ತುಮಕೂರು

'ಜನರಿಗೆ ಸ್ಪಂದಿಸುವ ರಾಜಣ್ಣರಿಗೆ ಮತ ನೀಡಿ'

Published On :

ಕ.ಪ್ರ. ವಾರ್ತೆ  ಮಧುಗಿರಿ  ಮೇ 2
ಕ್ಷೇತ್ರದಲ್ಲಿ ಎರಡು ಸಲ ಸೋತರೂ ಧೃತಿಗೆಡದೆ ಜನರ ದುಃಖ-ದುಮ್ಮಾನಗಳಿಗೆ ಸ್ಪಂದಿಸಿ ಕೆಲಸ ಮಾಡುವ ಗುಣ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ರಾಜಣ್ಣ ಅವರ ಗೆಲವು ಈ ಸಲ ನಿಶ್ಚಿತ ಎಂದು ವಿಧಾನ ಪರಿಷತ್ ಸದಸ್ಯ ಎಂ.ಆರ್.ಸೀತಾರಾಮು ಹೇಳಿದರು.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಎರಡು ಸಲ ಜೆಡಿಎಸ್‌ನಿಂದ ಗೆದ್ದವರು ಜನರ ಕಡೆ ತಿರುಗಿ ನೋಡದೆ ಇಲ್ಲಿಂದ ಕಾಲ್ಕಿತ್ತಿದ್ದಾರೆ. ಹಾಗಾಗಿ ಮತದಾರರು ರಾಜಣ್ಣನ ಗೆಲವಿಗೆ ಪಣ ತೊಟ್ಟಿದ್ದಾರೆ ಎಂದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ದುರಾಡಳಿತ ನೋಡಿ ಜನತೆ ಬೇಸತ್ತಿದ್ದಾರೆ. ಎಲ್ಲೆಲ್ಲೂ ಕಾಂಗ್ರೆಸ್ ಅಲೆ ಬೀಸಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಿಕ್ಕೆ ಬರುರುವುದ ಖಚಿತ. ಆದ ಕಾರಣ ಮಧುಗಿರಿ ವಿದಾನಸಭಾ ಕ್ಷೇತ್ರದ ಜನತೆ ನಮ್ಮ-ನಿಮ್ಮ ನಡುವೆ ಇರುವ ರಾಜಣ್ಣನವರಿಗೆ ತಮ್ಮ ಅಮೂಲ್ಯವಾದ ಮತ ನೀಡಿ ಅವರನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಪ್ರಗತಿಗೆ ಕಾರಣೀಭೂತರಾಗುವಂತೆ ಸಲಹೆ ನೀಡಿದರು. ಜಿಲ್ಲಾ ಬಲಿಜ ಸಂಘದ ಅಧ್ಯಕ್ಷ ರಾಮಚಂದ್ರಪ್ಪ, ತಾ.ಸಂಘದ ಅಧ್ಯಕ್ಷ ಎಂ.ಎಸ್.ಶಂಕರನಾರಾಯಣ, ಪುರಸಭೆ ಮಾಜಿ ಅಧ್ಯಕ್ಷ ಕೆ.ಪ್ರಕಾಶ್, ಸದಸ್ಯರಾದ ಗೋಪಿನಾಥ್, ಎನ್.ಗಂಗಣ್ಣ, ಶ್ರೀನಿವಾಸ್, ನಾರಾಯಣ, ಉಮೇಶ್, ರಮೇಶ್, ಮುಖಂಡ ಟಿ.ಎನ್.ಶ್ರೀರಾಮಯ್ಯ, ರಂಗನಾಥಬಾಬು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.