋನ್ಮುಖವಾಗಿ ಮಾ.27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವಿರೋಧಿ ರಾಜಕಾರಣದ ವಿರುದ್ಧ ಜನಾಧಿಕಾರಕ್ಕಾಗಿ ಜನಶಕ್ತಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಜನಸಮುದಾಯದ ಸಂರಕ್ಷಣೆ ಹಾಗೂ ಪ್ರಗತಿಯ ಬಗ್ಗೆ ಕಾಳಜಿ ಹೊಂದಿರುವ ಪ್ರತಿಯೊಬ್ಬರು ಈ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಲುವಂತೆ ರಾಜ್ಯ ಹಸಿರುಸೇನೆ ಸಂಚಾಲಕ ಕೆಂಕೆರೆ ಸತೀಶ್ ಕರೆ ನೀಡಿದ್ದಾರೆ.
ಪ್ರಸ್ತುತ ರಾಜಕೀಯದಲ್ಲಿ ನಡೆದಿರುವ ಅನೇಕ ಘಟನೆಗಳಿಂದಾಗಿ ರಾಜ್ಯರಾಜಕೀಯ ವ್ಯವಸ್ಥೆ ಹದಗೆಟ್ಟಿರುವುದು ಮತದಾರರ ಕಣ್ಮುಂದೆ ಇದೆ. ಸಮಾಜವನ್ನು ಉದ್ಧಾರ ಮಾಡುತ್ತೇವೆಂದು ಹೇಳುತ್ತಾ ಸ್ವಾರ್ಥಸಾಧನೆ ಮಾಡಿಕೊಳ್ಳುತ್ತಾ ರೈತರು, ಕಾರ್ಮಿಕರು, ದಲಿತರು, ಶೋಷಿತ ಜನಸಮುದಾಯದವರನ್ನು ಕಡೆಗಣಿಸಿ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮ ತಮ್ಮಲ್ಲೇ ಕಿತ್ತಾಡುತ್ತಾ ನಾಡಿನ ಜನತೆ ಹಾಗೂ ನಾಡಿನ ಅಭಿವೃದ್ಧಿಯನ್ನು ಮರೆತಿದ್ದಾರೆ.
ನಮ್ಮ ಹಕ್ಕುಗಳ ರಕ್ಷಣೆಗಾಗಿ, ನಾಡಿನ ನೆಲ, ಜಲ, ಪರಿಸರ, ಭಾಷೆ, ಸಂಸ್ಕೃತಿಯ ರಕ್ಷಣೆ ಹಾಗೂ ಪ್ರಗತಿಗಾಗಿ ತಮ್ಮ ವೈಯಕ್ತಿಕ ಹಿತಾಸಕ್ತಿಯನ್ನು ಬದಿಗೊತ್ತಿ, ಹೋರಾಟದಲ್ಲಿ ನಿರತರಾಗಿರುವ ಲಕ್ಷಾಂತರ ಜನ ಸಾಮಾಜಿಕ ಕಾರ್ಯಕರ್ತರು ಹಾಗೂ ವಿವಿಧ ಜನಪರ ಚಳವಳಿಗಳ ನೇತಾರರು ಜತೆ ಸೇರಿ ಪ್ರಜಾಪ್ರಗತಿರಂಗ ಎಂಬ ಜನಪರ ರಾಜಕೀಯ ರಂಗವೊಂದನ್ನು ರಚಿಸಲಾಗಿದೆ. ಜನಾಧಿಕಾರಕ್ಕಾಗಿ ಜನಾಂದೋಲನ ಆರಂಭಿಸುವ ನಿಟ್ಟಿನಲ್ಲಿ ಬೃಹತ್ ಸಮಾವೇಶದ ವ್ಯವಸ್ಥೆ ಮಾಡಿದ್ದು, ಕರ್ನಾಟಕ ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸಮಾನ ಮನಸ್ಕರ ಜೊತೆಗೂಡಿ ಪ್ರಾದೇಶಿಕವಾದ ರಾಜಕೀಯ ಶಕ್ತಿಯನ್ನು ಹುಟ್ಟು ಹಾಕುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸುವಂತೆ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

