ಕ.ಪ್ರ.ವಾರ್ತೆ ್ಣ ತಿಪಟೂರು ್ಣ ಮಾ.30
ತಾಲೂಕಿನ ಪುಣ್ಯಕ್ಷೇತ್ರ ದಸರೀಘಟ್ಟದ ಶ್ರೀ ಚೌಡೇಶ್ವರಿ ಕ್ಷೇತ್ರಕ್ಕೆ ಆದಿಚುಂಚನಗಿರಿ ಪೀಠಾಧ್ಯಕ್ಷ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿಯವರು ಶನಿವಾರ ಮಧ್ಯಾಹ್ನ ಭೇಟಿ ನೀಡಿ ಚೌಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರೀಗಳವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಕ್ಷೇತ್ರಕ್ಕೆ ಹಾಸನದ ಆದಿಚುಂಚನಗಿರಿ ಶಾಖಾಪೀಠದ ಶ್ರೀಗಳಾದ ಶ್ರೀ ಶಂಭುನಾಥ ಸ್ವಾಮೀಜಿ, ಕಬ್ಬಳಿಯ ಶ್ರೀ ಶಿವಪುತ್ರನಾಥ ಸ್ವಾಮೀಜಿ, ಹುಳಿಮಾವಿನ ಶ್ರೀ ಶೈಲನಾಥ ಸ್ವಾಮೀಜಿ, ದಸರೀಘಟ್ಟದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಿದ್ದರು.