ತುಮಕೂರು

ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ: ಅಧಿಕಾರಿಗಳ ಭೇಟಿ

Published On :

ಕ.ಪ್ರ. ವಾರ್ತೆ   ತಿಪಟೂರು   ಮೇ 1
ತಾಲೂಕಿನ ಮತ್ತಿಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಕರೀಕೆರೆ ಗ್ರಾಮಕ್ಕೆ ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ ಕೃಷ್ಣಾರೆಡ್ಡಿ ಭೇಟಿ ನೀಡಿದರು.
ಗ್ರಾಮದ ಜನತೆಗೆ ಕುಡಿಯವು ನೀರಿನ ಸಮಸ್ಯೆ ಎದುರಾಗಿದ್ದು, ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ನೀರಿಲ್ಲದೇ ಜನತೆ ತೊಂದರೆ ಅನುಭವಿಸುತ್ತಿದ್ದು ತಕ್ಷಣ ಸಂಬಂಧಪಟ್ಟ ಇಲಾಖೆಯವರು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಕೃಷ್ಣಾರೆಡ್ಡಿ ಗ್ರಾಮಕ್ಕೆ ಭೇಟಿ ನೀಡಿ ವಸ್ತು ಸ್ಥಿತಿಯ ಬಗ್ಗೆ ಅಧ್ಯಯನ ಮಾಡಿ ಸಂಬಂಧಪಟ್ಟ ಸ್ಥಳೀಯ ಗ್ರಾ.ಪಂ.ಅಧಿಕಾರಿಗಳಿಗೆ ಗ್ರಾಮದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸಿ, ಗ್ರಾಮಕ್ಕೆ ನೀರಿನ ವ್ಯವಸ್ಥೆ ಹಾಗೂ ನೀರಿನ ಟ್ಯಾಂಕ್ ಬಳಿ ಬೆಳೆದಿರುವ ಜಂಗಲ್ ರಸ್ತೆ ತೆಗೆದು ಸ್ವಚ್ಛತೆ ಕಾಪಾಡುವಂತೆ ಆದೇಶ ನೀಡಿದರು. ಕರೀಕೆರೆ ಗ್ರಾಮದಲ್ಲಿ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ಸ್ಥಳೀಯ ಸಮಿತಿ ವಿಫಲವಾಗಿದ್ದು, ಗ್ರಾ.ಪಂ. ಅಧಿಕಾರಿಗಳಿಗೆ ಗ್ರಾಮಕ್ಕೆ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.