ತುಮಕೂರು

ಜೆಡಿಎಸ್ ಅಧಿಕಾರಕ್ಕೆ ಬಂದರೆ ನಿರ್ಗತಿಕರಿಗೆ ಸಾಮಾಜಿಕ ಭದ್ರತೆ

Published On :

ಕ.ಪ್ರ.ವಾರ್ತ್ಣೆ ಪಾವಗಡ    ಏ, 30
ಜೆಡಿಎಸ್ ಅಧಿಕಾರಕ್ಕೆ ತಂದರೆ ನಿರ್ಗತಿಕರಿಗೆ ಸಾಮಾಜಿಕ ಭದ್ರತೆ, ರೈತರ  ಸಾಲ ಸಂಪೂರ್ಣ ಮನ್ನ ಸೇರಿದಂತೆ ಶಾಶ್ವತ ಕುಡಿಯುವ ನೀರಿನ ಅನುಷ್ಠಾನಕ್ಕೆ ಬದ್ಧರಾಗುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.
ಅವರು ಜೆಡಿಎಸ್ ಅಭ್ಯರ್ಥಿ ಕೆ.ಎಂ.ತಿಮ್ಮರಾಯಪ್ಪ ಅವರ ಪರ ಪ್ರಚಾರಕ್ಕಾಗಿ ಬುಧವಾರ ಪಟ್ಟಣಕ್ಕೆ ಆಗಮಿಸಿ ಮಾತನಾಡುತ್ತಿದ್ದರು. ಅಧಿಕಾರಕ್ಕಾಗಿ 5 ವರ್ಷಗಳ ಕಾಲ ಕಚ್ಚಾಟದಲ್ಲಿ ನಿರತವಾದ ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲಿಲ್ಲ.
 ಪಾವಗಡ ಮಾರ್ಗವಾಗಿ ಆಂಧ್ರದ ಮಡಕಶಿರಾಗೆ ಕುಡಿಯುವ ನೀರಿನ ಸರಬರಾಜಿಗೆ ಆಸಕ್ತಿ ವಹಿಸಿದ ಕೇಂದ್ರದ ಕಾಂಗ್ರೆಸ್ ಸರ್ಕಾರವಾಗಲಿ ಅಥವಾ ಬಿಜೆಪಿ ಸರ್ಕಾರವಾಗಲಿ ತಾಲೂಕಿನ ಜನತೆಯ ಕುಡಿಯುವ ನೀರಿನ ಭವಣೆ ನೀಗಿಸುವಲ್ಲಿ ನಿರ್ಲಕ್ಷ್ಯ ವಹಿಸಿವೆ ಎಂದು ಆರೋಪಿಸಿದರು.
ರಾಜ್ಯದ ಜನತೆಯೆ ಸಂಕಷ್ಟ  ಅರಿತಿದ್ದೇನೆ, ಜೆಡಿಎಸ್ ಅಧಿಕಾರಕ್ಕೆ ಬಂದರೆ ರಾಷ್ಚ್ರೀಕೃತ ಬ್ಯಾಂಕ್ಗಳು ಸೇರಿದಂತೆ ಯಾವುದೇ ಬ್ಯಾಂಕ್ಗಳಲ್ಲಿನ ರೈತರ ಸಾಲ ಸಂಪೂರ್ಣ ಮನ್ನ ಮಾಡುವ ಭರವಸೆ ನೀಡಿದರು. ಕುಡಿಯುವ ನೀರಿನ ಅಭಾವ ಹಾಗೂ ಕೊಳವೆ ಬಾವಿಗಳಲ್ಲಿ ನೀರು ಸಿಗದ ಹಿನ್ನೆಲೆಯಲ್ಲಿ 65 ಸಾವಿರ ಕೋಟಿ ವೆಚ್ಚದಲ್ಲಿ ಚಿಕ್ಕಮಗಳೂರು, ಕೋಲಾರ, ತುಮಕೂರು ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಅನುಷ್ಠಾನ ಮಾಡುವುದಾಗಿ ತಿಳಿಸಿದರು.
ಪಕ್ಷದದಿಂದ ಸ್ವರ್ಧಿಸಿದ ಕೆ.ಎಂ.ತಿಮ್ಮರಾಯಪ್ಪ ಅವರು ಸರಳ ಸಜ್ಜನಿಕೆ ವ್ಯಕ್ತಿತ್ವ ಉಳ್ಳವರು. ಚುನಾವಣೆಯಲ್ಲಿ ಅವರನ್ನು ಗೆಲ್ಲಿಸುವ ಮೂಲಕ ತಮ್ಮ ಕೈ ಬಲಪಡಿಸಿ ಎಂದು ಮನವಿ ಮಾಡಿದರು. ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಮಾತನಾಡಿ ಜನಪರ ಸಮಸ್ಯೆ ನಿವಾರಣೆಗೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗುವ ಹಿನ್ನೆಲೆಯಲ್ಲಿ ಜೆಡಿಎಸ್ ಬೆಂಬಲಿಸುವ ಮೂಲಕ ಚುನಾವಣೆಯಲ್ಲಿ ತಮ್ಮನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು. ಪಕ್ಷದ ತಾಲೂಕು ಅಧ್ಯಕ್ಷ ಎನ್.ತಿಮ್ಮಾರೆಡ್ಡಿ, ಮುಖಂಡ ಆರ್.ಸಿ. ಅಂಜಿನಪ್ಪ, ಪ್ರಧಾನ ಕಾಯದರ್ಶಿ ಗೋವಿಂದಬಾಬು, ಕೆ.ಆರ್. ಸುರೇಶ್ ಸೇರಿದಂತೆ ಅನೇಕ ಮಂದಿ ಮುಖಂಡರಿದ್ದರು.
ಕಾರ್ಯಕ್ರಮಕ್ಕೆ ತಾಲೂಕಿನಿಂದ ಭಾರಿ ಸಂಖ್ಯೆಯಲ್ಲಿ  ಕಾರ್ಯಕರ್ತರು ಆಗಮಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.