ಶಾಸಕ ಜಯಚಂದ್ರರಿಂದ ಕ್ಷೇತ್ರದಲ್ಲಿ 857 ಕೋಟಿ ಅಭಿವೃದ್ಧಿ
ಕ.ಪ್ರ. ವಾರ್ತೆ ಶಿರಾ ಮೇ 2
ವಿರೋಧ ಪಕ್ಷದಲ್ಲಿದ್ದರೂ ಶಾಸಕ ಟಿ.ಬಿ. ಜಯಚಂದ್ರ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ 857 ಕೋಟಿ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಮುಂದಿನ ಯೋಜನೆಗೆ ಜೀವ ತುಂಬಲು ಈ ಬಾರಿಯೂ ಕಾಂಗ್ರೆಸ್‌ಗೆ ಮತ ನೀಡಿ ಅಧಿಕಾರಕ್ಕೆ ತನ್ನಿ ಎಂದು ಆಂಧ್ರ ಪ್ರದೇಶದ ಕಂದಾಯ ಸಚಿವ ಎನ್. ರಘುವೀರ ರೆಡ್ಡಿ ಮನವಿ ಮಾಡಿದರು.
ಅವರು ತಾಲೂಕಿನ ಹುಲಿಕುಂಟೆ ಹೋಬಳಿಯ ಬರಗೂರು, ಹಾರೋಗೆರೆ, ದೊಡ್ಡಬಾಣಗೆರೆ, ಲಕ್ಕನಹಳ್ಳಿ, ಹುಲಿಕುಂಟೆ ಸೇರಿದಂತೆ ಇತರ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಟಿ.ಬಿ.ಜಯಚಂದ್ರರ ಪರ ಮತಯಾಚನೆ ಮಾಡಿ ಮಾತನಾಡಿದರು.
ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿಸುವುದು, ಹನಿ ನೀರಾವರಿಗೆ ಶೇ.100 ರಿಯಾಯಿತಿ, ಕಡಿಮೆ ಬಡ್ಡಿ ದರದಲ್ಲಿ ರೈತರಿಗೆ ಸಾಲ, ಕೈಗಾರಿಕೆ ಸ್ಥಾಪನೆಗೆ ನೆರವು ಸೇರಿದಂತೆ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನತೆಯ ಸರ್ವತೋಮುಖ ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ ಎಂದರು.
ಮತಯಾಚನೆ ಸಂದರ್ಭದಲ್ಲಿ ಗುಂಡಮಾಲೆ ತಿಪ್ಪೇಸ್ವಾಮಿ, ಸಂತೋಷ್ ಜಯಚಂದ್ರ, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಚಂಗಾವರ ಮಾರಣ್ಣ, ಎಪಿಎಂಸಿ ಅಧ್ಯಕ್ಷ ಶಶಿಧರ ಗೌಡ, ಕಾಂಗ್ರೆಸ್ ವಕ್ತಾರ ಡಿ.ಸಿ.ಅಶೋಕ್, ಬರಗೂರು ನಟರಾಜ್ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

